Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ
Gold Rate March 05: ಮಧ್ಯಪ್ರಾಚ್ಯದಲ್ಲಿ ಅಮೆರಿಕ, ಇಸ್ರೇಲ್ Vs ಇರಾನ್ ನಡುವೆ ತೀವ್ರ ಯುದ್ಧ ನಡೆಯುತ್ತಿದ್ದು, ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಸಾಮಾನ್ಯವಾಗಿ ಭೌಗೋಳಿಕವಾಗಿ ಸಮಸ್ಯೆಗಳು ಎದುರಾದಾಗೆಲ್ಲವೂ ಚಿನ್ನ ಮತ್ತು ಬೆಳ್ಳಿ ಬೆಲೆಯು ಏಕಾಏಕಿ ಹೆಚ್ಚಳವಾಗುವುದು ಇದೆ. ಆದರೆ ಇದೀಗ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಯು ದಿಢೀರ್ ಇಳಿಕೆಯಾಗಿದೆ. ಮಾರ್ಚ್ 5ರಂದು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಎಷ್ಟಿದೆ ಎನ್ನುವ ವಿವರ ಇಲ್ಲಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಳವಾಗಬಹುದು ಎನ್ನುವ ನಿರೀಕ್ಷೆಯಲ್ಲಿದ್ದ ಜನರ ಲೆಕ್ಕಾಚಾರ ತಲೆಕೆಳಗಾಗಿದೆ. 18, 22 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಮಾರ್ಚ್ 5ರಂದು ಭರ್ಜರಿ ಇಳಿಕೆಯಾಗಿದೆ.

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್‌ನ ಚಿನ್ನದ ಬೆಲೆಯು ಒಂದು ಗ್ರಾಂಗೆ 12,265 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,22,650 ರೂ. ಆಗಿದೆ. ಬುಧವಾರಕ್ಕೆ ಹೋಲಿಕೆ ಮಾಡಿದರೆ ಚಿನ್ನದ ಬೆಲೆಯು 1 ಗ್ರಾಂನ ಮೇಲೆ 73 ರೂಪಾಯಿ ಕಡಿಮೆಯಾಗಿದೆ. ಇನ್ನು 10 ಗ್ರಾಂ ಚಿನ್ನದ ಮೇಲೆ 730 ರೂಪಾಯಿ ಕಡಿಮೆಯಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 14,990 ರೂ. ಆಗಿದೆ. 10 ಗ್ರಾಂಗೆ 1,49,900 ರೂ. ಆಗಿದೆ. ಬುಧವಾರಕ್ಕೆ ಹೋಲಿಕೆ ಮಾಡಿದರೆ 1 ಗ್ರಾಂನ 22 ಕ್ಯಾರೆಟ್ ಚಿನ್ನದ ಬೆಲೆಯು 90 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 900 ರೂಪಾಯಿ ಕಡಿಮೆಯಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 16,353 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,63,530 ರೂ. ಆಗಿದೆ. ಒಂದು ಗ್ರಾಂ ಚಿನ್ನದ ಬೆಲೆಯು 98 ರೂಪಾಯಿ ಕಡಿಮೆಯಾಗಿದೆ. 10 ಗ್ರಾಂ ಚಿನ್ನದ ಬೆಲೆಯು 980 ರೂಪಾಯಿ ಕಡಿಮೆಯಾಗಿದೆ.
ಬೆಳ್ಳಿ ಬೆಲೆ ಎಷ್ಟಾಗಿದೆ ?
ಚಿನ್ನದ ಬೆಲೆ ಭರ್ಜರಿ ಇಳಿಕೆಯಾಗಿದ್ದರೂ ಬೆಳ್ಳಿಯ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ. ಬೆಳ್ಳಿ ಬೆಲೆಯು ಒಂದು ಗ್ರಾಂಗೆ 285 ರೂಪಾಯಿ ಹಾಗೂ ಒಂದು ಕೆ.ಜಿಗೆ 2,85,000 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ.
ಚಿನ್ನ ಮತ್ತು ಬೆಳ್ಳಿ ಬೆಲೆ ವ್ಯತ್ಯಾಸವಾಗುವ ಸಾಧ್ಯತೆ
ಇನ್ನು ಮಧ್ಯಪ್ರಾಚ್ಯಾದಲ್ಲಿ ಯುದ್ಧ ನಡೆಯುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಹೆಚ್ಚಾಗಬಹುದೇ ಎನ್ನುವ ಲೆಕ್ಕಾಚಾರವು ಜೋರಾಗಿದೆ. ಈಗಾಗಲೇ ಚಿನ್ನ ಮತ್ತು ಬೆಳ್ಳಿಯ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಹೆಚ್ಚಳವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ. ಆದರೆ ಮಾರ್ಚ್ 5ರ ಗುರುವಾರದಂದು ಚಿನ್ನದ ಬೆಲೆ ಇಳಿಕೆಯಾಗಿದ್ದು ಬಂಗಾರ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ.












Click it and Unblock the Notifications