ಏ. 6ರಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟು?

ಬೆಂಗಳೂರು, ಏಪ್ರಿಲ್ 6: ದೇಶದ ಬಹುತೇಕ ನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಮತ್ತೆ ಅಲ್ಪ ಪ್ರಮಾಣದ ಏರಿಕೆಯಾಗಿದೆ. 22 ಕ್ಯಾರಟ್ ಮತ್ತು 24 ಕ್ಯಾರಟ್‌ನ ಚಿನ್ನದ ಬೆಲೆಗಳಲ್ಲಿ ಪ್ರತಿ 100 ಗ್ರಾಂಗೆ 100 ರೂಪಾಯಿಯಷ್ಟು ಏರಿಕೆಯಾಗಿದೆ. ಪ್ರತಿ ಒಂದು ಗ್ರಾಂ ಚಿನ್ನದ ದರ 4,227 ರೂಪಾಯಿಗೆ ತಲುಪಿದೆ.

ಎಂಸಿಎಕ್ಸ್‌ನಲ್ಲಿ ಜೂನ್ ಗೋಲ್ಡ್ ಫ್ಯೂಚರ್ ಶೇ 0.35ರ ಹೆಚ್ಚಳದೊಂದಿಗೆ ಕಳೆದ ಒಂದು ತಿಂಗಳಲ್ಲಿಯೇ ಪ್ರತಿ ಹತ್ತು ಗ್ರಾಂಗೆ ಅತ್ಯಧಿಕ 45,503 ರೂಪಾಯಿಗೆ ತಲುಪಿದೆ. ಹಾಗೆಯೇ ಬೆಳ್ಳಿ ದರ ಶೇ 0.6ರ ಏರಿಕೆಯೊಂದಿಗೆ 64,943 ರೂ.ಗೆ ಮುಟ್ಟಿದೆ. 22 ಕ್ಯಾರಟ್‌ನ 10 ಗ್ರಾಂ ಚಿನ್ನದ ದರ 44,200 ರೂಪಾಯಿಗೆ ಏರಿಕೆಯಾಗಿದೆ. 24 ಕ್ಯಾರಟ್ ಚಿನ್ನಕ್ಕೆ 45,200 ರೂಪಾಯಿ ಇದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ವಹಿವಾಟು ಬದಲಾದಂತೆ ಭಾರತದಲ್ಲಿನ ಚಿನ್ನದ ದರದಲ್ಲಿಯೂ ಬದಲಾವಣೆಗಳಾಗಲಿವೆ. ಹೀಗಾಗಿ ದಿನದ ಚಿನ್ನ-ಬೆಳ್ಳಿ ದರದಲ್ಲಿ ಬದಲಾವಣೆಗಳಾಗುವ ಸಾಧ್ಯತೆ ಇದೆ.

ದೆಹಲಿಯಲ್ಲಿ ಬೆಲೆ ಹೆಚ್ಚಳ

ದೆಹಲಿಯಲ್ಲಿ ಬೆಲೆ ಹೆಚ್ಚಳ

ರಾಜಧಾನಿ ದೆಹಲಿಯಲ್ಲಿ ಬಂಗಾರದ ಬೆಲೆ ಪ್ರತಿ ಹತ್ತು ಗ್ರಾಂಗೆ 10 ರೂ ಏರಿಕೆಯಾಗಿದೆ. 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ 44,420 ರೂಪಾಯಿಗೆ ತಲುಪಿದೆ. 24 ಕ್ಯಾರಟ್ ಚಿನ್ನ ಬೆಲೆ ಪ್ರತಿ 10 ಗ್ರಾಂ ಚಿನ್ನದ ದರ 48,460 ರೂಪಾಯಿಗೆ ಹೆಚ್ಚಳ ಕಂಡಿದೆ.

ಬೆಂಗಳೂರಲ್ಲಿ ಚಿನ್ನದ ಬೆಲೆ

ಬೆಂಗಳೂರಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಕೂಡ ಚಿನ್ನದ ದರದಲ್ಲಿ 10 ರೂಪಾಯಿ ಏರಿಕೆಯಾಗಿದೆ. 22 ಕ್ಯಾರಟ್ ಚಿನ್ನದ ಪ್ರತಿ ಹತ್ತು ಗ್ರಾಂ ಚಿನ್ನದ ದರ 42,270 ರೂಪಾಯಿ ಇದೆ. 24 ಕ್ಯಾರಟ್‌ನ 10 ಗ್ರಾಂ ಚಿನ್ನದ ದರ 10 ರೂ ಏರಿಕೆಯೊಂದಿಗೆ 46,110 ರೂಪಾಯಿಗೆ ತಲುಪಿದೆ.

ಚೆನ್ನೈನಲ್ಲಿ ದರ ಇಳಿಕೆ

ಚೆನ್ನೈನಲ್ಲಿ ದರ ಇಳಿಕೆ

ಚೆನ್ನೈ ನಗರದಲ್ಲಿ ಪ್ರತಿ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 10 ರೂಪಾಯಿ ಇಳಿಕೆಯೊಂದಿಗೆ 42,570 ರೂ.ಗೆ ತಲುಪಿದೆ. ಹಾಗೆಯೇ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂ 10 ರೂಪಾಯಿ ಇಳಿದಿದ್ದು, 46,450 ರೂಪಾಯಿಗೆ ಮಾರಾಟವಾಗುತ್ತಿದೆ.

ಮುಂಬೈನಲ್ಲಿ ಚಿನ್ನದ ಬೆಲೆ ಹೆಚ್ಚಳ

ಮುಂಬೈನಲ್ಲಿ ಚಿನ್ನದ ಬೆಲೆ ಹೆಚ್ಚಳ

ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 44,210 ರೂಪಾಯಿಗೆ ಹೆಚ್ಚಳ ಕಂಡಿದೆ. 24 ಕ್ಯಾರಟ್ ಚಿನ್ನ 45,210 ರೂ. ದರಕ್ಕೆ ಮಾರಾಟವಾಗುತ್ತಿದೆ. ಕೇರಳದಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 42,270 ರೂ ಮತ್ತು 24 ಕ್ಯಾರಟ್ ಹಳದಿ ಲೋಹ 46,110 ರೂಪಾಯಿಗೆ ಮಾರಾಟವಾಗುತ್ತಿದೆ. ಕೋಲ್ಕತಾದಲ್ಲಿ 22 ಕ್ಯಾರಟ್ ಚಿನ್ನಕ್ಕೆ 44,630 ಮತ್ತು 24 ಕ್ಯಾರಟ್ ಚಿನ್ನಕ್ಕೆ 47,320 ರೂ ದರವಿದೆ.

Recommended Video

    Maxwell ಗೆ 14 ಕೋಟಿ ಕೊಟ್ಟಿದ್ದು ಇದೆ ಕಾರಣಕ್ಕೆ | Oneindia Kannada
    ದೇಶದಲ್ಲಿ ಬೆಳ್ಳಿ ಬೆಲೆ

    ದೇಶದಲ್ಲಿ ಬೆಳ್ಳಿ ಬೆಲೆ

    ದೇಶದಲ್ಲಿ ಬೆಳ್ಳಿ ದರ ಬಹುತೇಕ ನಗರಗಳಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಳ್ಳಿ ಬೆಲೆ ಪ್ರತಿ ಕೆಜಿಗೆ 65,000 ರೂಪಾಯಿ ಇದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಯಲ್ಲಿ ಪ್ರತಿ ಕೆಜಿಗೆ 900 ರೂಪಾಯಿ ಕುಸಿದ್ದು, 65,000 ರೂಪಾಯಿ ಇದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ ಒಂದು ಕೆಜಿಗೆ 69,300 ರೂಪಾಯಿ ಇದೆ. ಮುಂಬೈನಲ್ಲಿ ಬೆಳ್ಳಿ ದರ ಪ್ರತಿ ಕೆಜಿಗೆ 65,000 ರೂಪಾಯಿ ಇದೆ.

    * ಚಿನ್ನ ಮತ್ತು ಬೆಳ್ಳಿ ಬೆಲೆಯು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ದರ ಬದಲಾವಣೆ ಮತ್ತು ಸ್ಥಳೀಯ ತೆರಿಗೆ ನೀತಿಗಳಿಗೆ ಅನುಗುಣವಾಗಿ ಬದಲಾಗುತ್ತದೆ. ಈ ಮಾಹಿತಿ ಬೆಳಿಗ್ಗೆ 9 ಗಂಟೆಯವರೆಗಿನ ಮಾರುಕಟ್ಟೆ ದರ ಬದಲಾವಣೆಯನ್ನು ಆಧರಿಸಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+