Gold Rate Jan 15: ಸಂಕ್ರಾಂತಿ ಸಂಭ್ರಮ - ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ
ಸಂಕ್ರಾಂತಿಯ ಸಂಭ್ರಮದ ಬೆನ್ನಲ್ಲೇ ಚಿನ್ನ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ ಸಿಕ್ಕಿದೆ. ಚಿನ್ನದ 18 ಕ್ಯಾರೆಟ್, 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ. ಆದರೆ ಬೆಳ್ಳಿ ಬೆಲೆಯಲ್ಲಿ ಮಾತ್ರ ಭಾರೀ ಹೆಚ್ಚಳವಾಗಿದೆ. ಚಿನ್ನದ ಬೆಲೆಯು ಕಳೆದ ಒಂದು ವಾರದಿಂದಲೂ ನಿರಂತರವಾಗಿ ಹೆಚ್ಚಳವಾಗುತ್ತಿತ್ತು. ಆದರೆ ಇದೀಗ ಸಂಕ್ರಾಂತಿ ಸಂಭ್ರಮದ ಸಂದರ್ಭದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯು ಹೊಸ ದಾಖಲೆ ಬರೆದಿದೆ. ಜನವರಿ 15ರಂದು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಎಷ್ಟಿದೆ ಎನ್ನುವ ವಿವರ ನೋಡೋಣ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಎರಡನೇ ಹಂತದ ಸುಂಕ ವಿಧಿಸುವುದಕ್ಕೆ ಸಿದ್ಧವಾಗಿರುವುದು ಹಾಗೂ ಗ್ರೀನ್ ಲ್ಯಾಂಡ್ ವಶಪಡಿಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ. ಇದರೊಂದಿಗೆ ಮಧ್ಯಪ್ರಾಚ್ಯದಲ್ಲೂ ಪರಿಸ್ಥಿತಿ ಹಾಳಾಗುತ್ತಿದೆ. ಇರಾನ್‌ನಲ್ಲಿ ಹಿಂಸಾಚಾರ ಭುಗಿಲೆದಿದ್ದು, ಯಾವುದೇ ಕ್ಷಣದಲ್ಲಾದರೂ ಯುದ್ಧ ನಡೆಯುವ ಭೀತಿ ಇದೆ. ಈ ನಡುವೆ ಚಿನ್ನದ ಬೆಲೆಯು ಅಚ್ಚರಿಯಂತೆ ಕಡಿಮೆಯಾಗಿದೆ.

24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್‌ನ ಚಿನ್ನದ ಬೆಲೆಯಲ್ಲಿ ಜನವರಿ 15ರಂದು ಭರ್ಜರಿ ಇಳಿಕೆಯಾಗಿದೆ. 24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 14,318 ರೂಪಾಯಿ ಆಗಿದೆ. 10 ಗ್ರಾಂನ ಚಿನ್ನದ ಬೆಲೆಯು 1,43,180 ರೂಪಾಯಿ ಆಗಿದೆ. ಜನವರಿ 14ಕ್ಕೆ ಹೋಲಿಕೆ ಮಾಡಿದರೆ ಒಂದು ಗ್ರಾಂ ಚಿನ್ನದ ಬೆಲೆಯು 82 ರೂಪಾಯಿ ಹಾಗೂ 10 ಗ್ರಾಂನ ಚಿನ್ನದ ಬೆಲೆಯು 820 ರೂಪಾಯಿ ಕಡಿಮೆಯಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 13,125 ರೂಪಾಯಿ ಹಾಗೂ 10 ಗ್ರಾಂನ ಚಿನ್ನದ ಬೆಲೆಯು 1,31,250 ರೂಪಾಯಿ ಆಗಿದೆ. ಒಂದು ಗ್ರಾಂ ಚಿನ್ನದ ಬೆಲೆಯು 75 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 750 ರೂಪಾಯಿ ಕಡಿಮೆಯಾಗಿದೆ.
18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್‌ನ ಚಿನ್ನದ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. 18 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 10,739 ರೂಪಾಯಿ ಆಗಿದೆ. 10 ಗ್ರಾಂನ ಚಿನ್ನದ ಬೆಲೆಯು 1,07,390 ರೂಪಾಯಿ ಆಗಿದೆ. ಬುಧವಾರಕ್ಕೆ ಹೋಲಿಕೆ ಮಾಡಿದರೆ 18 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 61 ರೂಪಾಯಿ ಕಡಿಮೆಯಾಗಿದೆ. ಅಲ್ಲದೇ 10 ಗ್ರಾಂ ಚಿನ್ನದ ಬೆಲೆಯು 610 ರೂಪಾಯಿ ಕಡಿಮೆಯಾಗಿದೆ.
ಬೆಳ್ಳಿ ಬೆಲೆ
ಇನ್ನು ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದ್ದರೂ, ಬೆಳ್ಳಿ ಬೆಲೆಯಲ್ಲಿ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯು ಒಂದು ಗ್ರಾಂಗೆ 295 ರೂಪಾಯಿ ಆಗಿದೆ. ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 5 ರೂಪಾಯಿ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯು ಪ್ರತಿ ಕೆ.ಜಿಗೆ 2,95,000 ಸಾವಿರ ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ ಬೆಳ್ಳಿ ಬೆಲೆಯು ಬರೋಬ್ಬರಿ 5,000 ಸಾವಿರ ರೂಪಾಯಿ ಹೆಚ್ಚಳವಾಗಿದೆ.
-
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications