Gold Rate Jan 26: ಜನವರಿ 26ರಂದು ಚಿನ್ನ - ಬೆಳ್ಳಿ ಬೆಲೆಯಲ್ಲಿ ಹೊಸ ದಾಖಲೆ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ
Gold Rate Jan 26: ಚಿನ್ನ ಪ್ರಿಯರಿಗೆ ಸೋಮವಾರ ಮತ್ತೆ ಶಾಕ್ ಎದುರಾಗಿದೆ. ಸೋಮವಾರ ಜನವರಿ 26ರಂದು ಚಿನ್ನ ಮತ್ತು ಬೆಳ್ಳಿ ಬೆಲೆ ಮತ್ತೆ ಹೆಚ್ಚಳವಾಗಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಯು ನಿರಂತರವಾಗಿ ಹೆಚ್ಚಳವಾಗುತ್ತಿದ್ದು ಚಿನ್ನ ಪ್ರಿಯರು ಕಂಗಾಲಾಗಿದ್ದಾರೆ. ಜನವರಿ 26ರಂದು ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ಎನ್ನುವ ನಿಖರವಾದ ವಿವರ ಇಲ್ಲಿದೆ.
ಚಿನ್ನದ ಬೆಲೆಯು ನಿರೀಕ್ಷೆಗೂ ಮೀರಿ ಹೆಚ್ಚಳವಾಗುತ್ತಿದೆ. ಚಿನ್ನದೊಂದಿಗೆ ಬೆಳ್ಳಿ ಬೆಲೆ ಸಹ ನಿರಂತರವಾಗಿ ಹೆಚ್ಚಳವಾಗುತ್ತಿದ್ದು. ಜನರು ಚಿನ್ನ ಮತ್ತು ಬೆಳ್ಳಿಯ ಮೇಲೆ ಹೂಡಿಕೆ ಮಾಡುವುದು ಹೆಚ್ಚಾಗುತ್ತಿದೆ. ಹೀಗಾಗಿ, ನಿರಂತರವಾಗಿ ಚಿನ್ನ ಮತ್ತು ಬೆಳ್ಳಿ ಬೆಲೆಯು ಹೆಚ್ಚಳವಾಗುತ್ತಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯು ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

24 ಕ್ಯಾರೆಟ್ ಚಿನ್ನದ ಬೆಲೆ: ಸೋಮವಾರ ಜನವರಿ 26ರಂದು 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 16,271 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,62,710 ರೂಪಾಯಿ ಆಗಿದೆ. ಭಾನುವಾರಕ್ಕೆ ಹೋಲಿಕೆ ಮಾಡಿದರೆ 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 245 ರೂಪಾಯಿ ಹಾಗೂ 10 ಗ್ರಾಂನ ಚಿನ್ನದ ಬೆಲೆಯು 2,450 ರೂಪಾಯಿ ಹೆಚ್ಚಳವಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಹೆಚ್ಚಳವಾಗಿದೆ. 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 14,915 ರೂಪಾಯಿ ಹಾಗೂ 10 ಗ್ರಾಂನ ಚಿನ್ನದ ಬೆಲೆಯು 1,49,150 ರೂಪಾಯಿ ಆಗಿದೆ. ಜನವರಿ 25ಕ್ಕೆ ಹೋಲಿಕೆ ಮಾಡಿದರೆ 1 ಗ್ರಾಂ ಚಿನ್ನದ ಬೆಲೆಯು 225 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 2,250 ರೂಪಾಯಿ ಹೆಚ್ಚಳವಾಗಿದೆ.
18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್‌ನ 1 ಗ್ರಾಂನ ಚಿನ್ನದ ಬೆಲೆಯು 12,203 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,22,030 ರೂಪಾಯಿ ಆಗಿದೆ. ಜನವರಿ 25ಕ್ಕೆ ಹೋಲಿಕೆ ಮಾಡಿದರೆ 18 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 184 ರೂಪಾಯಿ ಹಾಗೂ 10 ಗ್ರಾಂನ ಚಿನ್ನದ ಬೆಲೆಯು 1,840 ರೂಪಾಯಿ ಹೆಚ್ಚಳವಾಗಿದೆ.
ಬೆಳ್ಳಿ ಬೆಲೆ: ಇನ್ನು ಜನವರಿ 26ರಂದು ಬೆಳ್ಳಿ ಬೆಲೆಯಲ್ಲೂ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯು 1 ಗ್ರಾಂ 340 ರೂಪಾಯಿ ಹಾಗೂ ಒಂದು ಕೆ.ಜಿ ಬೆಳ್ಳಿ ಬೆಲೆಯು 3,40,000 ರೂಪಾಯಿ ತಲುಪಿದೆ. ನೆನ್ನೆಗೆ ಹೋಲಿಕೆ ಮಾಡಿದರೆ ಒಂದು ಗ್ರಾಂ ಬೆಳ್ಳಿ ಬೆಲೆಯು 5 ರೂಪಾಯಿ ಹಾಗೂ ಒಂದು ಕೆ.ಜಿ ಬೆಳ್ಳಿ ಬೆಲೆಯು 5000 ಸಾವಿರ ರೂಪಾಯಿ ಹೆಚ್ಚಳವಾಗಿದೆ.
ಮುಂದಿನ ದಿನಗಳಲ್ಲೂ ಹೆಚ್ಚಳ ಸಾಧ್ಯತೆ
ಇನ್ನು ಚಿನ್ನ ಮತ್ತು ಬೆಳ್ಳಿ ಬೆಲೆಯು ನಿರಂತರವಾಗಿ ಹೆಚ್ಚಳವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯು ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಅಲ್ಲದೇ ಡಾಲರ್‌ನ ಮುಂದೆ ರೂಪಾಯಿ ಮೌಲ್ಯ ಕುಸಿತ ಹಾಗೂ ವಿವಿಧ ದೇಶಗಳ ನಡುವೆ ಸಂರ್ಘ ಮುಂದುವರಿದಿರುವುದು, ಬಾಂಗ್ಲಾದೇಶದ ಮೇಲೆ ಭಾರತವು ಕೆಲವೊಂದು ನಿರ್ಬಂಧ ವಿಧಿಸಲು ಮುಂದಾಗಿರುವುದು ಸೇರಿದಂತೆ ಹಲವು ಕಾರಣಗಳಿಗೆ ಚಿನ್ನದ ಮೇಲೆ ಹೂಡಿಕೆ ಹೆಚ್ಚಳವಾಗಿದ್ದು, ಬೆಲೆಯೂ ಹೆಚ್ಚಳವಾಗುತ್ತಿದೆ.












Click it and Unblock the Notifications