ಏ. 3ರಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಏರಿಕೆ

ಬೆಂಗಳೂರು, ಏಪ್ರಿಲ್ 3: ದೇಶದ ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆಯಲ್ಲಿ ಶನಿವಾರ ಹೆಚ್ಚಳವಾಗಿದೆ. ಸತತ ಎರಡನೆಯ ದಿನ ಬಂಗಾರದ ದರದಲ್ಲಿ ಏರಿಕೆಯಾಗಿದೆ. ಶುಕ್ರವಾರ ಕೂಡ ಬಹುತೇಕ ನಗರಗಳಲ್ಲಿ ಚಿನ್ನದ ದರ ತುಟ್ಟಿಯಾಗಿತ್ತು. ವಿವಿಧ ನಗರಗಳಲ್ಲಿ ಶುಕ್ರವಾರದ ದರವನ್ನೇ ಕಾಯ್ದುಕೊಂಡಿವೆ.

ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (ಎಂಸಿಎಕ್ಸ್) ಚಿನ್ನದ ದರದಲ್ಲಿ ಅಲ್ಪ ಏರಿಕೆಯಾಗಿದೆ. ಪ್ರತಿ ಒಂದು ಗ್ರಾಂಗೆ 4,391 ರೂಪಾಯಿ ದರವಿದೆ. 22 ಕ್ಯಾರಟ್ ತೂಕದ ಪ್ರತಿ 10 ಗ್ರಾಂನ ಹಳದಿಲೋಹಕ್ಕೆ 10 ರೂಪಾಯಿ ಏರಿಕೆಯಾಗಿದೆ. ಇದರಿಂದ ಚಿನ್ನದ ದರ 43,910 ರೂಪಾಯಿಗೆ ತಲುಪಿದೆ. ಹಾಗೆಯೇ 24 ಕ್ಯಾರಟ್ ಚಿನ್ನ ಸಹ 10 ರೂಪಾಯಿ ಹೆಚ್ಚಳದೊಂದಿಗೆ 44,910 ರೂಪಾಯಿಗೆ ಹೆಚ್ಚಳ ಕಂಡಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ವಹಿವಾಟು ಬದಲಾದಂತೆ ಭಾರತದಲ್ಲಿನ ಚಿನ್ನದ ದರದಲ್ಲಿಯೂ ಬದಲಾವಣೆಗಳಾಗಲಿವೆ. ಹೀಗಾಗಿ ದಿನದ ಚಿನ್ನ-ಬೆಳ್ಳಿ ದರದಲ್ಲಿ ಬದಲಾವಣೆಗಳಾಗುವ ಸಾಧ್ಯತೆ ಇದೆ.

ದೆಹಲಿಯಲ್ಲಿ ಬೆಲೆ ಏರಿಕೆ

ದೆಹಲಿಯಲ್ಲಿ ಬೆಲೆ ಏರಿಕೆ

ರಾಜಧಾನಿ ದೆಹಲಿಯಲ್ಲಿ ಬಂಗಾರದ ಬೆಲೆ ಪ್ರತಿ ಹತ್ತು ಗ್ರಾಂಗೆ 10 ರೂ ಏರಿಕೆಯಾಗಿದೆ. 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ 44,410 ರೂಪಾಯಿಗೆ ತಲುಪಿದೆ. 24 ಕ್ಯಾರಟ್ ಚಿನ್ನ ಬೆಲೆ ಪ್ರತಿ 10 ಗ್ರಾಂ ಚಿನ್ನದ ದರ 48,450 ರೂಪಾಯಿಗೆ ಹೆಚ್ಚಳ ಕಂಡಿದೆ.

ಬೆಂಗಳೂರಲ್ಲಿ ಬಂಗಾರದ ದರ

ಬೆಂಗಳೂರಲ್ಲಿ ಬಂಗಾರದ ದರ

ಬೆಂಗಳೂರಿನಲ್ಲಿ 22 ಕ್ಯಾರಟ್‌ನ ಬಂಗಾರದ ಬೆಲೆಯಲ್ಲಿ ಶನಿವಾರ ಬೆಳಗಿನವರೆಗೆ ಯಾವುದೇ ಬದಲಾವಣೆಗಳಾಗಿಲ್ಲ. ಇಂದು 22 ಕ್ಯಾರಟ್ ಚಿನ್ನದ ಪ್ರತಿ ಹತ್ತು ಗ್ರಾಂ ಚಿನ್ನದ ದರ 42,250 ರೂಪಾಯಿ ಇದೆ. ಆದರೆ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ದರ 490 ರೂಪಾಯಿ ಏರಿಕೆಯೊಂದಿಗೆ 46,580 ರೂಪಾಯಿಗೆ ಮಾರಾಟವಾಗುತ್ತಿದೆ.

ಚೆನ್ನೈನಲ್ಲಿ ದರ ಏರಿಕೆ

ಚೆನ್ನೈನಲ್ಲಿ ದರ ಏರಿಕೆ

ನೆರೆಯ ಚೆನ್ನೈನಲ್ಲಿ ಚಿನ್ನದ ದರದಲ್ಲಿ ಶನಿವಾರ ಹಳದಿ ಲೋಹ ಮತ್ತೆ ಏರಿಕೆಯಾಗಿದೆ. ಪ್ರತಿ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 100 ರೂಪಾಯಿ ಏರಿಕೆಯೊಂದಿಗೆ 42,770 ರೂ.ಗೆ ತಲುಪಿದೆ. ಹಾಗೆಯೇ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂ 110 ರೂಪಾಯಿ ಹೆಚ್ಚಿದ್ದು, 46,660 ರೂಪಾಯಿಗೆ ತಲುಪಿದೆ.

ಮುಂಬೈನಲ್ಲಿ ಚಿನ್ನದ ಬೆಲೆ ಹೆಚ್ಚಳ

ಮುಂಬೈನಲ್ಲಿ ಚಿನ್ನದ ಬೆಲೆ ಹೆಚ್ಚಳ

ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 10 ರೂ ಏರಿಕೆಯಾಗಿದ್ದು, 43,910 ರೂಪಾಯಿಗೆ ಹೆಚ್ಚಳ ಕಂಡಿದೆ. 24 ಕ್ಯಾರಟ್ ಚಿನ್ನದ ಬೆಲೆ ಕೂಡ 10 ರೂಪಾಯಿ ಏರಿಕೆಯೊಂದಿಗೆ 44,910 ರೂ. ದರಕ್ಕೆ ಮಾರಾಟವಾಗುತ್ತಿದೆ. ಕೇರಳದಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 42,250 ರೂ ಮತ್ತು 24 ಕ್ಯಾರಟ್ ಹಳದಿ ಲೋಹ 46,580 ರೂಪಾಯಿಗೆ ಮಾರಾಟವಾಗುತ್ತಿದೆ.

ದೇಶದಲ್ಲಿ ಬೆಳ್ಳಿ ಬೆಲೆ

ದೇಶದಲ್ಲಿ ಬೆಳ್ಳಿ ಬೆಲೆ

ದೇಶದಲ್ಲಿ ಒಟ್ಟಾರೆಯಾಗಿ ಬೆಳ್ಳಿ ದರ ಸ್ಥಿರವಾಗಿದೆ. ಬೆಳ್ಳಿ ಬೆಲೆ ಪ್ರತಿ ಕೆಜಿಗೆ 65,000 ರೂಪಾಯಿ ಇದೆ. ಆದರೆ ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಯಲ್ಲಿ ಪ್ರತಿ ಕೆಜಿಗೆ 1,100 ರೂಪಾಯಿ ಹೆಚ್ಚಳದೊಂದಿಗೆ 65,900 ರೂಪಾಯಿಗೆ ತಲುಪಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ 300 ರೂ. ಇಳಿಕೆಯಾಗಿದ್ದು, ಒಂದು ಕೆಜಿಗೆ 69,700 ರೂಪಾಯಿ ಇದೆ. ಮುಂಬೈನಲ್ಲಿ ಬೆಳ್ಳಿ ದರ ಪ್ರತಿ ಕೆಜಿಗೆ 65,000 ರೂಪಾಯಿ ಇದೆ.

* ಚಿನ್ನ ಮತ್ತು ಬೆಳ್ಳಿ ಬೆಲೆಯು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ದರ ಬದಲಾವಣೆ ಮತ್ತು ಸ್ಥಳೀಯ ತೆರಿಗೆ ನೀತಿಗಳಿಗೆ ಅನುಗುಣವಾಗಿ ಬದಲಾಗುತ್ತದೆ. ಈ ಮಾಹಿತಿ ಬೆಳಿಗ್ಗೆ 1೦ ಗಂಟೆಯವರೆಗಿನ ಮಾರುಕಟ್ಟೆ ದರ ಬದಲಾವಣೆಯನ್ನು ಆಧರಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+