Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್
Gold Rate April 7: ಚಿನ್ನದ ಬೆಲೆಯು ನಿರಂತರವಾಗಿ ಇಳಿಕೆಯಾಗುತ್ತಿದ್ದು ಬಂಗಾರ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ. ಕಳೆದ ಮೂರು ದಿನಗಳಿಂದಲೂ ಚಿನ್ನದ ಬೆಲೆಯು ಭರ್ಜರಿ ಇಳಿಕೆಯಾಗುತ್ತಿದ್ದು, ಏಪ್ರಿಲ್ 7ರಂದು ಸಹ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ. ಏಪ್ರಿಲ್ 07ರಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್ ಚಿನ್ನದ ಬೆಲೆಯು ಏಪ್ರಿಲ್ 7ರಂದು 1 ಗ್ರಾಂಗೆ 14,984 ರೂ. ಆಗಿದೆ. ಇನ್ನು 10 ಗ್ರಾಂ ಚಿನ್ನದ ಬೆಲೆಯು 1,49,840 ರೂ. ಆಗಿದೆ. 24 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆಯು 82 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 820 ರೂಪಾಯಿ ಕಡಿಮೆಯಾಗಿದೆ.

22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 13,735 ರೂ. ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,37,350 ರೂ. ಆಗಿದೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ 22 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 75 ರೂಪಾಯಿ ಹಾಗೂ 10 ಗ್ರಾಂನ ಮೇಲೆ 750 ರೂಪಾಯಿ ಕಡಿಮೆಯಾಗಿದೆ.
18 ಕ್ಯಾರೆಟ್ ಚಿನ್ನದ ಬೆಲೆ: 22 ಹಾಗೂ 22 ಕ್ಯಾರೆಟ್ನಂತೆಯೇ 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. 18 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆಯು 11,238 ರೂ. ಹಾಗೂ 10 ಗ್ರಾಂಗೆ 1,12,380 ರೂ. ಆಗಿದೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ 1 ಗ್ರಾಂ ಚಿನ್ನದ ಮೇಲೆ 61 ರೂಪಾಯಿ ಹಾಗೂ 10 ಗ್ರಾಂನ ಮೇಲೆ 610 ರೂಪಾಯಿ ಕಡಿಮೆಯಾಗಿದೆ.
ಬೆಳ್ಳಿ ಬೆಲೆ ಹೇಗಿದೆ ?
ಇನ್ನು ಚಿನ್ನದೊಂದಿಗೆ ಬೆಳ್ಳಿ ಬೆಲೆಯಲ್ಲೂ ಹೆಚ್ಚಳವಾಗಿಲ್ಲ. ಬೆಳ್ಳಿ ಬೆಲೆಯು ಕಳೆದ ಮೂರು ದಿನಗಳಿಂದಲೂ ಯಥಾಸ್ಥಿತಿ ಇದೆ. ಬೆಳ್ಳಿ ಬೆಲೆಯು 1 ಗ್ರಾಂಗೆ 250 ರೂಪಾಯಿ ಹಾಗೂ ಒಂದು ಕೆ.ಜಿ ಬೆಳ್ಳಿ ಬೆಲೆ 2.50 ಲಕ್ಷ ರೂ. ಆಗಿದೆ. ಈ ಮೂಲಕ ಚಿನ್ನ ಮತ್ತು ಬೆಳ್ಳಿ ಪ್ರಿಯರಲ್ಲಿ ಸಂತೋಷವುಂಟಾಗಿದೆ. ನಿರಂತರವಾಗಿ ಚಿನ್ನ ಮತ್ತು ಬೆಳ್ಳಿ ಬೆಲೆಯು ಇಳಿಕೆಯಾಗುತ್ತಿರುವುದು ಹಾಗೂ ಅಕ್ಷಯ ತೃತೀಯ ಸಮೀಪಿಸುತ್ತಿರುವುದು ಬಂಗಾರ ಪ್ರಿಯರಿಗೆ ಖುಷಿ ನೀಡಿದೆ.
ಯುದ್ಧದ ನಡುವೆಯೂ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆಯಾಗಿದೆ. ಅಮೆರಿಕ, ಇಸ್ರೇಲ್ Vs ಇರಾನ್ ನಡುವಿನ ಯುದ್ಧವು ಐದನೇ ವಾರಕ್ಕೆ ಕಾಲಿರಿಸಿದೆ. ಇಷ್ಟು ದಿನಗಳ ಕಾಲ ಯುದ್ಧ ಮುಂದುವರಿದಿರುವುದು ಹಲವು ವಿಷಯಗಳ ಮೇಲೆ ಪರಿಣಾಮ ಬೀರಿದೆ. ಆದರೆ ಯುದ್ಧ ಪ್ರಾರಂಭವಾದ ಮೇಲೆ ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಳವಾಗಬಹುದು ಎಂದು ನಿರೀಕ್ಷೆ ಮಾಡಲಾಗಿತ್ತು. ಪ್ರಾರಂಭದ ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಳವಾದರೂ, ಇದೀಗ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆಯಾಗುತ್ತಿದೆ.
-
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ












Click it and Unblock the Notifications