Gold Rate Feb 5 2026: ಚಿನ್ನ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್: ಚಿನ್ನದ ಬೆಲೆ 5,020 ರೂ. ಕಡಿಮೆ
Gold Rate Feb 5 2026: ಚಿನ್ನ ಪ್ರಿಯರಿಗೆ ಬಹಳ ದಿನಗಳ ನಂತರ ಸಿಹಿ ಸುದ್ದಿ ಸಿಕ್ಕಿದೆ. ಚಿನ್ನದ ಬೆಲೆಯು ಫೆಬ್ರವರಿ 5ರ ಗುರುವಾರ ಭರ್ಜರಿ ಇಳಿಕೆಯಾಗಿದೆ. ಕಳೆದ ಎರಡು ಮೂರು ದಿನಗಳಿಂದ ಚಿನ್ನದ ಬೆಲೆಯು ಭರ್ಜರಿ ಹೆಚ್ಚಳವಾಗಿತ್ತು. ಇದೀಗ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ. 18, 22 ಹಾಗೂ 24 ಕ್ಯಾರೆಟ್‌ನ ಚಿನ್ನದ ಬೆಲೆಯು ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಎಷ್ಟು ಕಡಿಮೆಯಾಗಿದೆ. ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆಯು ಗುರುವಾರ ಭರ್ಜರಿ ಇಳಿಕೆಯಾಗಿದೆ. ಈ ಮೂಲಕ ಕಳೆದ ಕೆಲವೇ ದಿನಗಳಲ್ಲಿ ಚಿನ್ನದ ಬೆಲೆಯು ಹಳೆಯ ಬೆಲೆಗೆ ಬಂದಿದೆ. ಚಿನ್ನದ ಬೆಲೆಯು ಜನವರಿ ಮೂರನೇ ವಾರದಲ್ಲಿ ಏಕಾಏಕಿ 11,000 ರೂಪಾಯಿ ಹೆಚ್ಚಳವಾಗಿತ್ತು. ಇದಾದ ಮೇಲೆ ಎರಡು ಬಾರಿ ಭಾರೀ ಮೊತ್ತದಲ್ಲಿ ಇಳಿಕೆಯಾಗಿತ್ತು. ಇದೀಗ ಫೆಬ್ರವರಿ 5ರಂದು ಚಿನ್ನದ ಬೆಲೆಯು ಭರ್ಜರಿ 5,020 ರೂಪಾಯಿ ಕಡಿಮೆಯಾಗಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಯ ಸಂಪೂರ್ಣ ವಿವರ ಇಲ್ಲಿದೆ.

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 11,582 ರೂಪಾಯಿ ಆಗಿದೆ. 10 ಗ್ರಾಂನ ಚಿನ್ನದ ಬೆಲೆಯು 1,15,820 ರೂ. ಆಗಿದೆ. ಬುಧವಾರಕ್ಕೆ ಹೋಲಿಕೆ ಮಾಡಿದರೆ 18 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 376 ರೂಪಾಯಿ ಹಾಗೂ 10 ಗ್ರಾಂನ ಮೇಲೆ 3,760 ರೂಪಾಯಿ ಕಡಿಮೆಯಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್‌ನಂತೆಯೇ 22 ಹಾಗೂ 24 ಕ್ಯಾರೆಟ್‌ನ ಚಿನ್ನದ ಬೆಲೆಯಲ್ಲೂ ಇಳಿಕೆಯಾಗಿದೆ. 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 14,155 ರೂಪಾಯಿ ಆಗಿದೆ. 10 ಗ್ರಾಂನ ಚಿನ್ನದ ಬೆಲೆಯು 1,41,550 ರೂ. ಆಗಿದೆ. ಬುಧವಾರಕ್ಕೆ ಹೋಲಿಕೆ ಮಾಡಿದರೆ 1 ಗ್ರಾಂನ ಚಿನ್ನದ ಬೆಲೆಯು 460 ರೂಪಾಯಿ ಹಾಗೂ 10 ಗ್ರಾಂನ ಚಿನ್ನದ ಬೆಲೆಯು 4,600 ರೂಪಾಯಿ ಕಡಿಮೆಯಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 15,442 ರೂಪಾಯಿ ಆಗಿದೆ. 10 ಗ್ರಾಂನ ಚಿನ್ನದ ಬೆಲೆಯು 1,54,420 ರೂ. ಆಗಿದೆ. ಬುಧವಾರಕ್ಕೆ ಹೋಲಿಕೆ ಮಾಡಿದರೆ 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 502 ರೂಪಾಯಿ ಹಾಗೂ 10 ಗ್ರಾಂನ ಚಿನ್ನದ ಬೆಲೆಯು 5,020 ರೂಪಾಯಿ ಕಡಿಮೆಯಾಗಿದೆ.
ಬೆಳ್ಳಿ ಬೆಲೆ ಎಷ್ಟಿದೆ ?
ಇನ್ನು ಬೆಳ್ಳಿ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 300 ರೂಪಾಯಿ ಹಾಗೂ ಕೆ.ಜಿಗೆ 3,00,000 ರೂ. ಆಗಿದೆ. ಬೆಳ್ಳಿ ಬೆಲೆಯು ಪ್ರತಿ ಗ್ರಾಂನ ಮೇಲೆ 20 ರೂಪಾಯಿ ಹಾಗೂ ಕೆ.ಜಿಯ ಮೇಲೆ 20,000 ರೂ. ಕಡಿಮೆಯಾಗಿದೆ.












Click it and Unblock the Notifications