ಏ. 5ರಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಏರಿಕೆ

ಬೆಂಗಳೂರು, ಏಪ್ರಿಲ್ 5: ದೇಶದ ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆಯಲ್ಲಿ ಸೋಮವಾರ ಅಲ್ಪ ಪ್ರಮಾಣದ ಏರಿಕೆ ಕಂಡಿದೆ. 22 ಕ್ಯಾರಟ್ ಮತ್ತು 24 ಕ್ಯಾರಟ್‌ನ ಚಿನ್ನದ ಬೆಲೆಗಳಲ್ಲಿ ಪ್ರತಿ 100 ಗ್ರಾಂಗೆ 100 ರೂಪಾಯಿಯಷ್ಟು ಏರಿಕೆಯಾಗಿದೆ. ಪ್ರತಿ ಒಂದು ಗ್ರಾಂ ಚಿನ್ನದ ದರ 4,392 ರೂಪಾಯಿಗೆ ತಲುಪಿದೆ.

ಹಳದಿ ಲೋಹದ ದರ ಫೆಬ್ರವರಿಯಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಆದರೆ ಹೊಸ ಹಣಕಾಸು ವರ್ಷದ ವೇಳೆಗೆ ಶೇ 20ರಷ್ಟು ದರ ಇಳಿಕೆಯಾಗಿದೆ. ಇದರಿಂದ ಹೂಡಿಕೆದಾರರಿಗೆ ಚಿನ್ನದ ಮೇಲೆ ಹೂಡಿಕೆ ಮಾಡಲು ವಿಶ್ವಾಸ ಮೂಡಿಸಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ವಹಿವಾಟು ಬದಲಾದಂತೆ ಭಾರತದಲ್ಲಿನ ಚಿನ್ನದ ದರದಲ್ಲಿಯೂ ಬದಲಾವಣೆಗಳಾಗಲಿವೆ. ಹೀಗಾಗಿ ದಿನದ ಚಿನ್ನ-ಬೆಳ್ಳಿ ದರದಲ್ಲಿ ಬದಲಾವಣೆಗಳಾಗುವ ಸಾಧ್ಯತೆ ಇದೆ.

ದೆಹಲಿಯಲ್ಲಿ ಬೆಲೆ ಹೆಚ್ಚಳ

ದೆಹಲಿಯಲ್ಲಿ ಬೆಲೆ ಹೆಚ್ಚಳ

ರಾಜಧಾನಿ ದೆಹಲಿಯಲ್ಲಿ ಬಂಗಾರದ ಬೆಲೆ ಪ್ರತಿ ಹತ್ತು ಗ್ರಾಂಗೆ 10 ರೂ ಏರಿಕೆಯಾಗಿದೆ. 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ 44,420 ರೂಪಾಯಿಗೆ ತಲುಪಿದೆ. 24 ಕ್ಯಾರಟ್ ಚಿನ್ನ ಬೆಲೆ ಪ್ರತಿ 10 ಗ್ರಾಂ ಚಿನ್ನದ ದರ 48,460 ರೂಪಾಯಿಗೆ ಹೆಚ್ಚಳ ಕಂಡಿದೆ.

ಬೆಂಗಳೂರಲ್ಲಿ ಬಂಗಾರದ ದರ

ಬೆಂಗಳೂರಲ್ಲಿ ಬಂಗಾರದ ದರ

ಬೆಂಗಳೂರಿನಲ್ಲಿ ಕೂಡ ಚಿನ್ನದ ದರದಲ್ಲಿ 10 ರೂಪಾಯಿ ಏರಿಕೆಯಾಗಿದೆ. 22 ಕ್ಯಾರಟ್ ಚಿನ್ನದ ಪ್ರತಿ ಹತ್ತು ಗ್ರಾಂ ಚಿನ್ನದ ದರ 42,270 ರೂಪಾಯಿ ಇದೆ. 24 ಕ್ಯಾರಟ್‌ನ 10 ಗ್ರಾಂ ಚಿನ್ನದ ದರ 10 ರೂ ಏರಿಕೆಯೊಂದಿಗೆ 46,110 ರೂಪಾಯಿಗೆ ತಲುಪಿದೆ.

ಚೆನ್ನೈನಲ್ಲಿ ದರ ಏರಿಕೆ

ಚೆನ್ನೈನಲ್ಲಿ ದರ ಏರಿಕೆ

ಚೆನ್ನೈ ನಗರದಲ್ಲಿ ಪ್ರತಿ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 10 ರೂಪಾಯಿ ಏರಿಕೆಯೊಂದಿಗೆ 42,790 ರೂ.ಗೆ ತಲುಪಿದೆ. ಹಾಗೆಯೇ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂ 10 ರೂಪಾಯಿ ಹೆಚ್ಚಿದ್ದು, 46,680 ರೂಪಾಯಿಗೆ ಮಾರಾಟವಾಗುತ್ತಿದೆ.

ಮುಂಬೈನಲ್ಲಿ ಚಿನ್ನದ ಬೆಲೆ ಹೆಚ್ಚಳ

ಮುಂಬೈನಲ್ಲಿ ಚಿನ್ನದ ಬೆಲೆ ಹೆಚ್ಚಳ

ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 43,920 ರೂಪಾಯಿಗೆ ಹೆಚ್ಚಳ ಕಂಡಿದೆ. 24 ಕ್ಯಾರಟ್ ಚಿನ್ನ 44,920 ರೂ. ದರಕ್ಕೆ ಮಾರಾಟವಾಗುತ್ತಿದೆ. ಕೇರಳದಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 42,270 ರೂ ಮತ್ತು 24 ಕ್ಯಾರಟ್ ಹಳದಿ ಲೋಹ 46,110 ರೂಪಾಯಿಗೆ ಮಾರಾಟವಾಗುತ್ತಿದೆ. ಕೋಲ್ಕತಾದಲ್ಲಿ 22 ಕ್ಯಾರಟ್ ಚಿನ್ನಕ್ಕೆ 44,790 ಮತ್ತು 24 ಕ್ಯಾರಟ್ ಚಿನ್ನಕ್ಕೆ 47,480 ರೂ ದರವಿದೆ.

ದೇಶದಲ್ಲಿ ಬೆಳ್ಳಿ ಬೆಲೆ

ದೇಶದಲ್ಲಿ ಬೆಳ್ಳಿ ಬೆಲೆ

ದೇಶದಲ್ಲಿ ಒಟ್ಟಾರೆಯಾಗಿ ಬೆಳ್ಳಿ ದರ ಇಳಿಕೆಯಾಗಿದೆ. ಭಾನುವಾರದ ದರಕ್ಕಿಂತ 10 ರೂಪಾಯಿ ಕಡಿಮೆಯಾಗಿದ್ದು, ಬೆಳ್ಳಿ ಬೆಲೆ ಪ್ರತಿ ಕೆಜಿಗೆ 65,000 ರೂಪಾಯಿ ಇದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಯಲ್ಲಿ ಪ್ರತಿ ಕೆಜಿಗೆ 65,900 ರೂಪಾಯಿ ಇದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ ಒಂದು ಕೆಜಿಗೆ 69,700 ರೂಪಾಯಿ ಇದೆ. ಮುಂಬೈನಲ್ಲಿ ಬೆಳ್ಳಿ ದರ ಪ್ರತಿ ಕೆಜಿಗೆ 65,000 ರೂಪಾಯಿ ಇದೆ.

* ಚಿನ್ನ ಮತ್ತು ಬೆಳ್ಳಿ ಬೆಲೆಯು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ದರ ಬದಲಾವಣೆ ಮತ್ತು ಸ್ಥಳೀಯ ತೆರಿಗೆ ನೀತಿಗಳಿಗೆ ಅನುಗುಣವಾಗಿ ಬದಲಾಗುತ್ತದೆ. ಈ ಮಾಹಿತಿ ಬೆಳಿಗ್ಗೆ 9 ಗಂಟೆಯವರೆಗಿನ ಮಾರುಕಟ್ಟೆ ದರ ಬದಲಾವಣೆಯನ್ನು ಆಧರಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+