Gold Prices Aug 17: ಚಿನ್ನ ಪ್ರಿಯರಿಗೆ ಭಾರೀ ಶಾಕ್: ಬೆಳ್ಳಿ ಬೆಲೆಯಲ್ಲಿ ಮಾತ್ರ ಭರ್ಜರಿ ಇಳಿಕೆ!
Gold Prices Aug 17: ಚಿನ್ನ ಪ್ರಿಯರಿಗೆ ಶ್ರಾವಣ ಮಾಸದಲ್ಲಿ ಶಾಕ್ ಮುಂದುವರಿದಿದೆ. ಕಳೆದ ಮೂರು ದಿನಗಳಿಂದಲೂ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿತ್ತು. ಆದರೆ, ಆಗಸ್ಟ್ 17ರ ಸೋಮವಾರ ಚಿನ್ನದ ಬೆಲೆಯು ಭಾರೀ ಹೆಚ್ಚಳವಾಗಿದೆ. ಆದರೆ ಬೆಳ್ಳಿ ಬೆಲೆಯು ಇಳಿಕೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಳಿತವಾಗುತ್ತಿದೆ. ಅಷಾಢ ಮುಕ್ತಾಯವಾಗಿ ಶ್ರಾವಣ ಮಾಸ ಪ್ರಾರಂಭವಾಗಿದ್ದು, ಶುಭ ಕಾರ್ಯಕ್ರಮಗಳು ಪ್ರಾರಂಭವಾಗುತ್ತಿದೆ. ಆದರೆ ಇದೇ ಸಂದರ್ಭದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯು ಭಾರೀ ಹೆಚ್ಚಳವಾಗುತ್ತಿದ್ದು, ಬಂಗಾರ ಪ್ರಿಯರಿಗೆ ಆತಂಕವನ್ನುಂಟು ಮಾಡಿದೆ. ಆಗಸ್ಟ್ 17ರ ಸೋಮವಾರ 18, 22 ಹಾಗೂ 24 ಕ್ಯಾರೆಟ್ ಚಿನ್ನದ ಎಷ್ಟಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
18 ಕ್ಯಾರೆಟ್ ಚಿನ್ನದ ಬೆಲೆ: ವಿವಿಧ ಗ್ರಾಂ ಚಿನ್ನದ ಬೆಲೆಯು ಆಗಸ್ಟ್ 17ರ ಸೋಮವಾರ ಭಾರೀ ಹೆಚ್ಚಳವಾಗಿದೆ. 18 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 11,676 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,16,760 ರೂಪಾಯಿ ಆಗಿದೆ. ವಾರಂತ್ಯಕ್ಕೆ ಹೋಲಿಕೆ ಮಾಡಿದರೆ ಚಿನ್ನದ ಬೆಲೆಯು ಹೆಚ್ಚಳವಾಗಿದೆ. 18 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 41 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 410 ರೂಪಾಯಿ ಹೆಚ್ಚಳವಾಗಿದೆ.

22 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್‌ನಂತೆಯೇ 22 ಕ್ಯಾರೆಟ್ ಚಿನ್ನದ ಬೆಲೆಯೂ ಸಹ ಹೆಚ್ಚಳವಾಗಿದೆ. 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 14,270 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,42,700 ರೂಪಾಯಿ ಆಗಿದೆ. 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಮೇಲೆ 50 ರೂಪಾಯಿ ಹಾಗೂ 10 ಗ್ರಾಂನ ಮೇಲೆ 500 ರೂಪಾಯಿ ಹೆಚ್ಚಳವಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ: 18 ಹಾಗೂ 22 ಕ್ಯಾರೆಟ್‌ನಂತೆಯೇ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಹೆಚ್ಚಳವಾಗಿದೆ. 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 15,566 ರೂಪಾಯಿ ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು 1,55,660 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂನ ಮೇಲೆ 53 ರೂಪಾಯಿ ಹಾಗೂ 10 ಗ್ರಾಂನ ಮೇಲೆ 530 ರೂಪಾಯಿ ಹೆಚ್ಚಳವಾಗಿದೆ.
Gold Prices Aug 17: ಬೆಳ್ಳಿ ಬೆಲೆ ಎಷ್ಟಿದೆ ?
ಇನ್ನು ಚಿನ್ನದ ಬೆಲೆಯು ಹೆಚ್ಚಳವಾಗಿದ್ದರೂ, ಬೆಳ್ಳಿ ಬೆಲೆಯಲ್ಲಿ ದೊಡ್ಡ ವ್ಯತ್ಯಾಸವಾಗಿಲ್ಲ. ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 250 ರೂಪಾಯಿ ಆಗಿದ್ದು, ಒಂದು ಕೆ.ಜಿ ಬೆಳ್ಳಿ ಬೆಲೆಯು 2.50 ಲಕ್ಷ ರೂ ಆಗಿದೆ.
Gold Prices Aug 17: ಚಿನ್ನದ ಬೆಲೆ ಹೆಚ್ಚಳಕ್ಕೆ ಕಾರಣವೇನು ?
ಹಣದುಬ್ಬರ ಹಾಗೂ ಚಿನ್ನದ ಮೇಲೆ ಹೂಡಿಕೆ ಹೆಚ್ಚಳ, ಬಂಗಾರವನ್ನು ಖರೀದಿ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿರುವುದು ಸೇರಿದಂತೆ ಹಲವು ಕಾರಣಗಳಿಗೆ ಚಿನ್ನದ ಬೆಲೆಯು ನಿರಂತರವಾಗಿ ಹೆಚ್ಚಳವಾಗುತ್ತಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯು ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯೂ ಸಹ ಇದೆ.


Click it and Unblock the Notifications
