ಏ. 15ರಂದು ದೇಶದ ವಿವಿಧ ನಗರಗಳಲ್ಲಿ ಚಿನ್ನದ ದರ ಎಷ್ಟಿದೆ?

ಬೆಂಗಳೂರು, ಏಪ್ರಿಲ್ 15: ದೇಶಿ ಮಾರುಕಟ್ಟೆಯಲ್ಲಿ ಬಂಗಾರದ ದರದಲ್ಲಿ ಮತ್ತೆ ಏರಿಕೆಯಾಗಿದೆ. ಬುಧವಾರ ಒಂದು ದಿನ ಅಲ್ಪ ಇಳಿಕೆ ಕಂಡಿದ್ದ ಹಳದಿ ಲೋಹದ ದರ ಪುನಃ ಏರಿಕೆಯಾಗಿದೆ. ಮಾರ್ಚ್ ತಿಂಗಳಲ್ಲಿ ಕೊಂಚ ಇಳಿಕೆಯೊಂದಿಗೆ ಗ್ರಾಹಕರಲ್ಲಿ ಭರವಸೆ ಮೂಡಿಸಿದ್ದ ಚಿನ್ನ, ಏಪ್ರಿಲ್ ತಿಂಗಳಲ್ಲಿ ಮತ್ತಷ್ಟು ಬಿಸಿ ಹೆಚ್ಚಿಸುತ್ತಿದೆ.

ಗುರುವಾರ ಎಂಸಿಎಕ್ಸ್‌ನಲ್ಲಿ ಜೂನ್ ಫ್ಯೂಚರ್‌ ಚಿನ್ನದ ದರ 430 ರೂಪಾಯಿ ಏರಿಕೆಯೊಂದಿಗೆ 47,780 ರೂಪಾಯಿಗೆ ಹೆಚ್ಚಳವಾಗಿದೆ. ದೇಶದಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ ಸರಾಸರಿ 4,486 ರೂಪಾಯಿ ಇದ್ದರೆ, 24 ಕ್ಯಾರಟ್‌ನ ಪ್ರತಿ ಒಂದು ಗ್ರಾಂ ಚಿನ್ನದ ದರ 4,586 ರೂಪಾಯಿ ಇದೆ. ದೇಶದಲ್ಲಿ ಚಿನ್ನದ ಸರಾಸರಿ ದರ ಪ್ರತಿ 10 ಗ್ರಾಂಗೆ 10 ರೂಪಾಯಿ ಏರಿಕೆಯೊಂದಿಗೆ 44,860 ರೂಪಾಯಿಗೆ ಕುಸಿದಿದೆ. 24 ಕ್ಯಾರಟ್‌ನ ಚಿನ್ನದ ದರ ಕೂಡ 10 ರೂ. ತುಟ್ಟಿಯಾಗಿದ್ದು, ಪ್ರತಿ 10 ಗ್ರಾಂಗೆ 45,860 ರೂಪಾಯಿ ಇದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ವಹಿವಾಟು ಬದಲಾದಂತೆ ಭಾರತದಲ್ಲಿನ ಚಿನ್ನದ ದರದಲ್ಲಿಯೂ ಬದಲಾವಣೆಗಳಾಗಲಿವೆ. ಹೀಗಾಗಿ ದಿನದ ಚಿನ್ನ-ಬೆಳ್ಳಿ ದರದಲ್ಲಿ ಬದಲಾವಣೆಗಳಾಗುವ ಸಾಧ್ಯತೆ ಇದೆ.

ದೆಹಲಿಯಲ್ಲಿ ಬೆಲೆ ಹೆಚ್ಚಳ

ದೆಹಲಿಯಲ್ಲಿ ಬೆಲೆ ಹೆಚ್ಚಳ

ರಾಜಧಾನಿ ದೆಹಲಿಯಲ್ಲಿ ಬಂಗಾರದ ಬೆಲೆಯಲ್ಲಿ ಅಲ್ಪ ಏರಿಕೆಯಾಗಿದೆ. 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ 10 ರೂಪಾಯಿ ಹೆಚ್ಚಳದೊಂದಿಗೆ 45,960 ರೂಪಾಯಿಗೆ ತಲುಪಿದೆ. 24 ಕ್ಯಾರಟ್ ಚಿನ್ನ ಬೆಲೆ ಪ್ರತಿ 10 ಗ್ರಾಂ 10 ರೂ ಏರಿದ್ದು, 50,130 ರೂಪಾಯಿಗೆ ತಲುಪಿದೆ.

ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ

ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ

ಬೆಂಗಳೂರಿನಲ್ಲಿ ಸಹ ಹಳದಿ ಲೋಹ ಕೊಂಚ ತುಟ್ಟಿಯಾಗಿದೆ. 22 ಕ್ಯಾರಟ್ ಚಿನ್ನದ ಪ್ರತಿ ಹತ್ತು ಗ್ರಾಂ ಚಿನ್ನದ ದರ 10 ರೂಪಾಯಿ ಏರಿಕೆಯಾಗಿದ್ದು, 43,810 ರೂಪಾಯಿ ತಲುಪಿದೆ. 24 ಕ್ಯಾರಟ್‌ನ 10 ಗ್ರಾಂ ಚಿನ್ನದ ದರ 10 ರೂ ಇಳಿಕೆಯೊಂದಿಗೆ 47,790 ರೂಪಾಯಿಗೆ ಇಳಿದಿದೆ.

ಚೆನ್ನೈನಲ್ಲಿ ದರ ಇಳಿಕೆ

ಚೆನ್ನೈನಲ್ಲಿ ದರ ಇಳಿಕೆ

ಚೆನ್ನೈ ನಗರದಲ್ಲಿ ಕೂಡ ಬಂಗಾರದ ದರ ಅಲ್ಪ ಪ್ರಮಾಣದಲ್ಲಿ ತಗ್ಗಿದೆ. 22 ಕ್ಯಾರಟ್‌ನ ಪ್ರತಿ 10 ಗ್ರಾಂಗೆ 10 ರೂ ತಗ್ಗಿದ್ದು, 43,730 ರೂ.ಗೆ ತಲುಪಿದೆ. ಹಾಗೆಯೇ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂ 10 ರೂ. ಇಳಿಕೆಯಾಗಿದ್ದು, 47,680 ರೂಪಾಯಿಗೆ ಮಾರಾಟವಾಗುತ್ತಿದೆ.

ಮುಂಬೈನಲ್ಲಿ ಚಿನ್ನದ ಬೆಲೆ ಹೆಚ್ಚಳ

ಮುಂಬೈನಲ್ಲಿ ಚಿನ್ನದ ಬೆಲೆ ಹೆಚ್ಚಳ

ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 44,860 ರೂಪಾಯಿಗೆ ಏರಿಕೆಯಾಗಿದೆ. 24 ಕ್ಯಾರಟ್ ಚಿನ್ನ 45,860 ರೂ. ದರಕ್ಕೆ ಮಾರಾಟವಾಗುತ್ತಿದೆ. ಕೇರಳದಲ್ಲಿ ಹಳದಿ ಲೋಹದ ದರ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 43,810 ರೂ ಮತ್ತು 24 ಕ್ಯಾರಟ್ ಹಳದಿ ಲೋಹ 47,790 ರೂಪಾಯಿಗೆ ಮಾರಾಟವಾಗುತ್ತಿದೆ. ಕೋಲ್ಕತಾದಲ್ಲಿ 22 ಕ್ಯಾರಟ್ ಚಿನ್ನಕ್ಕೆ 46,390 ರೂಪಾಯಿ ಮತ್ತು 24 ಕ್ಯಾರಟ್ ಚಿನ್ನಕ್ಕೆ 40,090 ರೂ ದರವಿದೆ.

ದೇಶದಲ್ಲಿ ಬೆಳ್ಳಿ ಬೆಲೆ

ದೇಶದಲ್ಲಿ ಬೆಳ್ಳಿ ಬೆಲೆ

ದೇಶದಲ್ಲಿ ಬೆಳ್ಳಿ ದರ ಬಹುತೇಕ ನಗರಗಳಲ್ಲಿ ಸ್ಥಿರವಾಗಿದೆ. ದೇಶದಲ್ಲಿ ಬೆಳ್ಳಿ ದರ ಸರಾಸರಿ 67,600 ರೂಪಾಯಿಯಲ್ಲಿ ಇದೆ. ಬೆಂಗಳೂರಿನಲ್ಲಿ ಸಹ ಬೆಳ್ಳಿ ಬೆಲೆಯಲ್ಲಿ ಪ್ರತಿ ಕೆಜಿಗೆ 67,600 ರೂಪಾಯಿಯಲ್ಲಿ ಸ್ಥಿರವಾಗಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಒಂದು ಕೆಜಿಗೆ 71,900 ರೂಪಾಯಿ ಇದೆ. ಮುಂಬೈನಲ್ಲಿ ಬೆಳ್ಳಿ ದರ ಪ್ರತಿ ಕೆಜಿಗೆ 67,600 ರೂಪಾಯಿ ಇದೆ.

* ಚಿನ್ನ ಮತ್ತು ಬೆಳ್ಳಿ ಬೆಲೆಯು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ದರ ಬದಲಾವಣೆ ಮತ್ತು ಸ್ಥಳೀಯ ತೆರಿಗೆ ನೀತಿಗಳಿಗೆ ಅನುಗುಣವಾಗಿ ಬದಲಾಗುತ್ತದೆ. ಈ ಮಾಹಿತಿ ಬೆಳಿಗ್ಗೆ 10 ಗಂಟೆಯವರೆಗಿನ ಮಾರುಕಟ್ಟೆ ದರ ಬದಲಾವಣೆಯನ್ನು ಆಧರಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+