Gold Rate October 22: ಬಂಗಾರ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್: ಚಿನ್ನ 3,380 ರೂಪಾಯಿ ಇಳಿಕೆ!
Gold Rate October 22: ಚಿನ್ನದ ಬೆಲೆಯು ದೀಪವಾಳಿ ಸಂದರ್ಭದಲ್ಲೇ ಭಾರೀ ಏರಿಕೆಯಾಗಿ ಚಿನ್ನ ಪ್ರಿಯರಿಗೆ ಶಾಕ್ ಎದುರಾಗಿತ್ತು. ಇದೀಗ ಬುಧವಾರ (ಅಕ್ಟೋಬರ್ 22ರಂದು) ಚಿನ್ನದ ಬೆಲೆ ಭರ್ಜರಿ ಇಳಿಕೆಯಾಗಿದ್ದು, ಬಂಗಾರ ಪ್ರಿಯರಲ್ಲಿ ಸಂತೋಷನ್ನುಂಟು ಮಾಡಿದೆ. ಕಳೆದ ಕೆಲವು ದಿನಗಳಿಂದ ಬಂಗಾರ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದೆ. ಅಲ್ಲದೇ ಈ ಬಾರಿ ಧನ್‌ತೇರಸ್ (ಅದೃಷ್ಟ ಲಕ್ಷ್ಮಿ / ಲಕ್ಷ್ಮಿ ದೇವಿಪೂಜೆ) ಹಿನ್ನೆಲೆಯಲ್ಲಿ ಭರ್ಜರಿ ಚಿನ್ನ ಖರೀದಿ ನಡೆದಿದೆ. ಈ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದ ಬಂಗಾರದ ಬೆಲೆಯಲ್ಲಿ ಭಾರೀ ಹೆಚ್ಚಳವಾಗಿದೆ. ಅಕ್ಟೋಬರ್ 22ರ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ಎನ್ನುವ ನಿಖರ ವಿವರ ಇಲ್ಲಿದೆ.
ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರ ಪ್ರದೇಶಗಳಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಳಿತ ಕಂಡು ಬರುತ್ತಿದೆ. ಇದೀಗ ಬುಧವಾರದಂದು ಚಿನ್ನದ ಬೆಲೆಯೂ ಭಾರೀ ಇಳಿಕೆ ಕಂಡು ಬಂದಿದ್ದು, ಚಿನ್ನ ಪ್ರಿಯರಲ್ಲಿ ಸಂತೋಷನ್ನುಂಟು ಮಾಡಿದೆ. ಚಿನ್ನ ಮಾತ್ರವಲ್ಲದೇ ಬೆಳ್ಳಿಯ ಬೆಲೆಯೂ ಇಳಿಕೆ ಕಂಡಿದೆ. 18, 22 ಹಾಗೂ 24 ಕ್ಯಾರೆಟ್ ಚಿನ್ನದ ನಿಖರ ಬೆಲೆ ಎಷ್ಟಿದೆ ಎನ್ನುವ ಸಂಪೂರ್ಣ ವಿವರ ನೋಡೋಣ.

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 9,540 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 95,400 ರೂಪಾಯಿ ಆಗಿದೆ. ಮಂಗಳವಾರಕ್ಕೆ ಹೋಲಿಕೆ ಮಾಡಿದರೆ 18 ಕ್ಯಾರೆಟ್ ಚಿನ್ನದ ಬೆಲೆಯು ಒಂದು ಗ್ರಾಂಗೆ 254 ರೂಪಾಯಿ ಹಾಗೂ ಹತ್ತು ಗ್ರಾಂಗೆ 2,540 ರೂಪಾಯಿ ಕಡಿಮೆಯಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. 22 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 11,660 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,16,600 ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ ಒಂದು ಗ್ರಾಂ ಚಿನ್ನದ ಬೆಲೆಯು 310 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 3,100 ರೂಪಾಯಿ ಕಡಿಮೆಯಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭರ್ಜರಿ ಇಳಿಕೆ ಕಂಡಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭರ್ಜರಿ ಇಳಿಕೆ ಆಗಿದೆ. 24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 12,720 ರೂಪಾಯಿ ಆಗಿದೆ. ಹತ್ತು ಗ್ರಾಂಗೆ 1,27,200 ರೂಪಾಯಿ ಆಗಿದೆ. ಮಂಗಳವಾರಕ್ಕೆ ಹೋಲಿಕೆ ಮಾಡಿದರೆ ಒಂದು ಗ್ರಾಂ ಚಿನ್ನದ ಬೆಲೆಯು 338 ರೂಪಾಯಿ ಹಾಗೂ ಹತ್ತು ಗ್ರಾಂನ ಮೇಲೆ 3,380 ರೂಪಾಯಿ ಇಳಿಕೆಯಾಗಿದೆ.
ಬೆಳ್ಳಿ ಬೆಲೆ: ಇನ್ನು ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯು ಒಂದು ಗ್ರಾಂಗೆ 169.90 ರೂಪಾಯಿ ಆಗಿದ್ದರೆ, ಒಂದು ಕೆ.ಜಿ ಬೆಳ್ಳಿ ಬೆಲೆಯು 1,63,900 ರೂಪಾಯಿ ಆಗಿದೆ.












Click it and Unblock the Notifications