Gold Rate: ವಾರ ಪೂರ್ತಿ ಚಿನ್ನದ ಬೆಲೆ ಇಳಿಕೆ: ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ?
Gold price August 17: ಕಳೆದ ಒಂದು ವಾರದ ಅವಧಿಯಲ್ಲಿ ಚಿನ್ನದ ಬೆಲೆಯಲ್ಲಿ ಸಾಕಷ್ಟು ಬದಲಾವಣೆಗಳು ಆಗಿವೆ. ಚಿನ್ನದ ಬೆಲೆಯು ಇಳಿಕೆಯ ಹಾದಿಯಲ್ಲಿ ಸಾಗಿದ್ದು ಚಿನ್ನ ಪ್ರಿಯರಿಗೆ ಸಂತೋಷವನ್ನುಂಟು ಮಾಡಿದೆ. ಕಳೆದ ಒಂದು ವಾರದಿಂದಲೂ ಚಿನ್ನದ ಬೆಲೆಯು ನಿರಂತರವಾಗಿ ಇಳಿಕೆಯಾಗುತ್ತಿದೆ. ದೇಶದಾದ್ಯಂತ ಚಿನ್ನದ ಬೆಲೆ ಇಳಿಕೆಯ ಹಾದಿಯಲ್ಲಿದ್ದು ವಾರಾಂತ್ಯದಲ್ಲೂ ಚಿನ್ನದ ಬೆಲೆ ಇಳಿಕೆಯ ಹಾದಿಯಲ್ಲಿದೆ. ಆಗಸ್ಟ್ 17ರ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ಎನ್ನುವ ನಿಖರವಾದ ವಿವರ ಇಲ್ಲಿದೆ.
ವಿವಿಧ ಕಾರಣಗಳಿಗೆ ಆಗಸ್ಟ್ ತಿಂಗಳಿನಲ್ಲಿ ಚಿನ್ನದ ಬೆಲೆ ನಿರಂತರವಾಗಿ ಇಳಿಕೆ ಆಗಿದೆ. ಅದರಲ್ಲಿ ಮುಖ್ಯವಾಗಿ ಅಮೆರಿಕಾ ಕೆಲವೊಂದು ಆರ್ಥಿಕ ನಿರ್ಬಂಧ ಅಥವಾ ತೆರಿಗೆ ವಿಚಾರದಲ್ಲಿ ರಾಜಿ ಆಗಿರುವುದು ಹಾಗೂ ರಷ್ಯಾ - ಚೀನಾ ಮತ್ತು ಭಾರತದ ನಡುವೆ ಒಗ್ಗಟ್ಟು ಮೂಡುತ್ತಿರುವುದು. ಈ ಮೂರು ದೈತ್ಯ ಆರ್ಥಿಕ ರಾಷ್ಟ್ರಗಳು ಒಂದಾಗುತ್ತಿರುವುದು ಏಷ್ಯಾದಲ್ಲಿ ಹೊಸ ಆರ್ಥಿಕ ಸಂಚಲನವನ್ನೇ ಸೃಷ್ಟಿ ಮಾಡಿದೆ ಎಂದು ಹೇಳಬಹುದು. ಭಾರತ ಮತ್ತು ಚೀನಾದ ನಡುವೆ ಬಹು ವರ್ಷಗಳಿಂದ ಕಗ್ಗಂಟಾಗಿದ್ದ ಗಡಿ ವಿವಾದ ಬಗ್ಗೆ ಈಗ ಚರ್ಚೆ ನಡೆದಿದೆ. ಇದು ಇತ್ಯಾರ್ಥವಾದರೆ ಎರಡೂ ದೇಶಗಳ ನಡುವೆ ಆರ್ಥಿಕ ಚಟುವಟಿಕೆ ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದೆ.

18 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 18 ಕ್ಯಾರೆಟ್ ಚಿನ್ನದ ಬೆಲೆಯು ವಾರಾಂತ್ಯದಲ್ಲಿ ಯಥಾಸ್ಥಿತಿ ಮುಂದುವರಿದಿದ್ದು. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಇಳಿಕೆಯ ಹಾದಿಯಲ್ಲಿದೆ. ಪ್ರತಿ ಗ್ರಾಂ 18 ಕ್ಯಾರೆಟ್ ಚಿನ್ನದ ಬೆಲೆಯು 7,589 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 75,890 ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ ಯಾವುದೇ ವ್ಯತ್ಯಾಸವಾಗಿಲ್ಲ.
22 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್ ಚಿನ್ನದ ಬೆಲೆಯು ಪ್ರತಿ ಗ್ರಾಂ 9,275 ರೂಪಾಯಿ ಆಗಿದೆ. 10 ಗ್ರಾಂಗೆ 92,750 ರೂಪಾಯಿ ಆಗಿದೆ. ವಾರಾಂತ್ಯದಲ್ಲಿ ಯಥಾಸ್ಥಿತಿ ಮುಂದುವರಿದಿದೆ.
24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್ ಚಿನ್ನ ಪ್ರಿಯರಿಗೂ ಸಂತೋಷ ಮುಂದುವರಿದಿದೆ. 24 ಕ್ಯಾರೆಟ್ ಚಿನ್ನದ ಬೆಲೆಯು ವಾರಾಂತ್ಯದಲ್ಲಿ ಪ್ರತಿ ಗ್ರಾಂಗೆ 10,118 ರೂಪಾಯಿ ಹಾಗೂ 10 ಗ್ರಾಂಗೆ 1,01,180 ರೂಪಾಯಿ ಆಗಿದೆ.
ಬೆಳ್ಳಿ ಬೆಲೆ: ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 116 ರೂಪಾಯಿ ಹಾಗೂ ಪ್ರತಿ ಕೆ.ಜಿಗೆ 1,16,200 ರೂಪಾಯಿ ಆಗಿದೆ. ಒಟ್ಟಾರೆ ಚಿನ್ನ ಮತ್ತು ಬೆಳ್ಳಿ ಬೆಲೆಯು ನಿರಂತರವಾಗಿ ಇಳಿಕೆಯ ಹಾದಿಯಲ್ಲಿದೆ.
ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳಿದ್ದು ಚಿನ್ನದ ಬೆಲೆಯು ಇನ್ನಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಸಾಲು ಸಾಲು ವಿವಿಧ ಹಬ್ಬಗಳು ಹಾಗೂ ಹೊಸ ವರ್ಷಕ್ಕೆ ಇನ್ನು ಕೇವಲ ಮೂರುವರೆ ತಿಂಗಳು ಮಾತ್ರ ಬಾಕಿ ಉಳಿದಿದೆ. ಹೀಗಾಗಿ ಚಿನ್ನ ಪ್ರಿಯರಲ್ಲಿ ಹೊಸ ನಿರೀಕ್ಷೆ ಮೂಡಿದೆ.












Click it and Unblock the Notifications