Gold Price Feb 20: ಚಿನ್ನದ ಬೆಲೆ ಮತ್ತೆ ಇಳಿಕೆ; ಬೆಳ್ಳಿ ಯಥಾಸ್ಥಿತಿ, ಇಂದಿನ ಚಿನ್ನ - ಬೆಳ್ಳಿ ಬೆಲೆ ವಿವರ
Gold Price Feb 20: ಚಿನ್ನದ ಬೆಲೆ ಶುಕ್ರವಾರ ಇಳಿಕೆಯಾಗಿದ್ದು, ಚಿನ್ನದ ಬೆಲೆ ಕಡಿಮೆ ಆಗುವುದು ಮುಂದುವರಿದಿದೆ. ಸತತ ನಾಲ್ಕು ದಿನಗಳಿಂದ ಕಡಿಮೆಯಾಗಿದ್ದ ಚಿನ್ನದ ಬೆಲೆಯು ಗುರುವಾರ ಹೆಚ್ಚಳವಾಗಿತ್ತು. ಇದೀಗ ಶುಕ್ರವಾರ ಮತ್ತೆ ಚಿನ್ನದ ಬೆಲೆ ಇಳಿಕೆಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಫೆಬ್ರವರಿ 20ರಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎನ್ನುವ ವಿವರ ಇಲ್ಲಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆಯ ಏರಿಳಿತ ಮುಂದುವರಿದಿದ್ದರೂ, ನಿರಂತರವಾಗಿ ಬೆಲೆ ಇಳಿಕೆಯಾಗುತ್ತಿದೆ. ಇದು ಬಂಗಾರ ಮತ್ತು ಬೆಳ್ಳಿ ಪ್ರಿಯರಿಗೆ ಸಂತೋಷವನ್ನುಂಟು ಮಾಡಿದೆ. ಗುರುವಾರಕ್ಕೆ ಹೋಲಿಕೆ ಮಾಡಿದರೆ, ಶುಕ್ರವಾರದಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಎನ್ನುವುದರ ಸಂಪೂರ್ಣ ವಿವರ ಇಲ್ಲಿದೆ.

24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್ ಚಿನ್ನದ ಬೆಲೆಯು ಭರ್ಜರಿ ಇಳಿಕೆಯಾಗಿದೆ. 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 15,617 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,56,170 ರೂ. ಆಗಿದೆ. ಗುರುವಾರ ಫೆಬ್ರವರಿ 20ಕ್ಕೆ ಹೋಲಿಕೆ ಮಾಡಿದರೆ 1 ಗ್ರಾಂ ಚಿನ್ನದ ಬೆಲೆಯು 32 ರೂಪಾಯಿ ಹಾಗೂ 10 ಗ್ರಾಂನ ಮೇಲೆ 320 ರೂಪಾಯಿ ಇಳಿಕೆಯಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್ ಚಿನ್ನದ ಬೆಲೆಯಂತೆ 22 ಕ್ಯಾರೆಟ್ ಹಾಗೂ 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 14,315 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,43,150 ರೂ. ಆಗಿದೆ. ಗುರುವಾರಕ್ಕೆ ಹೋಲಿಕೆ ಮಾಡಿದರೆ 1 ಗ್ರಾಂ ಚಿನ್ನದ ಬೆಲೆಯು 30 ರೂಪಾಯಿ ಹಾಗೂ 10 ಗ್ರಾಂನ ಬೆಲೆಯು 300 ರೂಪಾಯಿ ಕಡಿಮೆಯಾಗಿದೆ.
18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 11,713 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,17,130 ರೂ. ಆಗಿದೆ. ಫೆಬ್ರವರಿ 19ಕ್ಕೆ ಹೋಲಿಕೆ ಮಾಡಿದರೆ 1 ಗ್ರಾಂ ಚಿನ್ನದ ಬೆಲೆಯು 24 ರೂಪಾಯಿ ಹಾಗೂ 10 ಗ್ರಾಂನ ಮೇಲೆ 240 ರೂಪಾಯಿ ಕಡಿಮೆಯಾಗಿದೆ.
ಬೆಳ್ಳಿ ಬೆಲೆ ಎಷ್ಟಾಗಿದೆ ?
ಇನ್ನು ಬೆಳ್ಳಿ ಬೆಲೆಯು ಗುರುವಾರ ಭರ್ಜರಿ ಹೆಚ್ಚಳವಾಗಿತ್ತು. ಆದರೆ ಫೆಬ್ರವರಿ 20ರಂದು ಬೆಳ್ಳಿ ಬೆಲೆಯು ಯಥಾಸ್ಥಿತಿ ಮುಂದುವರಿದಿದೆ. 1 ಗ್ರಾಂ ಬೆಳ್ಳಿ ಬೆಲೆಯು 270 ರೂಪಾಯಿ ಆಗಿದೆ. ಒಂದು ಕೆ.ಜಿ ಬೆಳ್ಳಿ ಬೆಲೆಯು 2,70,000 ರೂ. ಆಗಿದೆ. ಚಿನ್ನದ ಬೆಲೆ ಇಳಿಕೆಯಾಗಿದ್ದರೂ ಬೆಳ್ಳಿಯ ಬೆಲೆಯು ಯಥಾಸ್ಥಿತಿ ಇದೆ.
ದೀರ್ಘಕಾಲದ ಅವಧಿಯಲ್ಲಿ ಚಿನ್ನದ ಬೆಲೆಯು ಲಾಭ ತರಲಿದೆ ಎಂದು ನಿರೀಕ್ಷಿಸಲಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ವಿಪರೀತವಾದ ಏರಿಳಿತ ಕಾಣುತ್ತಿದೆ. ಆದರೆ, ಕಳೆದ ಒಂದು ವಾರದಿಂದಲೂ ಚಿನ್ನದ ಬೆಲೆ ಇಳಿಕೆಯಾಗಿರುವುದು ಬಂಗಾರ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ.












Click it and Unblock the Notifications