Gold Rate: ಚಿನ್ನದ ಬೆಲೆ ಏಕಾಏಕಿ 50,000 ಸಾವಿರ ಇಳಿಕೆ ಸಾಧ್ಯತೆ: ಎಷ್ಟಿದೆ ಇಂದಿನ ಚಿನ್ನ & ಬೆಳ್ಳಿ ಬೆಲೆ ?

16 August 2025 Gold Rate: ಬದಲಾದ ಸನ್ನಿವೇಶದಲ್ಲಿ ಏಕಾಏಕಿ ಚಿನ್ನದ ಬೆಲೆಯು ಬರೋಬ್ಬರಿ 50,000 ಸಾವಿರ ರೂಪಾಯಿಗೆ ಕಡಿಮೆಯಾಗುವ ಸಾಧ್ಯತೆ ಇದೆ. ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯು ವಿಪರೀತವಾಗಿ ಹೆಚ್ಚಳವಾಗುತ್ತಿತ್ತು. ಆದರೆ, ಇದೀಗ ಕಳೆದ ಒಂದು ವಾರದಿಂದಲೂ ಚಿನ್ನದ ಬೆಲೆಯು ಕಡಿಮೆಯಾಗುತ್ತಿದ್ದು ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಏಕಾಏಕಿ 50,000 ಸಾವಿರ ರೂಪಾಯಿಗೆ ಕಡಿಮೆಯಾಗುವ ನಿರೀಕ್ಷೆ ಇದೆ. ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಹೇಗೆ ಕಡಿಮೆ ಆಗಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ಅಮೆರಿಕಾಗೆ ಆಮದು ಆಗುವ ವಿವಿಧ ದೇಶಗಳ ವಸ್ತುಗಳ ಮೇಲೆ ದುಬಾರಿ ತೆರಿಗೆಯನ್ನು ವಿಧಿಸಿದ್ದಾರೆ. ಆದರೆ ಚಿನ್ನದ ಆಮದಿನ ಮೇಲೆ ತೆರಿಗೆ ವಿಧಿಸಿಲ್ಲ. ಅಲ್ಲದೇ ಡಾಲರ್ ಮುಂದೆ ರೂಪಾಯಿ ಸ್ಥಿರವಾಗಿರುವುದು ಹಾಗೂ ಭಾರತ - ರಷ್ಯಾ ಹಾಗೂ ಚೀನಾ ದೇಶಗಳು ಒಂದಾಗುತ್ತಿರುವುದು ಸೇರಿದಂತೆ ಹಲವು ಕಾರಣಗಳಿಗೆ ಚಿನ್ನದ ಬೆಲೆ ಇಳಿಕೆಯಾಗುತ್ತಿದೆ. ಕಳೆದ ಒಂದು ವಾರದಿಂದಲೂ ಚಿನ್ನದ ಬೆಲೆ ಕಡಿಮೆಯಾಗುತ್ತಿದ್ದು. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯು ಏಕಾಏಕಿ 50,000 ಸಾವಿರಕ್ಕೆ ಇಳಿಕೆ ಆಗಲಿದೆ ಎಂದು ಹೇಳಲಾಗುತ್ತಿದೆ.

Good News for Gold Buyers Prices May Fall by 50 000 Check Today s Gold amp amp Silver Rates 16 Aug

ಇಂದಿನ ವಿವಿಧ ಕ್ಯಾರೆಟ್‌ನ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎನ್ನುವ ನಿಖರವಾದ ವಿವರ ನೋಡೋಣ.

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ ಚಿನ್ನದ ಬೆಲೆಯು ನಿರಂತರವಾಗಿ ಇಳಿಕೆಯಾಗುತ್ತಿದೆ. 18 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 7,589 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 75,890 ರೂಪಾಯಿ ಇದೆ. ಶುಕ್ರವಾರಕ್ಕೆ ಹೋಲಿಕೆ ಮಾಡಿದರೆ ಪ್ರತಿ ಗ್ರಾಂನ ಮೇಲೆ 4 ರೂಪಾಯಿ ಹಾಗೂ 10 ಗ್ರಾಂನ ಮೇಲೆ 40 ರೂಪಾಯಿ ಕಡಿಮೆಯಾಗಿದೆ.

22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್ ಚಿನ್ನದ ಬೆಲೆಯು ಪ್ರತಿ ಗ್ರಾಂಗೆ 9,275 ರೂಪಾಯಿ ಹಾಗೂ 10 ಗ್ರಾಂಗೆ 92,750 ರೂಪಾಯಿ ಆಗಿದೆ. ಪ್ರತಿ ಗ್ರಾಂಗೆ 5 ರೂಪಾಯಿ ಹಾಗೂ 10 ಗ್ರಾಂಗೆ 50 ರೂಪಾಯಿ ಕಡಿಮೆಯಾಗಿದೆ. ಕಳೆದ ಒಂದು ವಾರದಿಂದಲೂ ಚಿನ್ನದ ಬೆಲೆ ಕಡಿಮೆಯಾಗುತ್ತಿದೆ.

24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್ ಚಿನ್ನದ ಬೆಲೆಯು ಶನಿವಾರ ಹೊಸ ದಾಖಲೆ ಬರೆದಿದೆ. ಪ್ರತಿ ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆಯು 10,118 ರೂಪಾಯಿ ಹಾಗೂ 10 ಗ್ರಾಂಗೆ 1,01,180 ರೂಪಾಯಿ ಆಗಿದೆ. ಕಳೆದ ಒಂದು ವಾರದ ಅವಧಿಯಲ್ಲಿ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಕಡಿಮೆಯಾಗಿದೆ.

ಬೆಳ್ಳಿ ಬೆಲೆ ಹೆಚ್ಚಳ: ಚಿನ್ನದ ಬೆಲೆ ಇಳಿಕೆಯಾಗುತ್ತಿರುವುದರ ನಡುವೆ ಬೆಳ್ಳಿ ಬೆಲೆ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 116 ರೂಪಾಯಿ ಹಾಗೂ ಪ್ರತಿ ಕೆ.ಜಿಗೆ 1,16,200 ರೂಪಾಯಿ ಆಗಿದೆ.

ಚಿನ್ನದ ಬೆಲೆ ಇಳಿಕೆಯಿಂದ ಸಂತೋಷ

ಇನ್ನು ಚಿನ್ನದ ಬೆಲೆಯು ನಿರಂತರವಾಗಿ ಇಳಿಕೆಯಾಗುತ್ತಿರುವುದು ಚಿನ್ನ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ. ಚಿನ್ನದ ಬೆಲೆಯು ಮುಂದಿನ ದಿನಗಳಲ್ಲಿ ಇನ್ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+