ಏ. 12ರಂದು ದೇಶದ ವಿವಿಧ ನಗರಗಳಲ್ಲಿ ಚಿನ್ನದ ದರ ಏರಿಕೆ
ಬೆಂಗಳೂರು, ಏಪ್ರಿಲ್ 12: ಒಂದು ದಿನದ ಇಳಿಕೆಯ ಬಳಿಕ ಹಳದಿ ಲೋಹದ ದರ ಮತ್ತೆ ಏರಿಕೆಯಾಗಿದೆ. ದೇಶೀ ಮಾರುಕಟ್ಟೆಯಲ್ಲಿ ಚಿನ್ನದ ದರ ಭಾನುವಾರ ಕುಸಿತ ಕಂಡಿತ್ತು. ಆದರೆ ವಾರದ ಆರಂಭದಲ್ಲಿ ವಿವಿಧ ನಗರಗಳಲ್ಲಿ ಮತ್ತೆ ಹೆಚ್ಚಳ ಉಂಟಾಗಿದೆ.
ಸೋಮವಾರ ಎಂಸಿಎಕ್ಸ್ನಲ್ಲಿ 22 ಕ್ಯಾರಟ್ನ ಪ್ರತಿ 10 ಗ್ರಾಂ ಚಿನ್ನದ ದರ 44,710 ರೂ.ದೊಂದಿಗೆ ಮತ್ತು 24 ಕ್ಯಾರಟ್ನ 10 ಗ್ರಾಂ ಚಿನ್ನದ ದರ 45,710 ರೂಪಾಯಿ ಇದೆ.
ದೇಶದಲ್ಲಿ 22 ಕ್ಯಾರಟ್ನ 1 ಗ್ರಾಂ ಚಿನ್ನದ ದರ ಸರಾಸರಿ 4,472 ರೂಪಾಯಿ ಇದ್ದರೆ, 24 ಕ್ಯಾರಟ್ನ ಪ್ರತಿ ಒಂದು ಗ್ರಾಂ ಚಿನ್ನದ ದರ 4,572 ರೂಪಾಯಿ ಇದೆ. ದೇಶದಲ್ಲಿ ಚಿನ್ನದ ಸರಾಸರಿ ದರ ಪ್ರತಿ 10 ಗ್ರಾಂಗೆ 10 ರೂಪಾಯಿ ಹೆಚ್ಚಳದೊಂದಿಗೆ 44,720 ರೂಪಾಯಿಗೆ ಏರಿಕೆಯಾಗಿದೆ. 24 ಕ್ಯಾರಟ್ನ ಚಿನ್ನದ ದರ ಕೂಡ 10 ರೂ. ಹೆಚ್ಚಿದ್ದು, ಪ್ರತಿ 10 ಗ್ರಾಂಗೆ 45,520 ರೂಪಾಯಿಯಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ವಹಿವಾಟು ಬದಲಾದಂತೆ ಭಾರತದಲ್ಲಿನ ಚಿನ್ನದ ದರದಲ್ಲಿಯೂ ಬದಲಾವಣೆಗಳಾಗಲಿವೆ. ಹೀಗಾಗಿ ದಿನದ ಚಿನ್ನ-ಬೆಳ್ಳಿ ದರದಲ್ಲಿ ಬದಲಾವಣೆಗಳಾಗುವ ಸಾಧ್ಯತೆ ಇದೆ.

ದೆಹಲಿಯಲ್ಲಿ ಬೆಲೆ ಹೆಚ್ಚಳ
ರಾಜಧಾನಿ ದೆಹಲಿಯಲ್ಲಿ ಬಂಗಾರದ ಬೆಲೆಯಲ್ಲಿ ಸೋಮವಾರ ಬೆಳಿಗ್ಗೆ ಅಲ್ಪ ಏರಿಕೆಯಾಗಿದೆ. 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 10 ರೂಪಾಯಿ ಹೆಚ್ಚಳದೊಂದಿಗೆ 45,670 ರೂಪಾಯಿ ಇದೆ. 24 ಕ್ಯಾರಟ್ ಚಿನ್ನ ಬೆಲೆ ಪ್ರತಿ 10 ಗ್ರಾಂ 10 ರೂ ಹೆಚ್ಚಿದ್ದು, 49,820 ರೂಪಾಯಿಗೆ ತಲುಪಿದೆ.

ಬೆಂಗಳೂರಲ್ಲಿ ಚಿನ್ನದ ದರ
ಬೆಂಗಳೂರಿನಲ್ಲಿ ಹಳದಿ ಲೋಹ ಅಲ್ಪ ಪ್ರಮಾಣದಲ್ಲಿ ಅಗ್ಗವಾಗಿದೆ. 22 ಕ್ಯಾರಟ್ ಚಿನ್ನದ ಪ್ರತಿ ಹತ್ತು ಗ್ರಾಂ ಚಿನ್ನದ ದರ 10 ರೂಪಾಯಿ ಇಳಿಕೆಯಾಗಿದ್ದು, 43,400 ರೂಪಾಯಿ ತಲುಪಿದೆ. 24 ಕ್ಯಾರಟ್ನ 10 ಗ್ರಾಂ ಚಿನ್ನದ ದರ 10 ರೂ ಇಳಿಕೆಯೊಂದಿಗೆ 47,350 ರೂಪಾಯಿಗೆ ಇಳಿದಿದೆ.

ಚೆನ್ನೈನಲ್ಲಿ ದರ ಇಳಿಕೆ
ಚೆನ್ನೈ ನಗರದಲ್ಲಿ ಕೂಡ ಬಂಗಾರದ ದರ ಕೊಂಚ ತಗ್ಗಿದೆ. 22 ಕ್ಯಾರಟ್ನ ಪ್ರತಿ 10 ಗ್ರಾಂಗೆ 10 ರೂ ತಗ್ಗಿದ್ದು, 43,740 ರೂ.ಗೆ ತಲುಪಿದೆ. ಹಾಗೆಯೇ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂ 10 ರೂ. ಇಳಿಕೆಯಾಗಿದ್ದು, 47,720 ರೂಪಾಯಿಗೆ ಮಾರಾಟವಾಗುತ್ತಿದೆ.

ಮುಂಬೈನಲ್ಲಿ ಚಿನ್ನದ ಬೆಲೆ ಹೆಚ್ಚಳ
ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 44,720 ರೂಪಾಯಿಗೆ ಏರಿಕೆಯಾಗಿದೆ. 24 ಕ್ಯಾರಟ್ ಚಿನ್ನ 45,520 ರೂ. ದರಕ್ಕೆ ಮಾರಾಟವಾಗುತ್ತಿದೆ. ಕೇರಳದಲ್ಲಿ ಹಳದಿ ಲೋಹದ ದರ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 43,400 ರೂ ಮತ್ತು 24 ಕ್ಯಾರಟ್ ಹಳದಿ ಲೋಹ 47,350 ರೂಪಾಯಿಗೆ ಮಾರಾಟವಾಗುತ್ತಿದೆ. ಕೋಲ್ಕತಾದಲ್ಲಿ 22 ಕ್ಯಾರಟ್ ಚಿನ್ನಕ್ಕೆ 10 ರೂ ಹೆಚ್ಚಳವಾಗಿದ್ದು, 45,870 ರೂಪಾಯಿ ಮತ್ತು 24 ಕ್ಯಾರಟ್ ಚಿನ್ನಕ್ಕೆ 48,570 ರೂ ದರವಿದೆ.

ದೇಶದಲ್ಲಿ ಬೆಳ್ಳಿ ಬೆಲೆ
ದೇಶದಲ್ಲಿ ಬೆಳ್ಳಿ ದರ ಬಹುತೇಕ ನಗರಗಳಲ್ಲಿ ಸ್ಥಿರವಾಗಿದೆ. ಬೆಳ್ಳಿ ಬೆಲೆ ಪ್ರತಿ ಕೆಜಿಗೆ 66,900 ರೂಪಾಯಿ ಇದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಯಲ್ಲಿ ಪ್ರತಿ ಕೆಜಿಗೆ 300 ರೂಪಾಯಿ ಅಗ್ಗವಾಗಿದ್ದು, 66,900 ರೂಪಾಯಿಗೆ ಇಳಿದಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ ಒಂದು ಕೆಜಿಗೆ 4,800 ರೂಪಾಯಿ ತಗ್ಗಿದ್ದು, 66,900 ರೂಪಾಯಿ ಇದೆ. ಮುಂಬೈನಲ್ಲಿ ಬೆಳ್ಳಿ ದರ ಪ್ರತಿ ಕೆಜಿಗೆ 66,900 ರೂಪಾಯಿ ಇದೆ.
* ಚಿನ್ನ ಮತ್ತು ಬೆಳ್ಳಿ ಬೆಲೆಯು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ದರ ಬದಲಾವಣೆ ಮತ್ತು ಸ್ಥಳೀಯ ತೆರಿಗೆ ನೀತಿಗಳಿಗೆ ಅನುಗುಣವಾಗಿ ಬದಲಾಗುತ್ತದೆ. ಈ ಮಾಹಿತಿ ಬೆಳಿಗ್ಗೆ 10 ಗಂಟೆಯವರೆಗಿನ ಮಾರುಕಟ್ಟೆ ದರ ಬದಲಾವಣೆಯನ್ನು ಆಧರಿಸಿದೆ
-
ಯುಪಿಎಸ್ಸಿ 2025 ಫಲಿತಾಂಶ ಪ್ರಕಟ: ಪಾಸಾದವರು 958 ಆಕಾಂಕ್ಷಿಗಳು, ಅರ್ಜಿ ಹಾಕಿದ್ದವರು 10 ಲಕ್ಷ ಮಂದಿ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ












Click it and Unblock the Notifications