Gold Rate Jan 16: ಚಿನ್ನ ಪ್ರಿಯರಿಗೆ ಶುಭ ಶುಕ್ರವಾರ: ಚಿನ್ನ & ಬೆಳ್ಳಿ ಬೆಲೆ ಭರ್ಜರಿ ಇಳಿಕೆ
Gold Rate Jan 16: ಚಿನ್ನ ಪ್ರಿಯರಿಗೆ ಚಿನ್ನದ ಬೆಲೆಯ ವಿಚಾರದಲ್ಲಿ ಜನವರಿ 16 ಶುಭ ಶುಕ್ರವಾರವಾಗಿದೆ. ಚಿನ್ನದ ಬೆಲೆಯು ಸಂಕ್ರಾಂತಿ ಹಬ್ಬದ ನಂತರವೂ ಇಳಿಕೆಯ ಹಾದಿಯಲ್ಲಿದೆ. ಕಳೆದ ಒಂದು ತಿಂಗಳಿನಿಂದಲೂ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಏರಿಕೆ ಕಾಣುತ್ತಿತ್ತು. ಇದೀಗ ಜನವರಿ 15 ಹಾಗೂ ಜನವರಿ 16ರಂದು ಚಿನ್ನದ ಬೆಲೆ ಇಳಿಕೆಯಾಗಿದೆ. ಚಿನ್ನದ ಬೆಲೆ ಸತತವಾಗಿ ಇಳಿಕೆಯಾಗುತ್ತಿರುವುದು ಚಿನ್ನ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ. ಆದರೆ ಒಟ್ಟಾರೆ ಚಿನ್ನದ ಬೆಲೆಯಲ್ಲಿ ಹೆಚ್ಚಳವೇ ಇದೆ. ಇನ್ನು ಅಚ್ಚರಿ ಎನ್ನುವಂತೆ ಬೆಳ್ಳಿ ಬೆಲೆಯಲ್ಲೂ ಶುಕ್ರವಾರ ಇಳಿಕೆಯಾಗಿದೆ. ಹಾಗಾದರೆ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಜನವರಿ 16ರಂದು ಎಷ್ಟು ಇಳಿಕೆಯಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಕಳೆದ ವರ್ಷಾಂತ್ಯ ಹಾಗೂ 2026ರ ಹೊಸ ವರ್ಷದ ಪ್ರಾರಂಭದಿಂದಲೂ ಚಿನ್ನದ ಬೆಲೆಯು ನಿರಂತರವಾಗಿ ಹೆಚ್ಚಳವಾಗುತ್ತಿತ್ತು. ಇದೀಗ ಕೊನೆಗೂ ಚಿನ್ನದ ಬೆಲೆಯಲ್ಲಿ ಇಳಿಕೆ ಕಾಣುತ್ತಿದೆ. ಚಿನ್ನದ ಬೆಲೆಯು 18 ಕ್ಯಾರೆಟ್, 22 ಕ್ಯಾರೆಟ್ ಹಾಗೂ 24 ಕ್ಯಾರೆಟ್‌ನಲ್ಲಿ ಭರ್ಜರಿ ಇಳಿಕೆ ಆಗಿದೆ. ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆಯ ನಿಖರವಾದ ವಿವರ ನೋಡೋಣ.

24 ಕ್ಯಾರೆಟ್ ಚಿನ್ನದ ಬೆಲೆ: ಶುಕ್ರವಾರ 24 ಕ್ಯಾರೆಟ್‌ನ ಚಿನ್ನದ ಬೆಲೆಯು 1 ಗ್ರಾಂಗೆ 14,340 ರೂಪಾಯಿ ಆಗಿದೆ. 10 ಗ್ರಾಂಗೆ 1,43,400 ರೂಪಾಯಿ ಆಗಿದೆ. ಜನವರಿ 15ರ ಗುರುವಾರಕ್ಕೆ ಹೋಲಿಕೆ ಮಾಡಿದರೆ 1 ಗ್ರಾಂನ ಮೇಲೆ 22 ರೂಪಾಯಿ ಹಾಗೂ 10 ಗ್ರಾಂಗೆ 220 ರೂಪಾಯಿ ಕಡಿಮೆಯಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು ನೆನ್ನೆಗೆ ಹೋಲಿಕೆ ಮಾಡಿದರೆ 22 ಕ್ಯಾರೆಟ್‌ನ 1ಗ್ರಾಂ ಚಿನ್ನದ ಬೆಲೆಯು 13,145 ರೂಪಾಯಿ ಆಗಿದೆ. 10 ಗ್ರಾಂನ ಚಿನ್ನದ ಬೆಲೆಯು 1,31,450 ರೂಪಾಯಿ ಆಗಿದೆ. ಜನವರಿ 15ಕ್ಕೆ ಹೋಲಿಕೆ ಮಾಡಿದರೆ 1ಗ್ರಾಂ ಚಿನ್ನದ ಬೆಲೆ 20 ರೂಪಾಯಿ ಹಾಗೂ 10 ಗ್ರಾಂನ ಚಿನ್ನದ ಬೆಲೆ 200 ರೂಪಾಯಿ ಕಡಿಮೆಯಾಗಿದೆ.
18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್‌ನ ಚಿನ್ನದ ಬೆಲೆಯು 1 ಗ್ರಾಂಗೆ 10,755 ರೂಪಾಯಿ ಆಗಿದೆ. 10 ಗ್ರಾಂನ ಚಿನ್ನದ ಬೆಲೆಯು 1,07,550 ರೂಪಾಯಿ ಆಗಿದೆ. ಗುರುವಾರಕ್ಕೆ ಹೋಲಿಕೆ ಮಾಡಿದರೆ 18 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 17 ರೂಪಾಯಿ ಹಾಗೂ 10 ಗ್ರಾಂನ ಚಿನ್ನದ ಬೆಲೆಯು 170 ರೂಪಾಯಿ ಕಡಿಮೆಯಾಗಿದೆ.
ಬೆಳ್ಳಿ ಬೆಲೆ ಎಷ್ಟಿದೆ ?
ಜನವರಿ 16ರಂದು ಬೆಳ್ಳಿ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. ಬೆಳ್ಳಿ ಬೆಲೆಯು ಒಂದು ಗ್ರಾಂಗೆ 292 ರೂಪಾಯಿ ಆಗಿದೆ. ಒಂದು ಕೆ.ಜಿ ಬೆಳ್ಳಿ ಬೆಲೆಯು 2,92,000 ಸಾವಿರ ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ ಒಂದು ಗ್ರಾಂ ಬೆಳ್ಳಿ ಬೆಲೆಯು 3 ರೂಪಾಯಿ ಹಾಗೂ ಒಂದು ಕೆ.ಜಿ ಬೆಳ್ಳಿ ಬೆಲೆ ಭರ್ಜರಿ 3,000 ಸಾವಿರ ರೂಪಾಯಿ ಕಡಿಮೆಯಾಗಿದೆ.












Click it and Unblock the Notifications