ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏ. 10ರಂದು ದೇಶದ ವಿವಿಧ ನಗರಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ವಿವರ

|
Google Oneindia Kannada News

ಬೆಂಗಳೂರು, ಏಪ್ರಿಲ್ 10: ದೇಶಾದ್ಯಂತ ಚಿನ್ನದ ದರದಲ್ಲಿ ಮತ್ತೆ ಏರಿಕೆಯಾಗಿದೆ. ಈ ವಾರದಲ್ಲಿ ಒಂದೆರಡು ದಿನ ಅಲ್ಪ ಕರುಣೆ ತೋರಿಸಿದ್ದ ಹಳದಿ ಲೋಹ, ಅಧಿಕ ದರದೊಂದಿಗೆ ವಾರವನ್ನು ಅಂತ್ಯಗೊಳಿಸಿದೆ. ಸೋಮವಾರ ಎಂಸಿಎಕ್ಸ್‌ನಲ್ಲಿ ಪ್ರತಿ 10 ಗ್ರಾಂಗೆ 45,355 ರೂ.ದೊಂದಿಗೆ ಮತ್ತು ಬೆಳ್ಳಿ ಪ್ರತಿ ಒಂದು ಕೆಜಿಗೆ 65,070 ರೂಪಾಯಿಯೊಂದಿಗೆ ಮಾರಾಟಗೊಂಡಿತ್ತು. ವಾರಾಂತ್ಯದ ವೇಳೆ ಚಿನ್ನದ ದರ 46,000 ರೂ ದಾಟಿದೆ.

ದೇಶದಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ ಸರಾಸರಿ 4,457 ರೂಪಾಯಿ ಇದ್ದರೆ, 24 ಕ್ಯಾರಟ್‌ನ ಪ್ರತಿ ಒಂದು ಗ್ರಾಂ ಚಿನ್ನದ ದರ 4,557 ರೂಪಾಯಿ ಇದೆ. ದೇಶದಲ್ಲಿ ಚಿನ್ನದ ಸರಾಸರಿ ದರ ಪ್ರತಿ 10 ಗ್ರಾಂಗೆ 10 ರೂಪಾಯಿ ಹೆಚ್ಚಳದೊಂದಿಗೆ 44,570 ರೂಪಾಯಿದೆ ಏರಿಕೆಯಾಗಿದೆ. 24 ಕ್ಯಾರಟ್‌ನ ಚಿನ್ನದ ದರ ಕೂಡ 10 ರೂ. ಹೆಚ್ಚಿದ್ದು, ಪ್ರತಿ 10 ಗ್ರಾಂಗೆ 45,570 ರೂಪಾಯಿಯಾಗಿದೆ.

ಚಿನ್ನದ ಪ್ರಿಯರಿಗೆ ಈ ತಿಂಗಳಲ್ಲಿ ಸಿಗಲಿದೆ ಸುವರ್ಣ ಹೂಡಿಕೆ ಅವಕಾಶ ! ಚಿನ್ನದ ಪ್ರಿಯರಿಗೆ ಈ ತಿಂಗಳಲ್ಲಿ ಸಿಗಲಿದೆ ಸುವರ್ಣ ಹೂಡಿಕೆ ಅವಕಾಶ !

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ವಹಿವಾಟು ಬದಲಾದಂತೆ ಭಾರತದಲ್ಲಿನ ಚಿನ್ನದ ದರದಲ್ಲಿಯೂ ಬದಲಾವಣೆಗಳಾಗಲಿವೆ. ಹೀಗಾಗಿ ದಿನದ ಚಿನ್ನ-ಬೆಳ್ಳಿ ದರದಲ್ಲಿ ಬದಲಾವಣೆಗಳಾಗುವ ಸಾಧ್ಯತೆ ಇದೆ.

ದೆಹಲಿಯಲ್ಲಿ ಬೆಲೆ ಸ್ಥಿರ

ದೆಹಲಿಯಲ್ಲಿ ಬೆಲೆ ಸ್ಥಿರ

ರಾಜಧಾನಿ ದೆಹಲಿಯಲ್ಲಿ ಬಂಗಾರದ ಬೆಲೆಯಲ್ಲಿ ಶನಿವಾರ ಬೆಳಿಗ್ಗೆ ಅಲ್ಪ ಏರಿಕೆಯಾಗಿದೆ. 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ 10 ರೂಪಾಯಿ ಹೆಚ್ಚಳದೊಂದಿಗೆ 45,170 ರೂಪಾಯಿ ಇದೆ. 24 ಕ್ಯಾರಟ್ ಚಿನ್ನ ಬೆಲೆ ಪ್ರತಿ 10 ಗ್ರಾಂ 10 ರೂ ಹೆಚ್ಚಿದ್ದು, 49,270 ರೂಪಾಯಿಗೆ ತಲುಪಿದೆ.

ಬೆಂಗಳೂರಲ್ಲಿ ಚಿನ್ನದ ಬೆಲೆ

ಬೆಂಗಳೂರಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಕೂಡ ಚಿನ್ನದ ದರ ಇಳಿಕೆಯಾಗಿದೆ. 22 ಕ್ಯಾರಟ್ ಚಿನ್ನದ ಪ್ರತಿ ಹತ್ತು ಗ್ರಾಂ ಚಿನ್ನದ ದರ 100 ರೂಪಾಯಿ ಇಳಿಕೆಯಾಗಿದ್ದು, 43,400 ರೂಪಾಯಿ ತಲುಪಿದೆ. 24 ಕ್ಯಾರಟ್‌ನ 10 ಗ್ರಾಂ ಚಿನ್ನದ ದರ 110 ರೂ ಇಳಿಕೆಯೊಂದಿಗೆ 47,350 ರೂಪಾಯಿಗೆ ಇಳಿದಿದೆ.

ಚೆನ್ನೈನಲ್ಲಿ ದರ ಇಳಿಕೆ

ಚೆನ್ನೈನಲ್ಲಿ ದರ ಇಳಿಕೆ

ಚೆನ್ನೈ ನಗರದಲ್ಲಿ ಕೂಡ ಬಂಗಾರದ ದರ ಇಳಿಕೆಯಾಗಿದೆ. 22 ಕ್ಯಾರಟ್‌ನ ಪ್ರತಿ 10 ಗ್ರಾಂಗೆ 70 ರೂ ತಗ್ಗಿದ್ದು, 43,800 ರೂ.ಗೆ ತಲುಪಿದೆ. ಹಾಗೆಯೇ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂ 120 ರೂ. ಇಳಿಕೆಯಾಗಿದ್ದು, 47,780 ರೂಪಾಯಿಗೆ ಮಾರಾಟವಾಗುತ್ತಿದೆ.

'ಚಿನ್ನ' ಖರೀದಿಸುವವರಿಗೆ ಬಂಗಾರದಂಥ ಸುದ್ದಿ ಕೊಟ್ಟ ರಾಜ್ಯ ಬಿಜೆಪಿ ಸರ್ಕಾರ!'ಚಿನ್ನ' ಖರೀದಿಸುವವರಿಗೆ ಬಂಗಾರದಂಥ ಸುದ್ದಿ ಕೊಟ್ಟ ರಾಜ್ಯ ಬಿಜೆಪಿ ಸರ್ಕಾರ!

ಮುಂಬೈನಲ್ಲಿ ಚಿನ್ನದ ಬೆಲೆ ಹೆಚ್ಚಳ

ಮುಂಬೈನಲ್ಲಿ ಚಿನ್ನದ ಬೆಲೆ ಹೆಚ್ಚಳ

ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 44,570 ರೂಪಾಯಿಗೆ ಏರಿಕೆಯಾಗಿದೆ. 24 ಕ್ಯಾರಟ್ ಚಿನ್ನ 45,570 ರೂ. ದರಕ್ಕೆ ಮಾರಾಟವಾಗುತ್ತಿದೆ. ಕೇರಳದಲ್ಲಿ ಹಳದಿ ಲೋಹದ ದರ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 43,400 ರೂ ಮತ್ತು 24 ಕ್ಯಾರಟ್ ಹಳದಿ ಲೋಹ 47,350 ರೂಪಾಯಿಗೆ ಮಾರಾಟವಾಗುತ್ತಿದೆ. ಕೋಲ್ಕತಾದಲ್ಲಿ 22 ಕ್ಯಾರಟ್ ಚಿನ್ನಕ್ಕೆ 10 ರೂ ಹೆಚ್ಚಳವಾಗಿದ್ದು, 45,450 ರೂಪಾಯಿ ಮತ್ತು 24 ಕ್ಯಾರಟ್ ಚಿನ್ನಕ್ಕೆ 48,150 ರೂ ದರವಿದೆ.

ದೇಶದಲ್ಲಿ ಬೆಳ್ಳಿ ಬೆಲೆ

ದೇಶದಲ್ಲಿ ಬೆಳ್ಳಿ ಬೆಲೆ

ದೇಶದಲ್ಲಿ ಬೆಳ್ಳಿ ದರ ಬಹುತೇಕ ನಗರಗಳಲ್ಲಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಪ್ರತಿ ಕೆಜಿಗೆ 500 ರೂಪಾಯಿ ಇಳಿಕೆಯೊಂದಿಗೆ 67,000 ರೂಪಾಯಿಗೆ ತಲುಪಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಯಲ್ಲಿ ಪ್ರತಿ ಕೆಜಿಗೆ 500 ರೂಪಾಯಿ ಅಗ್ಗವಾಗಿದ್ದು, 67,000 ರೂಪಾಯಿಗೆ ಇಳಿದಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ ಒಂದು ಕೆಜಿge 71,600 ರೂಪಾಯಿ ಇದೆ. ಮುಂಬೈನಲ್ಲಿ ಬೆಳ್ಳಿ ದರ ಪ್ರತಿ ಕೆಜಿಗೆ 67,000 ರೂಪಾಯಿ ಇದೆ.

* ಚಿನ್ನ ಮತ್ತು ಬೆಳ್ಳಿ ಬೆಲೆಯು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ದರ ಬದಲಾವಣೆ ಮತ್ತು ಸ್ಥಳೀಯ ತೆರಿಗೆ ನೀತಿಗಳಿಗೆ ಅನುಗುಣವಾಗಿ ಬದಲಾಗುತ್ತದೆ. ಈ ಮಾಹಿತಿ ಬೆಳಿಗ್ಗೆ 10 ಗಂಟೆಯವರೆಗಿನ ಮಾರುಕಟ್ಟೆ ದರ ಬದಲಾವಣೆಯನ್ನು ಆಧರಿಸಿದೆ.

English summary
Gold and silver prices hiked on April 10 in some major cities. Here is the price details of major cities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X