Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ

Gold Rate March 12: ಯುದ್ಧದ ಕಾರ್ಮೋಡದ ನಡುವೆಯೇ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆಯಾಗಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಯು ಭರ್ಜರಿ ಇಳಿಕೆಯಾಗಿದೆ. ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿರುವುದು ಬಂಗಾರ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ. ಚಿನ್ನದ ಬೆಲೆಯು ಮಾರ್ಚ್ 12ರ ಗುರುವಾರ 10,900 ರೂ. ಇಳಿಕೆಯಾಗಿದೆ. ಮಾರ್ಚ್ 12ರ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಾಗಿದೆ ಎನ್ನುವ ವಿವರ ಇಲ್ಲಿದೆ.

ಕಳೆದ ಮೂರು ದಿನಗಳಿಂದಲೂ ಚಿನ್ನ ಮತ್ತು ಬೆಳ್ಳಿ ಬೆಲೆಯು ಭಾರೀ ಹೆಚ್ಚಳವಾಗಿತ್ತು. ಇದೀಗ ಚಿನ್ನ ಮತ್ತು ಬೆಳ್ಳಿ ಬೆಲೆಯು ಇಳಿಕೆಯಾಗಿದೆ. ಭಾರೀ ಮೊತ್ತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಕಡಿಮೆಯಾಗಿದೆ. ಕಚ್ಚಾ ತೈಲ/ ಇಂಧನ ಕೊರತೆ ಹಾಗೂ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ಭಾರೀ ವ್ಯತ್ಯಾಸವಾಗುತ್ತಿದ್ದು, ಈ ನಡುವೆ ಚಿನ್ನದ ಬೆಲೆಯು ಅಚ್ಚರಿಯ ರೀತಿಯಲ್ಲಿ ಬದಲಾಗಿದೆ.

Gold

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 12,167 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,21,670 ರೂ. ಆಗಿದೆ. 18 ಕ್ಯಾರೆಟ್ ಚಿನ್ನದ ಬೆಲೆಯು ಬುಧವಾರಕ್ಕೆ ಹೋಲಿಕೆ ಮಾಡಿದರೆ 1 ಗ್ರಾಂ ಚಿನ್ನದ ಬೆಲೆಯು 81 ರೂಪಾಯಿ ಕಡಿಮೆಯಾಗಿದೆ. ಅಲ್ಲದೆ 10 ಗ್ರಾಂನ ಬೆಲೆಯು 810 ರೂಪಾಯಿ ಕಡಿಮೆಯಾಗಿದೆ.

22 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 14,870 ರೂಪಾಯಿ ಆಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು 1,48,700 ರೂ. ಆಗಿದೆ. ಬುಧವಾರಕ್ಕೆ ಹೋಲಿಕೆ ಮಾಡಿದರೆ 1 ಗ್ರಾಂ ಚಿನ್ನದ ಮೇಲೆ 100 ರೂ. ಹಾಗೂ 10 ಗ್ರಾಂನ ಮೇಲೆ 1,000 ರೂಪಾಯಿ ಕಡಿಮೆಯಾಗಿದೆ.

24 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 16,222 ರೂ. ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,62,220 ರೂ. ಆಗಿದೆ. ಬುಧವಾರಕ್ಕೆ ಹೋಲಿಕೆ ಮಾಡಿದರೆ 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಮೇಲೆ 109 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,090 ರೂಪಾಯಿ ಕಡಿಮೆಯಾಗಿದೆ.

ಬೆಳ್ಳಿ ಬೆಲೆ ಎಷ್ಟಾಗಿದೆ ?

ಇನ್ನು ಚಿನ್ನದೊಂದಿಗೆ ಬೆಳ್ಳಿ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 280 ರೂಪಾಯಿ ಆಗಿದೆ. ಪ್ರತಿ ಕೆ.ಜಿ ಬೆಳ್ಳಿ ಬೆಲೆಯು 2,80,000 ರೂ. ಆಗಿದೆ. ಬುಧವಾರಕ್ಕೆ ಹೋಲಿಕೆ ಮಾಡಿದರೆ 1 ಗ್ರಾಂ ಬೆಳ್ಳಿ ಬೆಲೆಯು 10 ರೂಪಾಯಿ ಹಾಗೂ ಒಂದು ಕೆ.ಜಿಯ ಮೇಲೆ 10,000 ರೂ. ಇಳಿಕೆಯಾಗಿದೆ.

Gold ಚಿನ್ನದ ಬೆಲೆಯು 10,900 ರೂ. ಇಳಿಕೆ

ಇನ್ನು 24 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆಯು ಮಾರ್ಚ್‌ 12ರ ಗುರುವಾರದಂದು ಬರೋಬ್ಬರಿ 10,900 ರೂ. ಕಡಿಮೆಯಾಗಿದೆ. ಈ ಮೂಲಕ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ದಾಖಲೆಯ ಕುಸಿತವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+