Gold Rate May 20: ಚಿನ್ನದ ಬೆಲೆಯಲ್ಲಿ ನಿರಂತರ ಮೂರನೇ ದಿನವೂ ಹೆಚ್ಚಳ: ಬೆಳ್ಳಿ ಬೆಲೆಯಲ್ಲಿ ಮಾತ್ರ ಭರ್ಜರಿ ಇಳಿಕೆ
Gold Rate May 20: ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಹೆಚ್ಚಳವಾಗುತ್ತಿದೆ. ಕಳೆದ ಮೂರು ದಿನಗಳಿಂದಲೂ ಚಿನ್ನದ ಬೆಲೆಯು ನಿರಂತರವಾಗಿ ಹೆಚ್ಚಳವಾಗುತ್ತಿದೆ. ಮುಂದಿನ ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಚಿನ್ನದ ಬೆಲೆಯು 18, 22 ಹಾಗೂ 24 ಕ್ಯಾರೆಟ್ ಬೆಲೆಯಲ್ಲಿ ಹೆಚ್ಚಳವಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲಿ ಬುಧವಾರ ಭರ್ಜರಿ ಇಳಿಕೆಯಾಗಿದೆ. ಈ ಮೂಲಕ ಚಿನ್ನ ಪ್ರಿಯರಿಗೆ ಆತಂಕ ಶುರುವಾಗಿದೆ. ಮೇ 20ರ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ. ಬೆಂಗಳೂರು ಸೇರಿದಂತೆ ಭಾರತದಾದ್ಯಂತ ಚಿನ್ನದ ಬೆಲೆಯಲ್ಲಿ ಭಾರೀ ಹೆಚ್ಚಳವಾಗಿದೆ. ವಿಶ್ವದಾದ್ಯಂತ ಕಚ್ಚಾ ತೈಲ ಬೆಲೆಯ ಹೆಚ್ಚಳ, ಡಾಲರ್‌ನ ಮುಂದೆ ರೂಪಾಯಿ ಮೌಲ್ಯವು ನಿರಂತರವಾಗಿ ಕುಸಿಯುತ್ತಿರುವುದು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರಿಗೆ ಚಿನ್ನ ಖರೀದಿ ಮಾಡಬೇಡಿ ಎಂದು ಹೇಳಿದ್ದೂ ಸೇರಿದಂತೆ ಹಲವು ಕಾರಣಗಳಿಗೆ ಚಿನ್ನ ಮತ್ತು ಬೆಳ್ಳಿ ಬೆಲೆಯು ನಿರಂತರವಾಗಿ ಹೆಚ್ಚಳವಾಗುತ್ತಿದೆ. ಚಿನ್ನ ಖರೀದಿ ಪ್ರಮಾಣ ಇಳಿಕೆಯಾಗದೆ ಇರುವುದು ಹಾಗೂ ಕೆಲವರು ಆತಂಕದಲ್ಲಿ ಚಿನ್ನ - ಬೆಳ್ಳಿ ಖರೀದಿಗೆ ಮುಗಿ ಬಿದ್ದಿರುವುದು ಸಹ ಪರೋಕ್ಷವಾಗಿ ಬೆಲೆ ಏರಿಕೆ ಆಗಿದೆ.
ಎಷ್ಟಾಗಿದೆ ಮೇ 20ರ ವಿವಿಧ ಕ್ಯಾರೆಟ್ ಚಿನ್ನದ ಬೆಲೆ
ಮೇ 20ರ ಬುಧವಾರದಂದು ಚಿನ್ನದ ಬೆಲೆಯಲ್ಲಿ ಭಾರೀ ಹೆಚ್ಚಳವಾಗಿದೆ. ಚಿನ್ನದ ಬೆಲೆಯಲ್ಲಿ ಹೆಚ್ಚಳವಾಗುತ್ತಿರುವುದು ಸತತ ಮೂರನೇ ದಿನವಾಗಿದೆ. ಇಂದೂ ಸಹ 18, 22 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ ಏರಿಕೆಯಾಗಿದೆ.

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 11,876 ರೂ. ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,18,760 ರೂ. ಆಗಿದೆ. ಇನ್ನು ಮಂಗಳವಾರಕ್ಕೆ ಹೋಲಿಕೆ ಮಾಡಿದರೆ, 18 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 98 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 980 ರೂಪಾಯಿ ಹೆಚ್ಚಳವಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 14,515 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,45,150 ರೂ. ಆಗಿದೆ. ಮೇ 19ಕ್ಕೆ ಹೋಲಿಕೆ ಮಾಡಿದರೆ, 1 ಗ್ರಾಂ ಚಿನ್ನದ ಬೆಲೆಯು 120 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಮೇಲೆ 1,200 ರೂಪಾಯಿ ಕಡಿಮೆಯಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭರ್ಜರಿ ಹೆಚ್ಚಳವಾಗಿದೆ. 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 15,835 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,58,350 ರೂ. ಆಗಿದೆ. ಮಂಗಳವಾರಕ್ಕೆ ಹೋಲಿಕೆ ಮಾಡಿದರೆ 1 ಗ್ರಾಂ ಚಿನ್ನದ ಬೆಲೆಯು 131 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯಲ್ಲಿ 1,310 ರೂಪಾಯಿ ಹೆಚ್ಚಳವಾಗಿದೆ.
ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ
ಬೆಳ್ಳಿ ಬೆಲೆಯು ಒಂದು ಗ್ರಾಂಗೆ 280 ರೂಪಾಯಿ ಹಾಗೂ ಒಂದು ಕೆ.ಜಿ ಬೆಳ್ಳಿ ಬೆಲೆಯು 2.80 ಲಕ್ಷ ರೂ. ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ ಬೆಳ್ಳಿ ಬೆಲೆಯು 1 ಗ್ರಾಂನ ಮೇಲೆ 5 ರೂಪಾಯಿ ಕಡಿಮೆಯಾಗಿದ್ದು, ಒಂದು ಕೆ.ಜಿ ಬೆಳ್ಳಿ ಬೆಲೆಯು 5000 ಸಾವಿರ ರೂಪಾಯಿ ಕಡಿಮೆಯಾಗಿದೆ.














Click it and Unblock the Notifications