Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ
Gold Rate April 9: ಚಿನ್ನ ಮತ್ತು ಬೆಳ್ಳಿ ಪ್ರಿಯರಿಗೆ ಗುರುವಾರ ಸಂತೋಷದ ದಿನವಾಗಿದೆ. ಕಳೆದ ಎರಡು ದಿನಗಳಿಂದಲೂ ಚಿನ್ನ ಮತ್ತು ಬೆಳ್ಳಿಯ ಬೆಲೆಯು ಹೆಚ್ಚಾಗುತ್ತಿತ್ತು. ಇದೀಗ ಗುರುವಾರ ಬಂಗಾರ ಮತ್ತು ಬೆಳ್ಳಿ ಬೆಲೆಯು ಭರ್ಜರಿ ಇಳಿಕೆಯಾಗಿದೆ. ಇದು ಬಂಗಾರ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ. ಏಪ್ರಿಲ್ 9ರ ಗುರುವಾರ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಾಗಿದೆ ಎನ್ನುವ ಸಂಪೂರ್ಣ ಹಾಗೂ ನಿಖರವಾದ ವಿವರ ಇಲ್ಲಿದೆ.
24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್ನ ಚಿನ್ನದ ಬೆಲೆಯು ಗುರುವಾರ ಭರ್ಜರಿ ಇಳಿಕೆಯಾಗಿದೆ. 24 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆಯು 15,148 ರೂಪಾಯಿ, 10 ಗ್ರಾಂ ಚಿನ್ನದ ಬೆಲೆಯು 1,51,480 ರೂ. ಆಗಿದೆ. ಬುಧವಾರಕ್ಕೆ ಹೋಲಿಕೆ ಮಾಡಿದರೆ 24 ಕ್ಯಾರೆಟ್ನ 1 ಗ್ರಾಂನ ಚಿನ್ನದ ಬೆಲೆಯು 234 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 2,340 ರೂಪಾಯಿ ಕಡಿಮೆಯಾಗಿದೆ.

22 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆಯು 13,885 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,38,850 ರೂ. ಆಗಿದೆ. ಏಪ್ರಿಲ್ 8ರ ಬುಧವಾರಕ್ಕೆ ಹೋಲಿಕೆ ಮಾಡಿದರೆ 22 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆಯು 215 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 2,150 ರೂಪಾಯಿ ಕಡಿಮೆಯಾಗಿದೆ.
18 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 24 ಹಾಗೂ 22 ಕ್ಯಾರೆಟ್ನಂತೆಯೇ 18 ಕ್ಯಾರೆಟ್ನ ಚಿನ್ನದ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. 18 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆಯು 11,361 ರೂ. ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,13,610 ರೂ. ಆಗಿದೆ. 18 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆಯು 176 ರೂಪಾಯಿ ಹಾಗೂ 10 ಗ್ರಾಂನ ಮೇಲೆ 1,760 ರೂಪಾಯಿ ಭರ್ಜರಿ ಕಡಿಮೆಯಾಗಿದೆ. ಇನ್ನು ಚಿನ್ನದಂತೆಯೇ ಬೆಳ್ಳಿಯ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ.
ಬೆಳ್ಳಿ ಬೆಲೆಯಲ್ಲೂ ಭರ್ಜರಿ ಇಳಿಕೆ
ಇನ್ನು ಬೆಳ್ಳಿ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. ಬೆಳ್ಳಿಯ ಬೆಲೆಯು ಪ್ರತಿ ಗ್ರಾಂಗೆ 255 ರೂಪಾಯಿ ಆಗಿದೆ. ಒಂದು ಕೆ.ಜಿ ಬೆಳ್ಳಿ ಬೆಲೆಯು 2.55 ಲಕ್ಷ ರೂ. ಆಗಿದೆ. ಏಪ್ರಿಲ್ 8ರ ಬುಧವಾರಕ್ಕೆ ಹೋಲಿಕೆ ಮಾಡಿದರೆ ಒಂದು ಗ್ರಾಂ ಬೆಳ್ಳಿ ಬೆಲೆಯು 5 ರೂಪಾಯಿ ಹಾಗೂ ಒಂದು ಕೆ.ಜಿ ಬೆಳ್ಳಿ ಬೆಲೆಯು 5,000 ಸಾವಿರ ರೂಪಾಯಿ ಭರ್ಜರಿ ಇಳಿಕೆಯಾಗಿದೆ. ಮಂಗಳವಾರಕ್ಕೆ ಹೋಲಿಕೆ ಮಾಡಿದರೆ ಬುಧವಾರ ಚಿನ್ನ ಮತ್ತು ಬೆಳ್ಳಿ ಬೆಲೆಯು ಹೆಚ್ಚಳವಾಗಿತ್ತು.
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ವ್ಯತ್ಯಾಸವೇಕೆ ?
ಚಿನ್ನದ ಬೆಲೆಯಲ್ಲಿ ಸ್ಥಿರತೆ ಮೂಡುತ್ತಿದೆ ಎನ್ನುವಾಗಲೇ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಪ್ರಾರಂಭವಾಗಿದೆ. ಬುಧವಾರ ಇರಾನ್ - ಅಮೆರಿಕ, ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧಕ್ಕೆ ಸಂಬಂಧಿಸಿದಂತೆ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಮೇಲೆ ಚಿನ್ನದ ಬೆಲೆಯಲ್ಲಿ ಸ್ಥಿರತೆ ಮೂಡಿತ್ತು. ನೆನ್ನೆ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆಯಾಗಿತ್ತು. ಆದರೆ ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮಾಡಿರುವುದರಿಂದ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮುಚ್ಚಿದೆ. ಹೀಗಾಗಿ ಮತ್ತೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ವ್ಯತ್ಯಾಸವಾಗುತ್ತಿದೆ ಎಂದು ಅಂದಾಜಿಸಲಾಗಿದೆ.
-
Sensex: ಇರಾನ್ ಕದನವಿರಾಮ ಸಂಭ್ರಮಿಸಿದ ಷೇರುಪೇಟೆ: ಸೂಚ್ಯಂಕಗಳು ಮೇಲ್ಮುಖ -
ಇರಾನ್-ಅಮೆರಿಕ ಯುದ್ಧದಲ್ಲಿ ಶರಣಾಗಿದ್ದು ಪಾಕಿಸ್ತಾನ: ಕೃಷ್ಣಭಟ್ ಬರಹ -
Middle East War: ಮಧ್ಯಪ್ರಾಚ್ಯ ಯುದ್ಧ: ಎಂಥಾ ನಾಚಿಕೆಗೇಡು, ಒಳ್ಳೆಯವರಿಗಿದು ಕಾಲವಲ್ಲ: ಎಂದು ನಟ ಕಿಶೋರ್ ಕುಮಾರ್ -
Iran Ceasefire: 2 ವಾರಗಳ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ ಇರಾನ್; ಶಾಶ್ವತ ಕದನ ವಿರಾಮದ ಬಗ್ಗೆ ಹೇಳಿದ್ದೇನು -
Iran-US-Israel War: ಸುದ್ದಿ ವಾಹಿನಿಗಳ TRP ಸ್ಥಗಿತ ಆದೇಶವನ್ನು ಮತ್ತೆ 4 ವಾರ ವಿಸ್ತರಿಸಿದ ಕೇಂದ್ರ -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
Donald Trump: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಕಳಪೆ ಕೆಲಸ ಮಾಡಿದೆ: ಡೊನಾಲ್ಡ್ ಟ್ರಂಪ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್












Click it and Unblock the Notifications