Gold Rate On June 25: 5ನೇ ದಿನವೂ ಚಿನ್ನದ ಬೆಲೆ ಭರ್ಜರಿ ಇಳಿಕೆ: ಚಿನ್ನ ಪ್ರಿಯರಿಗೆ ಗುಡ್‌ನ್ಯೂಸ್!
Gold Rate On June 25: ಚಿನ್ನ ಮತ್ತು ಬೆಳ್ಳಿ ಬೆಲೆಯು ನಿರಂತರವಾಗಿ 5ನೇ ದಿನವೂ ಇಳಿಕೆ ಕಂಡಿದೆ. ಈ ಮೂಲಕ ಚಿನ್ನ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ ಸಿಕ್ಕಂತಾಗಿದೆ. ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದಿಂದಾಗಿ ಚಿನ್ನ ಮತ್ತು ಬೆಳ್ಳಿ ಸೇರಿದಂತೆ ವಿವಿಧ ವಸ್ತುಗಳ ಬೆಲೆ ಏರಿಕೆ ಆಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ, ಇದೀಗ ಯುದ್ಧ ತಣ್ಣಗಾಗುತ್ತಿದ್ದು ಚಿನ್ನ ಮತ್ತು ಬೆಳ್ಳಿ ಬೆಲೆಯು ಕಡಿಮೆಯಾಗುತ್ತಿದೆ. ಅದೂ ಸಹ ಸತತವಾಗಿ 5ನೇ ದಿನಕ್ಕೆ ಚಿನ್ನ ಮತ್ತು ಬೆಳ್ಳಿಯ ಬೆಲೆ ಇಳಿಕೆ ಕಂಡಿದೆ. ಜೂನ್ 25ರ ಚಿನ್ನ ಮತ್ತು ಬೆಳ್ಳಿಯ ಬೆಲೆ ವಿವರ ನೋಡೋಣ.
ಚಿನ್ನದ ಬೆಲೆಯು ನಿರಂತರವಾಗಿ ಇಳಿಕೆಯಾಗುತ್ತಿರುವುದು ಚಿನ್ನ ಪ್ರಿಯರಲ್ಲಿ ಭಾರೀ ಸಂತೋಷ ಮೂಡಿಸಿದೆ. ಕಳೆದ ತಿಂಗಳು ಚಿನ್ನದ ಬೆಲೆಯು ಭಾರೀ ಏರಿಕೆ ಕಂಡಿತ್ತು. ಇನ್ನು ಕಳೆದ ಮೂರು ತಿಂಗಳ ಅವಧಿಯಲ್ಲಿ ಚಿನ್ನದ ಬೆಲೆಯು ಹಲವು ಪಟ್ಟು ಹೆಚ್ಚಳವಾಗಿದೆ. ಈ ನಡುವೆ ಒಂದು ವಾರದಿಂದಲೂ ಚಿನ್ನದ ಬೆಲೆ ಇಳಿಕೆಯ ಹಾದಿಯಲ್ಲಿದೆ. 18, 22 ಮತ್ತು 24 ಕ್ಯಾರೆಟ್ ಚಿನ್ನದ ಬೆಲೆಯು ಮಂಗಳವಾರಕ್ಕಿಂತಲೂ ಕಡಿಮೆಯಾಗಿದೆ.

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ ಚಿನ್ನದ ಬೆಲೆಯು ಕರ್ನಾಟಕದಲ್ಲಿ ಪ್ರತಿ ಗ್ರಾಂಗೆ 7,421 ರೂಪಾಯಿ ಆಗಿದೆ. 10 ಗ್ರಾಂನ ಚಿನ್ನದ ಬೆಲೆಯು 74 ,210 ರೂಪಾಯಿ ಆಗಿದೆ. ಒಂದು ಗ್ರಾಂಗೆ ನೆನ್ನೆಗಿಂತ 21 ರೂಪಾಯಿ ಹಾಗೂ 10 ಗ್ರಾಂಗೆ 210 ರೂಪಾಯಿ ಭರ್ಜರಿ ಇಳಿಕೆಯಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 9,070 ರೂಪಾಯಿ ಹಾಗೂ 10 ಗ್ರಾಂಗೆ 90,700 ರೂಪಾಯಿ ಆಗಿದೆ. ನೆನ್ನೆಗಿಂತ ಒಂದು ಗ್ರಾಂ ಚಿನ್ನದ ಬೆಲೆಯು 25 ರೂಪಾಯಿ ಹಾಗೂ 10 ಗ್ರಾಂಗೆ 250 ರೂಪಾಯಿ ಕಡಿಮೆಯಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ: ಇನ್ನು ಜೂನ್ 25ರ ಬುಧವಾರ 24 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 9,895 ರೂಪಾಯಿ ಹಾಗೂ 10 ಗ್ರಾಂಗೆ 98,950 ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ ಒಂದು ಗ್ರಾಂಗೆ 27 ರೂಪಾಯಿ ಹಾಗೂ 10 ಗ್ರಾಂಗೆ 270 ರೂಪಾಯಿ ಕಡಿಮೆಯಾಗಿದೆ.
ಬೆಳ್ಳಿ ಬೆಲೆ: ಇನ್ನು ಬೆಳ್ಳಿ ಬೆಲೆಯೂ ಕಡಿಮೆಯಾಗಿದೆ. ಬೆಳ್ಳಿ ಬೆಲೆಯು ಒಂದು ಗ್ರಾಂಗೆ 108 ರೂಪಾಯಿ ಹಾಗೂ ಒಂದು ಕೆ.ಜಿ ಬೆಳ್ಳಿ ಬೆಲೆಯು 1,08,000 ರೂಪಾಯಿ ಆಗಿದೆ.












Click it and Unblock the Notifications