ಬ್ಯಾಂಕ್ ಉದ್ಯೋಗಿಗಳಿಗೆ ಗುಡ್ ನ್ಯೂಸ್: ವಾರಕ್ಕೆ ಐದು ದಿನ ಮಾತ್ರ ಕೆಲಸ, ಪ್ರಸ್ತಾವನೆ ಸಲ್ಲಿಕೆ
ನವದೆಹಲಿ, ಡಿಸೆಂಬರ್ 8: ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ (ಪಿಎಸ್‌ಬಿ) ಕೆಲಸ ಮಾಡುವ ಉದ್ಯೋಗಿಗಳಿಗೆ ಡಿಸೆಂಬರ್ ಮಧ್ಯದ ವೇಳೆಗೆ ವಾರದಲ್ಲಿ 5 ದಿನಗಳ ಕೆಲಸದ ನಿಯಮ ಜಾರಿಯಾಗಬಹುದು.
ಭಾರತದ ಬ್ಯಾಂಕಿಂಗ್ ವಲಯವು ಎಲ್ಲಾ ಶನಿವಾರಗಳನ್ನು ಅಧಿಕೃತ ರಜಾದಿನಗಳಾಗಿ ಘೋಷಿಸಲು ಔಪಚಾರಿಕವಾಗಿ ಪ್ರಸ್ತಾವನೆ ಸಲ್ಲಿಸಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಬುಧವಾರ ಸಂಸತ್ತಿನಲ್ಲಿ ದೃಢಪಡಿಸಿದೆ. ಐದು ದಿನಗಳ ಕೆಲಸದ ವಾರವನ್ನು ಜಾರಿಗೆ ತರಲು ಐಬಿಎ ಕುರಿತ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುವಾಗ ಭಾರತೀಯ ಬ್ಯಾಂಕ್‌ಗಳ ಸಂಘ (ಐಬಿಎ) ಈ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕರದ್ ದೃಢಪಡಿಸಿದರು.

ಇತ್ತೀಚೆಗೆ ಸಾರ್ವಜನಿಕ ವಲಯದ ಬ್ಯಾಂಕುಗಳ ಉದ್ಯೋಗಿಗಳಿಗೆ 15% ರಿಂದ 20% ರಷ್ಟು ವೇತನ ಹೆಚ್ಚಳ ಮಾಡಲಾಗುತ್ತದೆ ಎನ್ನಲಾಗಿತ್ತು. ಬ್ಯಾಂಕ್ ಒಕ್ಕೂಟಗಳು ಮತ್ತು ಸಂಘಗಳ ನಡುವಿನ 12 ನೇ ದ್ವಿಪಕ್ಷೀಯ ಇತ್ಯರ್ಥ ಮಾತುಕತೆಯಂತೆ ಡಿಸೆಂಬರ್ ಮಧ್ಯದ ವೇಳೆಗೆ ವಾರಕ್ಕೆ ಐದು ದಿನಗಳ ಕೆಲಸದ ಅನುಷ್ಠಾನವನ್ನು ನಿರೀಕ್ಷಿಸಬಹುದು ಎಂಬ ವರದಿಗಳು ತಿಳಿಸಿವೆ.
ಬ್ಯಾಂಕ್ಸ್ ಅಸೋಸಿಯೇಷನ್ (ಐಬಿಎ) ಈ ಕ್ರಮ ಅಂತಿಮ ಹಂತವನ್ನು ತಲುಪಿದೆ. 2015 ರಿಂದ ಭಾನುವಾರದ ಹೊರತಾಗಿ ಪ್ರತಿ ತಿಂಗಳ ಎರಡನೇ ಮತ್ತು ಕೊನೆಯ ನಾಲ್ಕನೇ ಶನಿವಾರದಂದು ಬ್ಯಾಂಕ್‌ಗಳಿಗೆ ರಜೆ ನೀಡಲಾಗುತ್ತಿದೆ. ಐದು ದಿನಗಳ ಕೆಲಸದ ವಾರದ ಬೇಡಿಕೆಯು ದೀರ್ಘಕಾಲದಿಂದ ಮುಖ್ಯವಾಗಿ ಸಾರ್ವಜನಿಕ ಬ್ಯಾಂಕ್‌ಗಳಿಂದ ಇತ್ತು.
ಸಾರ್ವಜನಿಕ ವಲಯದ ಬ್ಯಾಂಕ್ ಉದ್ಯೋಗಿಗಳಿಗೆ ಪ್ರಸ್ತುತ ವೇತನ ಒಪ್ಪಂದವು ನವೆಂಬರ್ 1, 2022 ರಂದು ಕೊನೆಗೊಂಡಿತು. ಅಂದಿನಿಂದ ಐಬಿಎ ಮತ್ತು ಬ್ಯಾಂಕ್ ಉದ್ಯೋಗಿಗಳನ್ನು ಪ್ರತಿನಿಧಿಸುವ ಒಕ್ಕೂಟಗಳು ಹೊಸ ವೇತನ ಒಪ್ಪಂದವನ್ನು ಮಾತುಕತೆ ನಡೆಸುತ್ತಿವೆ. ಜುಲೈ 2020 ರಲ್ಲಿ 8,00,000 ಕ್ಕೂ ಹೆಚ್ಚು ಬ್ಯಾಂಕ್ ಉದ್ಯೋಗಿಗಳು ತಮ್ಮ ಸಂಬಳ ಪ್ಯಾಕೇಜ್‌ಗಳಲ್ಲಿ 15% ರಷ್ಟು ಹೆಚ್ಚಳವನ್ನು ಪಡೆದರು. ಐಬಿಎ ಮತ್ತು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಮೂರು ವರ್ಷಗಳ ವೇತನ ಪರಿಷ್ಕರಣೆ ವಿವಾದಾತ್ಮಕ ಸಮಸ್ಯೆಯನ್ನು ಪರಿಹರಿಸಲು ತಿಳುವಳಿಕೆ ಪತ್ರಕ್ಕೆ ಸಹಿ ಹಾಕಿದ್ದವು.

ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ವರದಿ ಪ್ರಕಾರ ಐಬಿಎ ಮತ್ತು ಬ್ಯಾಂಕ್ ಯೂನಿಯನ್‌ಗಳು ಶೀಘ್ರದಲ್ಲೇ ಅಂತಿಮ ಸಭೆಯನ್ನು ನಡೆಸಿದ್ದವು. ಅಲ್ಲಿ ಉಭಯ ಕಡೆಯವರು ಎಂಒಯುಗೆ ಸಹಿ ಹಾಕಲಿದ್ದರು. ನಂತರ ಅದನ್ನು ಕೊನೆಯ ಅನುಮೋದನೆಗಾಗಿ ಹಣಕಾಸು ಸಚಿವಾಲಯಕ್ಕೆ ಕಳುಹಿಸಲಾಯಿತು ಎಂದು ವರದಿ ತಿಳಿಸಿದೆ.
ಸಂಬಳ ಹೆಚ್ಚಳವು 15% ಕ್ಕಿಂತ ಹೆಚ್ಚಾಗಿರುತ್ತದೆ. ಆದ್ದರಿಂದ ಪಿಎಸ್‌ಯು ಬ್ಯಾಂಕ್‌ಗಳು ಬ್ಯಾಲೆನ್ಸ್ ಶೀಟ್‌ಗಳಲ್ಲಿ ಹೊಡೆತ ಉಂಟಾಗುವುದರಿಂದ ನಾವು ಮಾತುಕತೆ ನಡೆಸುತ್ತಿದ್ದೇವೆ. ಹಣಕಾಸು ಸಚಿವಾಲಯವು ಆರಂಭದಲ್ಲಿ ಸಾರ್ವಜನಿಕ ವಲಯದ ಸಾಲದಾತರನ್ನು ಡಿಸೆಂಬರ್ 1 ರೊಳಗೆ ಮಾತುಕತೆಗಳನ್ನು ಮುಕ್ತಾಯಗೊಳಿಸುವಂತೆ ಕೇಳಿಕೊಂಡಿದೆ" ಎಂದು ಮೂಲಗಳು ತಿಳಿಸಿವೆ.
ಐದು ದಿನಗಳ ಕೆಲಸದ ವಾರದ ಜಾರಿಯಾದರೆ ವಾರಾಂತ್ಯದಲ್ಲಿ ಬ್ಯಾಂಕ್ ಶಾಖೆಗಳನ್ನು ಮುಚ್ಚಲಾಗುತ್ತದೆ. ಕಳೆದುಹೋದ ಕೆಲಸದ ಸಮಯವನ್ನು ಸರಿದೂಗಿಸಲು ಬ್ಯಾಂಕ್ ಉದ್ಯೋಗಿಗಳು ವಾರದ ದಿನಗಳಲ್ಲಿ ವಿಸ್ತೃತ ಗಂಟೆಗಳವರೆಗೆ ಕೆಲಸ ಮಾಡಬೇಕಾಗಬಹುದು ಎನ್ನಲಾಗಿದೆ. ಬ್ಯಾಂಕುಗಳು ಮುಚ್ಚಲ್ಪಟ್ಟಿದ್ದರೂ ಸಹ ಅವರು ನೆಟ್ ಬ್ಯಾಂಕಿಂಗ್ ಅಥವಾ ಡಿಜಿಟಲ್ ಪಾವತಿಯ ಯಾವುದೇ ವಿಧಾನಗಳ ಮೂಲಕ ಹಣಕಾಸಿನ ವಹಿವಾಟುಗಳನ್ನು ಮಾಡಬಹುದು ಎಂಬುದನ್ನು ಇಲ್ಲಿ ಗಮನಿಸಬೇಕು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications