Gold Price Today: ಚಿನ್ನದ ಬೆಲೆ ಭರ್ಜರಿ 1,520 ರೂ. ಇಳಿಕೆ; ಬೆಳ್ಳಿ ದರ 5,000 ಕುಸಿತ! ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್
Gold Price Today Sep 24: ಚಿನ್ನಾಭರಣ ಪ್ರಿಯರಿಗೆ ಸೆಪ್ಟೆಂಬರ್ 24ರ ಗುರುವಾರ ಭರ್ಜರಿ ಗುಡ್‌ನ್ಯೂಸ್ ಸಿಕ್ಕಿದೆ. ಚಿನ್ನಾಭರಣದ ಬೆಲೆಯು ಭರ್ಜರಿ ಇಳಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಹೆಚ್ಚಳವಾಗಿದ್ದ ಚಿನ್ನದ ಬೆಲೆಯು ಇಂದು ಭರ್ಜರಿ ಇಳಿಕೆಯಾಗಿದೆ. ಈ ಮೂಲಕ ಚಿನ್ನ ಪ್ರಿಯರು ಸಂತೋಷಪಡುವ ಸುದ್ದಿ ಸಿಕ್ಕಂತಾಗಿದೆ. ಚಿನ್ನದ ಬೆಲೆಯು 1520 ರೂಪಾಯಿಯಿಂದ 14,000 ರೂಪಾಯಿ ಇಳಿಕೆಯಾಗಿದೆ. ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಯು ಇಳಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಶುದ್ಧ ಚಿನ್ನದ ಗ್ರಾಂ ಬೆಲೆಯು 15,268 ರೂಪಾಯಿ ಇದೆ. ಇನ್ನು ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 245 ರೂಪಾಯಿ ಇದೆ. ಬಂಗಾರದ ಬೆಲೆಯೊಂದಿಗೆ ಬೆಳ್ಳಿ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಲಿದೆ.
18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 11,451 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,14,510 ರೂಪಾಯಿ ಆಗಿದೆ. ಇನ್ನು 18 ಕ್ಯಾರೆಟ್ ಚಿನ್ನದ ಬೆಲೆಯು ಬುಧವಾರಕ್ಕೆ ಹೋಲಿಕೆ ಮಾಡಿದರೆ, ಒಂದು ಗ್ರಾಂನ ಮೇಲೆ 114 ರೂಪಾಯಿ ಹಾಗೂ 10 ಗ್ರಾಂನ ಮೇಲೆ 1,140 ರೂಪಾಯಿ ಕಡಿಮೆಯಾಗಿದೆ.

22 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂನ ಮೇಲೆ 13,995 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,39,950 ರೂ. ಆಗಿದೆ. 18 ಕ್ಯಾರೆಟ್‌ನಂತೆಯೇ 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಬುಧವಾರಕ್ಕಿಂತಲೂ ಕಡಿಮೆ ಆಗಿದೆ. 18 ಕ್ಯಾರೆಟ್‌ನ 22 ಕ್ಯಾರೆಟ್ ಚಿನ್ನದ ಬೆಲೆಯು 1ಗ್ರಾಂ ಮೇಲೆ 140 ರೂಪಾಯಿ ಹಾಗೂ 10 ಗ್ರಾಂನ ಮೇಲೆ 1,400 ರೂಪಾಯಿ ಭರ್ಜರಿ ಕಡಿಮೆಯಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ: 18 ಹಾಗೂ 22 ಕ್ಯಾರೆಟ್‌ನಂತೆಯೇ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂ ಬೆಲೆ 15,268 ರೂಪಾಯಿ ಆಗಿದೆ. ಇನ್ನು 10 ಗ್ರಾಂ ಚಿನ್ನದ ಬೆಲೆಯು 1,52,680 ರೂ. ಆಗಿದೆ. ಅಲ್ಲದೆ 24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 152 ರೂಪಾಯಿ ಹಾಗೂ 10 ಗ್ರಾಂನ ಮೇಲೆ 1,520 ರೂಪಾಯಿ ಕಡಿಮೆಯಾಗಿದೆ.
ಬೆಳ್ಳಿ ಬೆಲೆ ಎಷ್ಟಾಗಿದೆ ?
ಇನ್ನು ಚಿನ್ನದ ಬೆಲೆಯಂತೆಯೇ ಬೆಳ್ಳಿ ಬೆಲೆಯಲ್ಲೂ ಸಹ ಭರ್ಜರಿ ಇಳಿಕೆಯಾಗಿದೆ. ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 245 ರೂಪಾಯಿ ಹಾಗೂ ಒಂದು ಕೆ.ಜಿ ಬೆಳ್ಳಿ ಬೆಲೆಯು 2.45 ಲಕ್ಷ ರೂ. ಆಗಿದೆ. ಬೆಳ್ಳಿ ಬೆಲೆಯು ಪ್ರತಿ ಗ್ರಾಂನ ಮೇಲೆ 5 ರೂಪಾಯಿ ಹಾಗೂ ಒಂದು ಕೆ.ಜಿಯ ಮೇಲೆ 5,000 ರೂಪಾಯಿ ಕಡಿಮೆಯಾಗಿದೆ.
Gold Price Today Sep 24: ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಹೆಚ್ಚಳವಾಗುವ ಸಾಧ್ಯತೆ ?
ಚಿನ್ನ ಮತ್ತು ಬೆಳ್ಳಿ ಬೆಲೆಯು ತಾತ್ಕಾಲಿಕವಾಗಿ ಕಡಿಮೆಯಾಗಿದ್ದರೂ, ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಹೆಚ್ಚಳವಾಗುವ ಸಾಧ್ಯತೆ ಇದೆ. ಚಿನ್ನದ ಬೆಲೆಯು ಮುಂದಿನ ದಿನಗಳಲ್ಲಿ 10 ಗ್ರಾಂನ ಮೇಲೆ 3 ಲಕ್ಷಕ್ಕೂ ಹೆಚ್ಚು ರೂ. ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.


Click it and Unblock the Notifications
