Gold Rate Jan 14: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಹೊಸ ದಾಖಲೆ: ಸಂಕ್ರಾಂತಿ ಹಬ್ಬದ ದಿನವೇ ನಿರಾಸೆ
ಚಿನ್ನದ ಮೇಲೆ ಹೂಡಿಕೆ ಹೆಚ್ಚಾಗುತ್ತಿದ್ದು. ಜನವರಿ 14ರಂದು ಸಂಕ್ರಾಂತಿ ಸಂಭ್ರಮದ ನಡುವೆಯೇ ಚಿನ್ನ ಪ್ರಿಯರಿಗೆ ನಿರಾಸೆ ಮುಂದುವರಿದಿದೆ. ಚಿನ್ನದ ಬೆಲೆಯು ಜನವರಿ 14ರಂದು ಸಹ ಭರ್ಜರಿ ಹೆಚ್ಚಳವಾಗಿದೆ. ಇತ್ತೀಚಿನ ದಿನಗಳಲ್ಲಿ ಬೆಳ್ಳಿ ಬೆಲೆಯಲ್ಲೂ ಹೆಚ್ಚಳವಾಗುತ್ತಿದೆ. ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ಹಾಗೂ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆಯೇ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.
ಚಿನ್ನದ ಬೆಲೆಯು ನಿರಂತರವಾಗಿ ಹೆಚ್ಚಳವಾಗುತ್ತಿದ್ದು, ಚಿನ್ನ ಪ್ರಿಯರಿಗೆ ನಿರಾಸೆ ಮುಂದುವರಿದಿದೆ. ಜನವರಿ 12ರಂದು ಅಲ್ಪ ಪ್ರಮಾಣದಲ್ಲಿ ಚಿನ್ನದ ಬೆಲೆಯು ಇಳಿಕೆಯಾಗಿತ್ತು. ಆದರೆ ಇದಾದ ನಂತರ ಸತತ ಏರಿಕೆ ಕಂಡಿದೆ. ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಮೇಲೆ ಹೆಚ್ಚುವರಿ ಸುಂಕವನ್ನು ವಿಧಿಸುವ ಬೆದರಿಕೆ ಹಾಕುತ್ತಿರುವುದರ ನಡುವೆ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಭಾರೀ ಹೆಚ್ಚಳವಾಗಿದೆ. ಹಾಗಾದರೆ ಇಂದಿನ 18, 22 ಹಾಗೂ 24 ಕ್ಯಾರೆಟ್‌ನ ಚಿನ್ನದ ಬೆಲೆ ಎಷ್ಟಿದೆ ಎನ್ನುವ ವಿವರವನ್ನು ನೋಡೋಣ.

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ ಚಿನ್ನದ ಬೆಲೆಯು ಒಂದು ಗ್ರಾಂಗೆ 10,772 ರೂಪಾಯಿ ಇದೆ. 10 ಗ್ರಾಂ ಚಿನ್ನದ ಬೆಲೆಯು 1,07,720 ರೂಪಾಯಿ ಆಗಿದೆ. 18 ಕ್ಯಾರೆಟ್‌ನ ಒಂದು ಗ್ರಾಂನ ಚಿನ್ನದ ಬೆಲೆಯು ಜನವರಿ 13ಕ್ಕಿಂತ 82 ರೂಪಾಯಿ ಹೆಚ್ಚಳವಾಗಿದೆ. 10 ಗ್ರಾಂನ ಚಿನ್ನದ ಬೆಲೆಯು 820 ರೂಪಾಯಿ ಹೆಚ್ಚಳವಾಗಿದೆ. ಈ ಮೂಲಕ 18 ಕ್ಯಾರೆಟ್‌ನ ಚಿನ್ನದ ಬೆಲೆಯು ಹೊಸ ದಾಖಲೆ ಬರೆದಿದೆ.
22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 13,165 ರೂಪಾಯಿ ಆಗಿದೆ. 10 ಗ್ರಾಂನ ಚಿನ್ನದ ಬೆಲೆಯು 1,31,650 ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ 1 ಗ್ರಾಂ ಚಿನ್ನದ ಮೇಲೆ 100 ರೂಪಾಯಿ ಹಾಗೂ 10 ಗ್ರಾಂನ ಮೇಲೆ 1,000 ಸಾವಿರ ರೂಪಾಯಿ ಹೆಚ್ಚಳವಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭರ್ಜರಿ ಹೆಚ್ಚಳವಾಗಿದೆ. 24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 14,362 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,43,620 ರೂಪಾಯಿ ಆಗಿದೆ. ಜನವರಿ 13ಕ್ಕೆ ಹೋಲಿಕೆ ಮಾಡಿದರೆ ಒಂದು ಗ್ರಾಂನ ಚಿನ್ನದ 109 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,090 ರೂಪಾಯಿ ಹೆಚ್ಚಳವಾಗಿದೆ.
ಇಂದಿನ ಬೆಳ್ಳಿ ಬೆಲೆ ಎಷ್ಟಿದೆ ?
ಚಿನ್ನದೊಂದಿಗೆ ಇದೀಗ ಬೆಳ್ಳಿ ಬೆಲೆಯಲ್ಲೂ ಹೊಸ ದಾಖಲೆ ಸೃಷ್ಟಿ ಆಗಿದೆ. ಬೆಳ್ಳಿ ಬೆಲೆಯು ಒಂದು ಗ್ರಾಂಗೆ 290 ರೂಪಾಯಿ ಆಗಿದೆ. ಒಂದು ಕೆ.ಜಿ ಬೆಳ್ಳಿ ಬೆಲೆಯು 2,90,000 ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ ಒಂದು ಗ್ರಾಂ ಬೆಳ್ಳಿ ಬೆಲೆಯು 15 ರೂಪಾಯಿ ಹೆಚ್ಚಳವಾಗಿದ್ದು. ಒಂದು ಕೆ.ಜಿ ಬೆಳ್ಳಿ ಬೆಲೆಯು 15,000 ಸಾವಿರ ರೂಪಾಯಿ ಹೆಚ್ಚಳವಾಗಿದೆ.












Click it and Unblock the Notifications