Gold Rate Oct 21: ಬಂಗಾರದ ಬೆಲೆ ಏಕಾಏಕಿ 2,080 ರೂಪಾಯಿ ಹೆಚ್ಚಳ, ಇಂದಿನ ಚಿನ್ನ & ಬೆಳ್ಳಿ ಬೆಲೆ ಎಷ್ಟಿದೆ ?

Gold Rate Oct 21: ಚಿನ್ನ ಪ್ರಿಯರಿಗೆ ಚಿನ್ನದ ಬೆಲೆಯು ದಿಢೀರ್ ಶಾಕ್ ನೀಡಿದೆ. ಅಕ್ಟೋಬರ್ 20 ರಂದು ಚಿನ್ನದ ಬೆಲೆಯು ಭರ್ಜರಿ ಇಳಿಕೆಯಾಗಿತ್ತು. ಇದೀಗ ಅಕ್ಟೋಬರ್ 21ರಂದು ಚಿನ್ನದ ಬೆಲೆ ಮತ್ತೆ ಏರಿಕೆ ಕಂಡಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಯು ಸೋಮವಾರ ಕಡಿಮೆಯಾಗಿತ್ತು. ಆದರೆ ಮಂಗಳವಾರ ಚಿನ್ನದ ಬೆಲೆಯು ಭರ್ಜರಿ ಏರಿಕೆ ಕಂಡಿದ್ದು, ಚಿನ್ನ ಪ್ರಿಯರಿಗೆ ಶಾಕ್ ಎದುರಾಗಿದೆ. ಇನ್ನು ಚಿನ್ನದ ಬೆಲೆಯು ಭಾರೀ ದೊಡ್ಡ ಮಟ್ಟದಲ್ಲಿ ಹೆಚ್ಚಳವಾಗಬಹುದು ಎನ್ನುವ ಚರ್ಚೆಯೂ ನಡೆದಿದೆ. ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆಯು ಎಷ್ಟಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಚಿನ್ನ ಮತ್ತು ಬೆಳ್ಳಿ ಬೆಲೆಯು ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಏರಿಕೆ ಕಂಡು ಬರುತ್ತಿದೆ. ಇದೀಗ ಮಂಗಳವಾರದಂದು ಚಿನ್ನ ಮತ್ತು ಬೆಳ್ಳಿ ಬೆಲೆಯು ಹೆಚ್ಚಳವಾಗಿದೆ. 18, 22 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ ಇಂದು ಎಷ್ಟಿದೆ ಹಾಗೂ ಬೆಳ್ಳಿ ಬೆಲೆ ಎಷ್ಟಿದೆ ಎನ್ನುವ ಸಂಪೂರ್ಣ ವಿವರ ನೋಡೋಣ.

Gold Rate on Oct 21 Big Jump of 2 080 Check Today s Gold and Silver Prices

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 9,958 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 99,580 ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ ಒಂದು ಗ್ರಾಂ ಚಿನ್ನದ ಬೆಲೆಯು 156 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,560 ರೂಪಾಯಿ ಹೆಚ್ಚಳವಾಗಿದೆ.

22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಹೆಚ್ಚಳವಾಗಿದೆ. 22 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 12,170 ರೂಪಾಯಿ ಹಾಗೂ ಹತ್ತು ಗ್ರಾಂ ಚಿನ್ನದ ಬೆಲೆಯು 1,21,700 ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ ಒಂದು ಗ್ರಾಂ ಚಿನ್ನದ ಬೆಲೆಯು 190 ರೂಪಾಯಿ ಹಾಗೂ ಹತ್ತು ಗ್ರಾಂನ ಚಿನ್ನದ ಬೆಲೆಯು 1,900 ರೂಪಾಯಿ ಹೆಚ್ಚಳವಾಗಿದೆ.

24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭರ್ಜರಿ ಹೆಚ್ಚಳವಾಗಿದೆ. 24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 13,277 ರೂಪಾಯಿ ಹಾಗೂ ಹತ್ತು ಗ್ರಾಂಗೆ 1,32,770 ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ ಒಂದು ಗ್ರಾಂನ ಬೆಲೆಯು 208 ರೂಪಾಯಿ ಹಾಗೂ ಹತ್ತು ಗ್ರಾಂ ಚಿನ್ನದ ಬೆಲೆಯು 2080 ರೂಪಾಯಿ ಹೆಚ್ಚಳವಾಗಿದೆ.

ಬೆಳ್ಳಿ ಬೆಲೆ ಎಷ್ಟಿದೆ ?

ಚಿನ್ನದ ಬೆಲೆ ಹೆಚ್ಚಾಗಿರುವ ನಡುವೆ ಇನ್ನು ಬೆಳ್ಳಿ ಬೆಲೆಯು ಇಳಿಕೆ ಕಂಡಿದೆ. ಬೆಳ್ಳಿ ಬೆಲೆಯು ಒಂದು ಗ್ರಾಂಗೆ 178 ರೂಪಾಯಿ ಆಗಿದೆ. ಒಂದು ಕೆ.ಜಿಗೆ 1,78,000 ರೂಪಾಯಿ ಆಗಿದೆ. ಒಂದು ಗ್ರಾಂ ಬೆಳ್ಳಿ ಬೆಲೆಯು 1.90 ರೂಪಾಯಿ ಹಾಗೂ ಒಂದು ಕೆ.ಜಿ ಮೇಲೆ 1,900 ರೂಪಾಯಿ ಕಡಿಮೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+