Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ

Gold Rate March 13: ಚಿನ್ನದ ಬೆಲೆಯು ಸತತ ಎರಡನೇ ದಿನವೂ ಇಳಿಕೆಯಾಗಿದೆ. ಮಧ್ಯಪ್ರಾಚ್ಯಾದಲ್ಲಿ ಯುದ್ಧದ ತೀವ್ರತೆ ಕಡಿಮೆಯಾಗುತ್ತಿರುವುದು ಹಾಗೂ ಯಾವುದೇ ಕ್ಷಣದಲ್ಲಾದರೂ ಇರಾನ್ Vs ಇಸ್ರೇಲ್ ಯುದ್ಧ ನಿಲ್ಲಬಹುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ಹೇಳಿದ್ದಾರೆ. ಇದು ಸೇರಿದಂತೆ ಹಲವು ಕಾರಣಗಳಿಗೆ ಚಿನ್ನ ಮತ್ತು ಬೆಳ್ಳಿ ಬೆಲೆಯು ಭರ್ಜರಿ ಇಳಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯು ವಿಪರೀತವಾಗಿ ಏರಿಕೆ ಕಂಡಿತ್ತು. ಇದೀಗ ಚಿನ್ನದ ಬೆಲೆಯು ಇಳಿಕೆಯ ಹಾದಿಯಲ್ಲಿದ್ದು, ಬಂಗಾರ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ. 18, 22 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಹಾಗೂ ಮಾರ್ಚ್‌ 13ರಂದು ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಾಗಿದೆ ಎನ್ನುವ ನಿಖರವಾದ ವಿವರ ಇಲ್ಲಿದೆ.

Gold Rate March 13: ಬಂಗಾರ ಪ್ರಿಯರು ಖುಷಿಪಡುವ ಸುದ್ದಿ ಇಲ್ಲಿದೆ. ಕಳೆದ ಮೂರು ದಿನಗಳಿಂದಲೂ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ನಿರಂತರವಾಗಿ ಅಲ್ಪ ಪ್ರಮಾಣದ ಬೆಲೆ ಇಳಿಕೆಯಾಗುತ್ತಿದೆ. ಇದು ಬಂಗಾರ ಪ್ರಿಯರಲ್ಲಿ ಹೊಸ ಸಂತೋಷವನ್ನುಂಟು ಮಾಡಿದೆ. ಚಿನ್ನ ಮತ್ತು ಬೆಳ್ಳಿಯ ನಿಖರವಾದ ಬೆಲೆ ಮತ್ತು ವಿವರ ನೋಡೋಣ.

Gold

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್‌ನ 1 ಗ್ರಾಂನ ಚಿನ್ನದ ಬೆಲೆಯು 12,093 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,20,930 ರೂ. ಆಗಿದೆ. ಗುರುವಾರಕ್ಕೆ ಹೋಲಿಕೆ ಮಾಡಿದರೆ 18 ಕ್ಯಾರೆಟ್‌ನ ಚಿನ್ನದ ಬೆಲೆಯು 1 ಗ್ರಾಂನ ಮೇಲೆ 74 ರೂಪಾಯಿ ಹಾಗೂ 10 ಗ್ರಾಂನ ಮೇಲೆ 740 ರೂಪಾಯಿ ಕಡಿಮೆಯಾಗಿದೆ.

22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 14,780 ರೂಪಾಯಿ ಆಗಿದೆ. 10 ಗ್ರಾಂನ ಚಿನ್ನದ ಬೆಲೆಯು 1,47,800 ರೂಪಾಯಿ ಆಗಿದೆ. ಗುರುವಾರಕ್ಕೆ ಹೋಲಿಕೆ ಮಾಡಿದರೆ 1 ಗ್ರಾಂ ಚಿನ್ನದ ಮೇಲೆ 90 ರೂಪಾಯಿ ಹಾಗೂ 10 ಗ್ರಾಂನ ಮೇಲೆ 900 ರೂಪಾಯಿ ಭರ್ಜರಿ ಇಳಿಕೆಯಾಗಿದೆ.

24 ಕ್ಯಾರೆಟ್ ಚಿನ್ನದ ಬೆಲೆ: 18 ಹಾಗೂ 22 ಕ್ಯಾರೆಟ್‌ ಚಿನ್ನದ ಬೆಲೆಯಂತೆಯೇ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭಾರೀ ಇಳಿಕೆಯಾಗಿದೆ. 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 16,124 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,61,240 ರೂಪಾಯಿ ಆಗಿದೆ. ಗುರುವಾರಕ್ಕೆ ಹೋಲಿಕೆ ಮಾಡಿದರೆ 1 ಗ್ರಾಂ ಚಿನ್ನದ ಬೆಲೆಯು 98 ರೂಪಾಯಿ ಕಡಿಮೆಯಾಗಿದ್ದರೆ, 10 ಗ್ರಾಂನ ಮೇಲೆ 980 ರೂಪಾಯಿ ಕಡಿಮೆಯಾಗಿದೆ.

ಮಾರ್ಚ್‌ 13ರ ಬೆಳ್ಳಿ ಬೆಲೆ ಹೇಗಿದೆ

ಇನ್ನು ಚಿನ್ನದ ಬೆಲೆ ಇಳಿಕೆಯಾಗುವುದರೊಂದಿಗೆ ಬೆಳ್ಳಿ ಬೆಲೆಯು ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಮಾರ್ಚ್‌13ರ ಬೆಳ್ಳಿ ಬೆಲೆಯು 1 ಗ್ರಾಂಗೆ 280 ರೂಪಾಯಿ ಹಾಗೂ ಒಂದು ಕೆ.ಜಿ ಬೆಳ್ಳಿ ಬೆಲೆಯು 2.80 ಲಕ್ಷ ರೂ. ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+