Gold Rate Jan 6: ಬಂಗಾರ ಪ್ರಿಯರಿಗೆ ಅಲ್ಪ ಸಮಾಧಾನ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ
ಚಿನ್ನ ಪ್ರಿಯರಿಗೆ ನಿರಂತರ ನಿರಾಸೆ ಮುಂದುವರಿದಿದೆ. ಕಳೆದ ವರ್ಷ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೆಗೆದುಕೊಂಡ ನಿರ್ಧಾರಗಳಿಂದಲೇ ಹಲವು ಬಾರಿ ಚಿನ್ನ ಮತ್ತು ಷೇರುಮಾರುಕಟ್ಟೆಯ ಮೇಲೆ ಪರಿಣಾಮ ಬೀರಿತ್ತು. ಇದೀಗ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವೆನೆಜುವೆಲಾ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ ಮಾಡಿರುವುದು ಸಹಜವಾಗಿಯೇ ಚಿನ್ನ ಮತ್ತು ಬೆಳ್ಳಿ ಸೇರಿದಂತೆ ವಿವಿಧ ವಸ್ತುಗಳ ಬೆಲೆ ದಿಢೀರ್ ಹೆಚ್ಚಳವಾಗಿದೆ. ಜನವರಿ 6ಕ್ಕೆ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ಎನ್ನುವ ವಿವರ ಇಲ್ಲಿದೆ.
ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಮಂಗಳವಾರ / ಜನವರಿ 6ರಂದು ಸಹ ಚಿನ್ನದ ಬೆಲೆ ಭರ್ಜರಿ ಹೆಚ್ಚಳವಾಗಿದೆ. ಚಿನ್ನದೊಂದಿಗೆ ಬೆಳ್ಳಿಯ ಬೆಲೆಯೂ ಹೆಚ್ಚಳವಾಗುತ್ತಿದ್ದು, ಈ ವಾರ ಪೂರ್ತಿ ಬಂಗಾರ ಪ್ರಿಯರಿಗೆ ಶಾಕ್ ಫಿಕ್ಸ್ ಅಂತಲೇ ಹೇಳಲಾಗುತ್ತಿದೆ. ಮುಖ್ಯವಾಗಿ ಚಿನ್ನ ಖರೀದಿ ಮಾಡಬೇಕು ಎನ್ನುವವರಿಗೆ ಭಾರೀ ಆತಂಕ ಶುರುವಾಗಿದೆ. ಅಲ್ಲದೇ ಬಂಗಾರದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಇಂದಿನ ಚಿನ್ನದ ಬೆಲೆ ಏರಿಕೆಯು ಅಲ್ಪ ಪ್ರಮಾಣದಲ್ಲಿ ಆಗಿರುವುದು ಚಿನ್ನ ಪ್ರಿಯರಿಗೆ ಅಲ್ಪ ಸಮಾಧಾನ ಎಂದು ಹೇಳಬಹುದು.

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 10,412 ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ ಒಂದು ಗ್ರಾಂ ಮೇಲೆ 45 ರೂಪಾಯಿ ಹೆಚ್ಚಳವಾಗಿದೆ. ಇನ್ನು 10 ಗ್ರಾಂನ ಚಿನ್ನದ ಬೆಲೆಯು 1,04,120 ಆಗಿದೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ 450 ರೂಪಾಯಿ ಹೆಚ್ಚಳವಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್‌ನ ಚಿನ್ನದ ಬೆಲೆಯಲ್ಲೂ ಸಹ ಹೆಚ್ಚಳವಾಗಿದೆ. 22 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ಜನವರಿ 6ರಂದು ಒಂದು ಗ್ರಾಂಗೆ 12,725 ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ 55 ರೂಪಾಯಿ ಹೆಚ್ಚಳವಾಗಿದೆ. 10 ಗ್ರಾಂಗೆ 1,27,250 ರೂಪಾಯಿ ಆಗಿದ್ದು, ನೆನ್ನೆಗೆ ಹೋಲಿಕೆ ಮಾಡಿದರೆ 550 ರೂಪಾಯಿ ಹೆಚ್ಚಳವಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 13,882 ರೂಪಾಯಿ ಆಗಿದೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ 60 ರೂಪಾಯಿ ಹೆಚ್ಚಳವಾಗಿದೆ. ಇನ್ನು 10 ಗ್ರಾಂನ ಚಿನ್ನದ ಬೆಲೆಯು 1,38,820 ರೂಪಾಯಿ ಆಗಿದೆ. ಜನವರಿ 05ಕ್ಕೆ ಹೋಲಿಕೆ ಮಾಡಿದರೆ ಬರೋಬ್ಬರಿ 600 ರೂಪಾಯಿ ಹೆಚ್ಚಳವಾಗಿದೆ.
ಬೆಳ್ಳಿ ಬೆಲೆ ಹೇಗಿದೆ ?
ಇನ್ನು ಚಿನ್ನದೊಂದಿಗೆ ಬೆಳ್ಳಿ ಬೆಲೆಯಲ್ಲೂ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 253 ರೂಪಾಯಿ ಆಗಿದ್ದು, ಒಂದು ಗ್ರಾಂ ಬೆಳ್ಳಿ ಬೆಲೆಯು 5 ರೂಪಾಯಿ ಹೆಚ್ಚಳವಾಗಿದೆ. ಒಂದು ಕೆ.ಜಿ ಬೆಳ್ಳಿ ಬೆಲೆಯು 2,53,000 ರೂ. ಆಗಿದ್ದು, ನೆನ್ನೆಗೆ ಹೋಲಿಕೆ ಮಾಡಿದರೆ ಒಂದು ಕೆ.ಜಿ ಬೆಳ್ಳಿ ಬೆಲೆಯ ಮೇಲೆ 5,000 ಸಾವಿರ ರೂಪಾಯಿ ಹೆಚ್ಚಳವಾಗಿದೆ.












Click it and Unblock the Notifications