Gold Rate May 21: ಚಿನ್ನದೊಂದಿಗೆ ಬೆಳ್ಳಿ ಬೆಲೆಯಲ್ಲೂ ಜಾಕ್‌ಪಾಟ್: ಬಂಗಾರ ಪ್ರಿಯರಿಗೆ ನಿರಂತರ ಶಾಕ್, ಎಷ್ಟಿದೆ ಇಂದಿನ ಬೆಲೆ

Gold Rate May 21: ದೇಶದಾದ್ಯಂತ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಹೆಚ್ಚಳವಾಗಿದೆ. ಕಳೆದ ಮೂರು ದಿನಗಳಿಂದಲೂ ನಿರಂತರವಾಗಿ ಚಿನ್ನದ ಬೆಲೆಯು ಹೆಚ್ಚಳವಾಗುತ್ತಿದೆ. ಆದರೆ ಬೆಳ್ಳಿಯ ಬೆಲೆಯಲ್ಲಿ ಇಳಿಕೆಯಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಚಿನ್ನವನ್ನು ಖರೀದಿ ಮಾಡಬೇಡಿ ಎಂದು ಹೇಳಿದ ಮೇಲೆ ಚಿನ್ನದ ಬೆಲೆಯು ಇಳಿಕೆಯಾಗಬೇಕಾಗಿತ್ತು. ಆದರೆ, ಜನರು ಆತಂಕಗೊಂಡು ಚಿನ್ನವನ್ನು ಖರೀದಿ ಮಾಡುವುದಕ್ಕೆ ಪ್ರಾರಂಭಿಸಿದ್ದಾರೆ. ಜನ ಹೆಚ್ಚು ಹೆಚ್ಚು ಚಿನ್ನವನ್ನು ಖರೀದಿ ಮಾಡುತ್ತಿರುವುದು ಸಹ ಚಿನ್ನದ ಬೆಲೆಯು ಹೆಚ್ಚಳವಾಗುವುದಕ್ಕೆ ಕಾರಣವಾಗಿದೆ. ಆದರೆ ಅಚ್ಚರಿಯ ರೀತಿಯಲ್ಲಿ ಬೆಳ್ಳಿಯ ಬೆಲೆಯು ಕಡಿಮೆಯಾಗಿತ್ತು. ಆದರೆ ಮೇ 21ರಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎರಡರಲ್ಲೂ ಭಾರೀ ಹೆಚ್ಚಳವಾಗಿದೆ. ಹಾಗಾದರೆ ಮೇ 21ರಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಎಷ್ಟು ಹೆಚ್ಚಳವಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ. ಮೇ 21ರಂದು 24 ಕ್ಯಾರೆಟ್ ಚಿನ್ನದ ಬೆಲೆಯು ಒಂದು ಗ್ರಾಂಗೆ 15,993 ರೂಪಾಯಿ ಆಗಿದೆ. 22 ಕ್ಯಾರೆಟ್ ಚಿನ್ನದ ಬೆಲೆಯು ಒಂದು ಗ್ರಾಂಗೆ 14,660 ರೂ. ಆಗಿದೆ ಹಾಗೂ 18 ಕ್ಯಾರೆಟ್ ಚಿನ್ನದ ಬೆಲೆಯು 11,995 ರೂ. ಆಗಿದೆ.

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂ 11,995 ರೂ. ಹಾಗೂ 10 ಗ್ರಾಂಗೆ 1,19,950 ರೂ. ಆಗಿದೆ. ಬುಧವಾರಕ್ಕೆ ಹೋಲಿಕೆ ಮಾಡಿದರೆ 18 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 37 ರೂಪಾಯಿ ಹೆಚ್ಚಳವಾಗಿದೆ. 10 ಗ್ರಾಂ ಚಿನ್ನದ ಬೆಲೆಯು 370 ರೂಪಾಯಿ ಹೆಚ್ಚಳವಾಗಿದೆ.

Gold Rate Today

22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 14,660 ರೂಪಾಯಿ ಆಗಿದೆ. 10 ಗ್ರಾಂಗೆ 1,46,600 ರೂ. ಆಗಿದೆ. ಬುಧವಾರಕ್ಕೆ ಹೋಲಿಕೆ ಮಾಡಿದರೆ, 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಮೇಲೆ 45 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಮೇಲೆ 450 ರೂಪಾಯಿ ಹೆಚ್ಚಳವಾಗಿದೆ.

Gold: ಗದಗ - ಲಕ್ಕುಂಡಿ ಚಿನ್ನದ ನಿಧಿ ಪ್ರಕರಣಕ್ಕೆ ರೋಚಕ ತಿರುವು: 664 ಗ್ರಾಂ ಚಿನ್ನದ ಮೌಲ್ಯಕ್ಕೆ ಟ್ವಿಸ್ಟ್‌, ಹೊಸ ವಿಷಯ ರಿವೀಲ್
Gold: ಗದಗ - ಲಕ್ಕುಂಡಿ ಚಿನ್ನದ ನಿಧಿ ಪ್ರಕರಣಕ್ಕೆ ರೋಚಕ ತಿರುವು: 664 ಗ್ರಾಂ ಚಿನ್ನದ ಮೌಲ್ಯಕ್ಕೆ ಟ್ವಿಸ್ಟ್‌, ಹೊಸ ವಿಷಯ ರಿವೀಲ್

24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 15,993 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,59,930 ರೂ. ಆಗಿದೆ. ಬುಧವಾರಕ್ಕೆ ಹೋಲಿಕೆ ಮಾಡಿದರೆ 24 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂನ ಮೇಲೆ 49 ರೂಪಾಯಿ ಹಾಗೂ 10 ಗ್ರಾಂನ ಮೇಲೆ 490 ರೂಪಾಯಿ ಹೆಚ್ಚಳವಾಗಿದೆ.

Gold Rate May 20: ಚಿನ್ನದ ಬೆಲೆಯಲ್ಲಿ ನಿರಂತರ ಮೂರನೇ ದಿನವೂ ಹೆಚ್ಚಳ: ಬೆಳ್ಳಿ ಬೆಲೆಯಲ್ಲಿ ಮಾತ್ರ ಭರ್ಜರಿ ಇಳಿಕೆ
Gold Rate May 20: ಚಿನ್ನದ ಬೆಲೆಯಲ್ಲಿ ನಿರಂತರ ಮೂರನೇ ದಿನವೂ ಹೆಚ್ಚಳ: ಬೆಳ್ಳಿ ಬೆಲೆಯಲ್ಲಿ ಮಾತ್ರ ಭರ್ಜರಿ ಇಳಿಕೆ

ಬೆಳ್ಳಿ ಬೆಲೆಯಲ್ಲೂ ಜಿಗಿತ

ಇನ್ನು ಕಳೆದ ಎರಡು ಮೂರು ದಿನಗಳಿಂದ ಚಿನ್ನದ ಬೆಲೆ ಹೆಚ್ಚಳವಾದರೂ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿರಲಿಲ್ಲ. ಇದೀಗ ಚಿನ್ನದೊಂದಿಗೆ ಬೆಳ್ಳಿಯ ಬೆಲೆಯಲ್ಲೂ ಹೆಚ್ಚಳವಾಗಿದೆ. ಬೆಳ್ಳಿಯ ಬೆಲೆಯು ಒಂದು ಗ್ರಾಂಗೆ 285 ರೂಪಾಯಿ ಆಗಿದೆ. ಒಂದು ಕೆ.ಜಿ ಬೆಳ್ಳಿ ಬೆಲೆಯು 2.85 ಲಕ್ಷ ರೂ. ಆಗಿದೆ. ಮೇ 20ಕ್ಕೆ ಹೋಲಿಕೆ ಮಾಡಿದರೆ 1 ಗ್ರಾಂ ಬೆಳ್ಳಿ ಬೆಲೆಯು 5 ರೂಪಾಯಿ ಹಾಗೂ ಒಂದು ಕೆ.ಜಿ ಬೆಳ್ಳಿ ಬೆಲೆಯು 5,000 ರೂಪಾಯಿ ಹೆಚ್ಚಳವಾಗಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಯು ನಿರಂತರವಾಗಿ ಹೆಚ್ಚಳವಾಗುತ್ತಿರುವುದು ಬಂಗಾರ - ಲೋಹ ಪ್ರಿಯರಲ್ಲಿ ಆತಂಕವನ್ನುಂಟು ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+