ಏ. 2ರಂದು ದೇಶದ ವಿವಿಧ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟು?

ಬೆಂಗಳೂರು, ಏಪ್ರಿಲ್ 2: ದೇಶಿ ಮಾರುಕಟ್ಟೆಯಲ್ಲಿ ಆಭರಣದ ಬೆಲೆಯಲ್ಲಿ ಏರಿಳಿಕೆಯಾಗಿದೆ. ಏಪ್ರಿಲ್ 1ರಂದು ಇಳಿಮುಖ ಕಂಡಿದ್ದ ಚಿನ್ನದ ದರ, ಕೆಲವು ನಗರಗಳಲ್ಲಿ ಹೆಚ್ಚಳವಾಗಿದೆ. ಇನ್ನು ಕೆಲವು ನಗರಗಳಲ್ಲಿ ನಿನ್ನೆಯ ದರವೇ ಸ್ಥಿರವಾಗಿದೆ. ಚಿನ್ನದ ದರ ಫೆಬ್ರವರಿ ತಿಂಗಳಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಕಳೆದ ಮಾರ್ಚ್‌ನಲ್ಲಿ ಇಳಿತದ ನಡುವೆ ಕೊನೆಯ ವಾರದಲ್ಲಿ ಬಂಗಾರ ಅಗ್ಗವಾಗಿತ್ತು. ಶುಕ್ರವಾರ ಹೆಚ್ಚಿನ ನಗರಗಳಲ್ಲಿ ಹಳದಿಲೋಹ ಮತ್ತೆ ತುಟ್ಟಿಯಾಗಿದೆ.

ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (ಎಂಸಿಎಕ್ಸ್) ಚಿನ್ನದ ದರದಲ್ಲಿ ಕೊಂಚ ಏರಿಕೆಯಾಗಿದೆ. ಪ್ರತಿ ಒಂದು ಗ್ರಾಂಗೆ 4,338 ರೂಪಾಯಿ ದರವಿದೆ. 22 ಕ್ಯಾರಟ್ ತೂಕದ ಪ್ರತಿ 10 ಗ್ರಾಂನ ಹಳದಿಲೋಹಕ್ಕೆ 10 ರೂಪಾಯಿ ಏರಿಕೆಯಂತೆ 43,380 ರೂಪಾಯಿಗೆ ತಲುಪಿದೆ. ಹಾಗೆಯೇ 24 ಕ್ಯಾರಟ್ ಚಿನ್ನ ಸಹ 10 ರೂಪಾಯಿ ಹೆಚ್ಚಳದೊಂದಿಗೆ 44,380 ರೂಪಾಯಿಗೆ ಮುಟ್ಟಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ವಹಿವಾಟು ಬದಲಾದಂತೆ ಭಾರತದಲ್ಲಿನ ಚಿನ್ನದ ದರದಲ್ಲಿಯೂ ಬದಲಾವಣೆಗಳಾಗಲಿವೆ. ಹೀಗಾಗಿ ದಿನದ ಚಿನ್ನ-ಬೆಳ್ಳಿ ದರದಲ್ಲಿ ಬದಲಾವಣೆಗಳಾಗುವ ಸಾಧ್ಯತೆ ಇದೆ.

ದೆಹಲಿಯಲ್ಲಿ ಬೆಲೆ ಏರಿಕೆ

ದೆಹಲಿಯಲ್ಲಿ ಬೆಲೆ ಏರಿಕೆ

ಬಂಗಾರದ ಬೆಲೆ ದೆಹಲಿಯಲ್ಲಿ ಪ್ರತಿ ಹತ್ತು ಗ್ರಾಂಗೆ 10 ರೂ ತುಟ್ಟಿಯಾಗಿದೆ. 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ 43,810 ರೂಪಾಯಿಗೆ ತಲುಪಿದೆ. 24 ಕ್ಯಾರಟ್ ಚಿನ್ನ ಬೆಲೆ ಪ್ರತಿ 10 ಗ್ರಾಂ ಚಿನ್ನದ ದರ 47,800 ರೂಪಾಯಿಗೆ ಹೆಚ್ಚಳ ಕಂಡಿದೆ.

ಬೆಂಗಳೂರಲ್ಲಿ ಬಂಗಾರ ತುಟ್ಟಿ

ಬೆಂಗಳೂರಲ್ಲಿ ಬಂಗಾರ ತುಟ್ಟಿ

ಬೆಂಗಳೂರಿನಲ್ಲಿ ಕೂಡ ಬಂಗಾರದ ಬೆಲೆ ಅಲ್ಪ ಏರಿಕೆಯಾಗಿದೆ. ಇಂದು 22 ಕ್ಯಾರಟ್ ಚಿನ್ನದ ಪ್ರತಿ ಹತ್ತು ಗ್ರಾಂಗೆ 10 ರೂಪಾಯಿಯಷ್ಟು ಹೆಚ್ಚಳವಾಗಿದ್ದು, 41,660 ರೂಪಾಯಿ ಇದೆ. ಹಾಗೆಯೇ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ದರ 10 ರೂಪಾಯಿ ಏರಿಕೆಯೊಂದಿಗೆ 44,450 ರೂಪಾಯಿಗೆ ಮಾರಾಟವಾಗುತ್ತಿದೆ. ಮೈಸೂರು ಮತ್ತು ಮಂಗಳೂರಿನಲ್ಲಿ ಕೂಡ ಬಂಗಾರದ ಬೆಲೆ ಇದೇ ರೀತಿ ಇದೆ.

ಚೆನ್ನೈನಲ್ಲಿ ದರ ಏರಿಕೆ

ಚೆನ್ನೈನಲ್ಲಿ ದರ ಏರಿಕೆ

ನೆರೆಯ ಚೆನ್ನೈನಲ್ಲಿ ಚಿನ್ನದ ದರದಲ್ಲಿ ಗುರುವಾರ ಕೊಂಚ ಇಳಿಕೆಯಾಗಿದ್ದ ಹಳದಿ ಲೋಹ ಮತ್ತೆ ಏರಿಕೆಯಾಗಿದೆ. ಪ್ರತಿ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 10 ರೂಪಾಯಿ ಏರಿಕೆಯೊಂದಿಗೆ 42,390 ರೂ.ಗೆ ತಲುಪಿದೆ. ಹಾಗೆಯೇ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂ 46,210 ರೂಪಾಯಿಗೆ ತಲುಪಿದೆ.

ಮುಂಬೈನಲ್ಲಿ ಚಿನ್ನದ ಬೆಲೆ ಹೆಚ್ಚಳ

ಮುಂಬೈನಲ್ಲಿ ಚಿನ್ನದ ಬೆಲೆ ಹೆಚ್ಚಳ

ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 10 ರೂ ಏರಿಕೆಯಾಗಿದ್ದು, 43,380 ರೂಪಾಯಿಗೆ ಹೆಚ್ಚಳ ಕಂಡಿದೆ. 24 ಕ್ಯಾರಟ್ ಚಿನ್ನದ ಬೆಲೆ ಕೂಡ 10 ರೂಪಾಯಿ ಏರಿಕೆಯೊಂದಿಗೆ 44,380 ರೂ. ದರಕ್ಕೆ ಮಾರಾಟವಾಗುತ್ತಿದೆ. ಕೇರಳದಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 41,660 ರೂ ಮತ್ತು 24 ಕ್ಯಾರಟ್ ಹಳದಿ ಲೋಹ 45,450 ರೂಪಾಯಿಗೆ ಮಾರಾಟವಾಗುತ್ತಿದೆ.

ದೇಶದಲ್ಲಿ ಬೆಳ್ಳಿ ಬೆಲೆ

ದೇಶದಲ್ಲಿ ಬೆಳ್ಳಿ ಬೆಲೆ

ದೇಶದಲ್ಲಿ ಒಟ್ಟಾರೆಯಾಗಿ ಬೆಳ್ಳಿ ದರದಲ್ಲಿ ಸಹ ಏರಿಕೆ ಕಂಡಿದೆ. ಬೆಳ್ಳಿ ಬೆಲೆ ಪ್ರತಿ ಕೆಜಿಗೆ 1,400 ರೂಪಾಯಿ ಏರಿಕೆಯಾಗಿದ್ದು, 65,000 ರೂಪಾಯಿ ಇದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಯಲ್ಲಿ ಪ್ರತಿ ಕೆಜಿಗೆ 1,400 ರೂಪಾಯಿ ಹೆಚ್ಚಳದೊಂದಿಗೆ 64,800 ರೂಪಾಯಿಯಲ್ಲಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ 200 ರೂ. ಏರಿಕೆಯಾಗಿದ್ದು, ಒಂದು ಕೆಜಿಗೆ 68,700 ರೂಪಾಯಿ ಇದೆ. ಮುಂಬೈನಲ್ಲಿ ಬೆಳ್ಳಿ ದರ ಪ್ರತಿ ಕೆಜಿಗೆ 65,000 ರೂಪಾಯಿ ಇದೆ.


* ಚಿನ್ನ ಮತ್ತು ಬೆಳ್ಳಿ ಬೆಲೆಯು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ದರ ಬದಲಾವಣೆ ಮತ್ತು ಸ್ಥಳೀಯ ತೆರಿಗೆ ನೀತಿಗಳಿಗೆ ಅನುಗುಣವಾಗಿ ಬದಲಾಗುತ್ತದೆ. ಈ ಮಾಹಿತಿ ಬೆಳಿಗ್ಗೆ 1೦ ಗಂಟೆಯವರೆಗಿನ ಮಾರುಕಟ್ಟೆ ದರ ಬದಲಾವಣೆಯನ್ನು ಆಧರಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+