Gold Rate May 22: ಚಿನ್ನ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್: ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ, ಬೆಳ್ಳಿ ದರ ಯಥಾಸ್ಥಿತಿ
Gold Rate May 22: ಚಿನ್ನ ಪ್ರಿಯರಿಗೆ ಶುಕ್ರವಾರ ಭರ್ಜರಿ ಗುಡ್‌ನ್ಯೂಸ್ ಸಿಕ್ಕಿದೆ. ಚಿನ್ನದ ಬೆಲೆಯು ಶುಕ್ರವಾರ ಭರ್ಜರಿ ಇಳಿಕೆಯಾಗಿದೆ. 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 15,949 ರೂಪಾಯಿ, 22 ಕ್ಯಾರೆಟ್ ಚಿನ್ನದ ಬೆಲೆ 14,620 ರೂಪಾಯಿ ಹಾಗೂ 18 ಕ್ಯಾರೆಟ್ ಚಿನ್ನದ ಬೆಲೆಯು 11,962 ರೂಪಾಯಿ ಆಗಿದೆ. ಬೆಳ್ಳಿ ಬೆಲೆಯು ಯಥಾಸ್ಥಿತಿಯಲ್ಲಿದೆ. ಬೆಳ್ಳಿಯ ಬೆಲೆಯು ಮೇ 21ರ ಗುರುವಾರ ಕಡಿಮೆಯಾಗಿತ್ತು. ಕಳೆದ ಮೂರು ದಿನಗಳಿಂದಲೂ ಚಿನ್ನ ಮತ್ತು ಬೆಳ್ಳಿ ಬೆಲೆಯು ನಿರಂತರವಾಗಿ ಏರಿಳಿತ ಕಂಡಿತ್ತು. ಚಿನ್ನದ ಬೆಲೆಯು ಕಳೆದ ಮೂರು ದಿನಗಳಿಂದಲೂ ಏರಿಕೆಯಾಗುತ್ತಿದ್ದು, ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗುತ್ತಿತ್ತು. ಮೇ 22ರ ಶುಕ್ರವಾರ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದ್ದು, ಬಂಗಾರ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ. ಇಂದಿನ ವಿವಿಧ ಕ್ಯಾರೆಟ್‌ನ ಚಿನ್ನದ ಬೆಲೆ ಹಾಗೂ ಬೆಳ್ಳಿ ಬೆಲೆಯ ಸಂಪೂರ್ಣ ವಿವರ ಇಲ್ಲಿದೆ.
18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 11,962 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,19,620 ರೂ. ಆಗಿದೆ. ಮೇ 21ರ ಬುಧವಾರಕ್ಕೆ ಹೋಲಿಕೆ ಮಾಡಿದರೆ 18 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 33 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 330 ರೂಪಾಯಿ ಕಡಿಮೆಯಾಗಿದೆ.

22 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 14,620 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,46,200 ರೂ. ಆಗಿದೆ. 22 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 40 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 400 ರೂಪಾಯಿ ಕಡಿಮೆಯಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಸಹ ಭರ್ಜರಿ ಇಳಿಕೆಯಾಗಿದೆ. 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 15,949 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,59,490 ರೂ. ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯು ಗುರುವಾರಕ್ಕೆ ಹೋಲಿಕೆ ಮಾಡಿದರೆ 1 ಗ್ರಾಂನ ಮೇಲೆ 44 ರೂಪಾಯಿ ಹಾಗೂ 10 ಗ್ರಾಂನ ಮೇಲೆ 440 ರೂಪಾಯಿ ಕಡಿಮೆಯಾಗಿದೆ.
ಬೆಳ್ಳಿ ಬೆಲೆ ಹೇಗಿದೆ ?
ಇನ್ನು ಬೆಳ್ಳಿ ಬೆಲೆಯಲ್ಲಿ ಶುಕ್ರವಾರ ಯಾವುದೇ ಬದಲಾವಣೆ ಆಗಿಲ್ಲ. ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 285 ರೂಪಾಯಿ ಹಾಗೂ ಒಂದು ಕೆ.ಜಿಗೆ 2.85 ಲಕ್ಷ ರೂ. ಆಗಿದೆ. ಕಳೆದ ಮೂರು ದಿನಗಳಿಂದಲೂ ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿತ್ತು. ಇದೀಗ ಶುಕ್ರವಾರ ಬೆಳ್ಳಿ ಬೆಲೆಯು ಯಥಾಸ್ಥಿತಿ ಮುಂದುವರಿದಿದೆ.














Click it and Unblock the Notifications