ಬೆಂಗಳೂರಿನಲ್ಲಿ ಚಿನ್ನದ ದರ ಇಳಿಕೆ: ಯಾವ ನಗರದಲ್ಲಿ ಎಷ್ಟಿದೆ?
ಬೆಂಗಳೂರು, ಏಪ್ರಿಲ್ 20: ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಮಂಗಳವಾರ ಕುಸಿತವಾಗಿದೆ. ಸತತ ಏರಿಕೆಯ ಬಳಿಕ ಗ್ರಾಹಕರಿಗೆ ಆಭರಣ ಖರೀದಿಯಲ್ಲಿ ಅಲ್ಪ ನಿರಾಳತೆ ದೊರಕಿದೆ. ಆದರೆ ಕೆಲವು ನಗರದಲ್ಲಿ ಬಂಗಾರದ ದರ ಮತ್ತೆ ಗಗನಮುಖಿಯಾಗಿದೆ. ಎಂಸಿಎಕ್ಸ್ ಗೋಲ್ಡ್ ಜೂನ್ ಫ್ಯೂಚರ್ ಶೇ 0.45ರ ಕುಸಿತದೊಂದಿಗೆ 10 ಗ್ರಾಂಗೆ 47,380 ರೂಪಾಯಿಗೆ ತಲುಪಿದೆ. ಆದರೆ ಬೆಳ್ಳಿ ದರದಲ್ಲಿ ಏರಿಕೆಯಾಗಿದ್ದು, ಮೇ ಬೆಳ್ಳಿ ಫ್ಯೂಚರ್ ಶೇ 0.45ರ ಏರಿಕೆಯೊಂದಿಗೆ ಒಂದು ಕೆಜಿಗೆ 68,635 ರೂಪಾಯಿಗೆ ಏರಿಕೆಯಾಗಿದೆ.
ದೇಶದಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ ಸರಾಸರಿ 4,508 ರೂಪಾಯಿಗೆ ಏರಿಕೆಯಾಗಿದೆ. 24 ಕ್ಯಾರಟ್‌ನ ಪ್ರತಿ ಒಂದು ಗ್ರಾಂ ಚಿನ್ನದ ದರ 4,608 ರೂಪಾಯಿ ಇದೆ. ದೇಶದಲ್ಲಿ ಚಿನ್ನದ ಸರಾಸರಿ ದರ ಪ್ರತಿ 10 ಗ್ರಾಂಗೆ 10 ರೂಪಾಯಿ ಏರಿಕೆಯೊಂದಿಗೆ 45,080 ರೂಪಾಯಿಗೆ ಹೆಚ್ಚಳ ಕಂಡಿದೆ. 24 ಕ್ಯಾರಟ್‌ನ ಚಿನ್ನದ ದರ ಕೂಡ 10 ರೂ. ತುಟ್ಟಿಯಾಗಿದ್ದು, ಪ್ರತಿ 10 ಗ್ರಾಂಗೆ 46,080 ರೂಪಾಯಿ ಇದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ವಹಿವಾಟು ಬದಲಾದಂತೆ ಭಾರತದಲ್ಲಿನ ಚಿನ್ನದ ದರದಲ್ಲಿಯೂ ಬದಲಾವಣೆಗಳಾಗಲಿವೆ. ಹೀಗಾಗಿ ದಿನದ ಚಿನ್ನ-ಬೆಳ್ಳಿ ದರದಲ್ಲಿ ಬದಲಾವಣೆಗಳಾಗುವ ಸಾಧ್ಯತೆ ಇದೆ.

ದೆಹಲಿಯಲ್ಲಿ ಬೆಲೆ ಹೆಚ್ಚಳ
ರಾಜಧಾನಿ ದೆಹಲಿಯಲ್ಲಿ ಕೂಡ ಬಂಗಾರದ ಬೆಲೆಯಲ್ಲಿ ಅಲ್ಪ ಏರಿಕೆ ಕಂಡಿದೆ. 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ 10 ರೂಪಾಯಿ ಹೆಚ್ಚಳದೊಂದಿಗೆ 46,410 ರೂಪಾಯಿಗೆ ತಲುಪಿದೆ. 24 ಕ್ಯಾರಟ್ ಚಿನ್ನ ಬೆಲೆ ಪ್ರತಿ 10 ಗ್ರಾಂ 10 ರೂ ಏರಿಕೆಯಾಗಿದ್ದು, 50,630 ರೂಪಾಯಿಗೆ ತಲುಪಿದೆ.

ಬೆಂಗಳೂರಲ್ಲಿ ಚಿನ್ನದ ಬೆಲೆ ಇಳಿಕೆ
ಬೆಂಗಳೂರಿನಲ್ಲಿ ಹಳದಿ ಲೋಹದ ದರ ಕೊಂಚ ಅಗ್ಗವಾಗಿದೆ. 22 ಕ್ಯಾರಟ್ ಚಿನ್ನದ ಪ್ರತಿ ಹತ್ತು ಗ್ರಾಂ ಚಿನ್ನದ ದರ 100 ರೂಪಾಯಿ ಇಳಿಕೆಯಾಗಿದ್ದು, 44,150 ರೂಪಾಯಿ ತಲುಪಿದೆ. 24 ಕ್ಯಾರಟ್‌ನ 10 ಗ್ರಾಂ ಚಿನ್ನದ ದರ 110 ರೂ ಇಳಿಕೆಯೊಂದಿಗೆ 48,160 ರೂಪಾಯಿಗೆ ಇಳಿಕೆ ಕಂಡಿದೆ.

ಚೆನ್ನೈನಲ್ಲಿ ದರ ಏರಿಕೆ
ಚೆನ್ನೈ ನಗರದಲ್ಲಿ ಬಂಗಾರದ ದರ ಅಲ್ಪ ಪ್ರಮಾಣದಲ್ಲಿ ಹೆಚ್ಚಳವಾಗಿದೆ. 22 ಕ್ಯಾರಟ್‌ನ ಪ್ರತಿ 10 ಗ್ರಾಂಗೆ 10 ರೂ ಏರಿಕೆಯಾಗಿದ್ದು, 44,960 ರೂ.ಗೆ ತಲುಪಿದೆ. ಹಾಗೆಯೇ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂ 10 ರೂ. ಹೆಚ್ಚಿದ್ದು, 49,040 ರೂಪಾಯಿಗೆ ಮಾರಾಟವಾಗುತ್ತಿದೆ.

ಮುಂಬೈನಲ್ಲಿ ಚಿನ್ನದ ಬೆಲೆ ಹೆಚ್ಚಳ
ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 45,080 ರೂಪಾಯಿಗೆ ಏರಿಕೆಯಾಗಿದೆ. 24 ಕ್ಯಾರಟ್ ಚಿನ್ನ 46,080 ರೂ. ದರಕ್ಕೆ ಮಾರಾಟವಾಗುತ್ತಿದೆ. ಕೇರಳದಲ್ಲಿ ಹಳದಿ ಲೋಹದ ದರ ಇಳಿಕೆಯಾಗಿದ್ದು, 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 44,150 ರೂ ಮತ್ತು 24 ಕ್ಯಾರಟ್ ಹಳದಿ ಲೋಹ 48,160 ರೂಪಾಯಿಗೆ ಮಾರಾಟವಾಗುತ್ತಿದೆ. ಕೋಲ್ಕತಾದಲ್ಲಿ 22 ಕ್ಯಾರಟ್ ಚಿನ್ನಕ್ಕೆ 46,910 ರೂಪಾಯಿ ಮತ್ತು 24 ಕ್ಯಾರಟ್ ಚಿನ್ನಕ್ಕೆ 49,610 ರೂ ದರವಿದೆ.
Recommended Video

ದೇಶದಲ್ಲಿ ಬೆಳ್ಳಿ ಬೆಲೆ
ದೇಶದಲ್ಲಿ ಬೆಳ್ಳಿ ದರ ಬಹುತೇಕ ನಗರಗಳಲ್ಲಿ ಇಳಿಕೆಯಾಗಿದೆ. ದೇಶದಲ್ಲಿ ಸರಾಸರಿ ಬೆಳ್ಳಿ ದರ ಒಂದು ಕೆಜಿಗೆ 800 ರೂಪಾಯಿ ಇಳಿಕೆಯೊಂದಿಗೆ 68,400 ರೂಪಾಯಿಗೆ ತಲುಪಿದೆ. ಬೆಂಗಳೂರಿನಲ್ಲಿ ಸಹ ಬೆಳ್ಳಿ ಬೆಲೆಯಲ್ಲಿ ಪ್ರತಿ ಕೆಜಿಗೆ 68,400 ರೂಪಾಯಿಗೆ ಇಳಿಕೆಯಾಗಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ ಒಂದು ಕೆಜಿಗೆ 74,200 ರೂಪಾಯಿ ಇದೆ. ಮುಂಬೈನಲ್ಲಿ ಬೆಳ್ಳಿ ದರ ಪ್ರತಿ ಕೆಜಿಗೆ 68,400 ರೂಪಾಯಿ ಇದೆ.
* ಚಿನ್ನ ಮತ್ತು ಬೆಳ್ಳಿ ಬೆಲೆಯು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ದರ ಬದಲಾವಣೆ ಮತ್ತು ಸ್ಥಳೀಯ ತೆರಿಗೆ ನೀತಿಗಳಿಗೆ ಅನುಗುಣವಾಗಿ ಬದಲಾಗುತ್ತದೆ. ಈ ಮಾಹಿತಿ ಬೆಳಿಗ್ಗೆ 10 ಗಂಟೆಯವರೆಗಿನ ಮಾರುಕಟ್ಟೆ ದರ ಬದಲಾವಣೆಯನ್ನು ಆಧರಿಸಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications