Gold Prices Aug 4: ಚಿನ್ನದ ಬೆಲೆ ಬಂಪರ್ ಇಳಿಕೆ; ಚಿನ್ನ - ಬೆಳ್ಳಿ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್, ಬಂಗಾರ ಬೆಲೆ ಇಳಿಕೆ ಯಾಕೆ
Gold Prices Aug 4: ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಏರಿಳಿತ ಮುಂದುವರಿದಿದೆ. ಆದರೆ ಕಳೆದ ಒಂದು ವಾರದಿಂದಲೂ ಚಿನ್ನದ ಬೆಲೆ ಭಾರೀ ಇಳಿಕೆಯಾಗಿದೆ. ಚಿನ್ನ ಮತ್ತು ಬೆಳ್ಳಿಯ ಮೇಲೆ ಹೂಡಿಕೆ ಮಾಡುವವರ ಸಂಖ್ಯೆಯು ದಿನದಿಂದ ದಿನಕ್ಕೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವುದು ಸೇರಿದಂತೆ ವಿವಿಧ ಕಾರಣಗಳಿಗೆ ಬೆಲೆ ಏರಿಕೆಯಾಗುತ್ತಿದೆ. ಚಿನ್ನದ ಮೇಲೆ ಹೂಡಿಕೆ ಹಾಗೂ ಖರೀದಿ ಎರಡೂ ಸಹ ಹೆಚ್ಚಳವಾಗಿದೆ. ಮಧ್ಯಪ್ರಾಚ್ಯದಲ್ಲಿ ನಿಲ್ಲದ ಸಂಘರ್ಷ.
ವಿಶ್ವದ ಪ್ರಮುಖ ರಾಷ್ಟ್ರಗಳ ನಡುವೆ ವೈಮನಸ್ಸು ಹಾಗೂ ಸಂಘರ್ಷ, ಆರ್ಥಿಕ ಸಂಕಷ್ಟ ಹಾಗೂ ಕೆಲವೊಂದು ರಾಜಕೀಯ, ಆರ್ಥಿಕ ಬದಲಾವಣೆಗಳು ಸಹ ಚಿನ್ನದ ಬೆಲೆಯು ನಿರಂತರವಾಗಿ ಹೆಚ್ಚಳವಾಗುವುದಕ್ಕೆ ಕಾರಣವಾಗಿದೆ. ಕಳೆದ ಒಂದು ವಾರದಿಂದಲೂ ನಿರಂತರವಾಗಿ ಚಿನ್ನದ ಬೆಲೆಯು ಏರಿಕೆಯಾಗುತ್ತಲ್ಲೇ ಇದೆ. ನೆನ್ನೆ ಚಿನ್ನದ ಬೆಲೆ ಇಳಿಕೆಯಾಗಿತ್ತು. ಇಂದೂ ಸಹ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.

ಕಳೆದ ಎರಡು ತಿಂಗಳ ಅವಧಿಯಲ್ಲೇ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ವ್ಯತ್ಯಾಸವಾಗಿದೆ. ಕಳೆದ ಎರಡು ತಿಂಗಳಿನಿಂದ ಚಿನ್ನದ ಬೆಲೆಯು ಸಾಮಾನ್ಯವಾಗಿ ಏರಿಳಿತವಾಗಿದೆ. ಕಳೆದ ಎರಡು ಮೂರು ವರ್ಷಗಳ ಹಿಂದಷ್ಟೇ 22 ಕ್ಯಾರೆಟ್ ಚಿನ್ನದ ಬೆಲೆಯು 50,000ರಿಂದ 55,000 ಸಾವಿರ ರೂಪಾಯಿಗೆ ಸಿಗುತ್ತಿತ್ತು. ಆದರೆ ಈಗ ಅದೇ ಚಿನ್ನದ ಬೆಲೆಯು ದುಪ್ಪಟ್ಟಾಗಿದೆ. ಆಗಸ್ಟ್ 4ರ ಮಂಗಳವಾರ 18, 22 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 10,800 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,08,000 ರೂ. ಆಗಿದೆ. ಆಗಸ್ಟ್ 03ಕ್ಕೆ ಹೋಲಿಕೆ ಮಾಡಿದರೆ 18 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂನ ಮೇಲೆ 16 ರೂಪಾಯಿ ಹಾಗೂ 10 ಗ್ರಾಂನ ಮೇಲೆ 160 ರೂಪಾಯಿ ಕಡಿಮೆಯಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್‌ನಂತೆಯೇ 22 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಳಿಕೆಯಾಗಿದೆ. 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 13,200 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,32,000 ರೂ. ಆಗಿದೆ. ಆಗಸ್ಟ್4ರ ಸೋಮವಾರ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು 200 ರೂಪಾಯಿ ಕಡಿಮೆಯಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 14,400 ರೂಪಾಯಿ ಆಗಿದೆ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,44,000 ರೂ. ಆಗಿದೆ. ಆಗಸ್ಟ್ 3ರ ಸೋಮವಾರಕ್ಕೆ ಹೋಲಿಕೆ ಮಾಡಿದರೆ, 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 22 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 220 ರೂಪಾಯಿ ಕಡಿಮೆಯಾಗಿದೆ.
Gold Prices Aug 4: ಬೆಳ್ಳಿಯ ಬೆಲೆ ಎಷ್ಟಾಗಿದೆ ?
ಇನ್ನು ಚಿನ್ನದೊಂದಿಗೆ ಬೆಳ್ಳಿ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. ಬೆಳ್ಳಿ ಬೆಲೆಯು 1 ಗ್ರಾಂಗೆ 235 ರೂಪಾಯಿ ಆಗಿದೆ. ಅಲ್ಲದೆ ಬೆಳ್ಳಿ ಬೆಲೆಯು ಒಂದು ಕೆಜಿಗೆ 2,35,000 ರೂ. ಆಗಿದೆ.


Click it and Unblock the Notifications
