• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಆನ್ ಲೈನ್ ನಲ್ಲೇ ಹೊಸ ಗ್ಯಾಸ್ ಸಂಪರ್ಕ ಪಡೆಯಿರಿ

|

ನವದೆಹಲಿ, ಆಗಸ್ಟ್, 31: ಕೇಂದ್ರ ಸರ್ಕಾರ ಎಲ್ಲ ವ್ಯವಸ್ಥೆಗಳನ್ನು ಆನ್ ಲೈನ್ ಗೆ ಅಳವಡಿಸುತ್ತಿದೆ. ಇದೀಗ ನೀವು ಹೊಸ ಗ್ಯಾಸ್ ಸಂಪರ್ಕ ಪಡೆಯಲು ಗ್ಯಾಸ್ ಏಜನ್ಸಿಗಳ ಬಳೆ ಅಲೆದಾಡಬೇಕಿಲ್ಲ. ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದರೆ ಮೂರು ದಿನದಲ್ಲಿ ಹೊಸ ಸಂಪರ್ಕ ಪಡೆದುಕೊಳ್ಳಬಹುದು.

ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌ ಹೊಸ ಯೋಜನೆಗೆ ಭಾನುವಾರ ಚಾಲನೆ ನೀಡಿದ್ದಾರೆ. ಗ್ರಾಹಕರ ಅನುಕೂಲಕ್ಕಾಗಿ 2 ಕೆ.ಜಿ.ಯ ಅಡುಗೆ ಅನಿಲ ಸಿಲಿಂಡರ್‌ಗಳನ್ನೂ ಮಾರುಕಟ್ಟೆಗೆ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.[ಆಧಾರ್ ಲಿಂಕ್ ಮಾಡದಿದ್ದರೆ ಎಲ್ ಪಿಜಿ ಸಬ್ಸಿಡಿ ಇಲ್ಲ]

ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆ:

ಹೊಸ ಸಂಪರ್ಕ ಬೇಕಾದವರು ಎಲ್ ಪಿಜಿ ಪೂರೈಸುವ ಸರ್ಕಾರಿ ಸ್ವಾಮ್ಯದ ಯಾವುದೇ ಕಂಪನಿಯ ವೆಬ್‌ಸೈಟ್‌ಗೆ ಹೋಗಿ ಹೆಸರು ನೋಂದಾಯಿಸಿಕೊಳ್ಳಬೇಕು. ಮುಂದಿನ 48 ತಾಸುಗಳಲ್ಲಿ ಪರಿಶೀಲನೆ ನಡೆಸಲಾಗುತ್ತದೆ. ಅರ್ಜಿ ಸಲ್ಲಿಸಿದ ಮೂರ್‍ನಾಲ್ಕು ದಿನದಲ್ಲಿ ಗ್ರಾಹಕನ ಮನೆಗೆ ಸಮೀಪವಿರುವ ಅಡುಗೆ ಅನಿಲ ವಿತರಕ ಸಂಸ್ಥೆ ಹೊಸ ಸಂಪರ್ಕವನ್ನು ಮನೆಗೆ ತಂದು ನೀಡಲಿದೆ.[ಎಲ್‌ಪಿಜಿ ಜೊತೆ ಆಧಾರ್ ನಂಬರ್ ಸೇರಿಸುವುದು ಹೇಗೆ?]

ಬಡವರಿಗೆ ಅನುಕೂಲವಾಗುವ ದೃಷ್ಟಿಯಿಂದ 5 ಕೆಜಿ ಸಬ್ಸಿಡಿ ಸಿಲಿಂಡರ್ ಗಳು ಈಗಾಗಲೇ ಚಾಲ್ತಿಯಲ್ಲಿವೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಓ ಗೊಟ್ಟು ಸಾವಿರಾರು ಜನರು ಗ್ಯಾಸ್ ಸಬ್ಸಿಡಿ ತ್ಯಜಿಸಿದ್ದಾರೆ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ವ್ಯವಸ್ಥೆಯನ್ನು ಮತ್ತಷ್ಟು ಸುಲಭ ಮಾಡಲಿದೆ.

English summary
Do you want to apply for new LPG connection but not getting enough time to meet the dealer? Are you running here and there just to get a new connection of LPG? Now, all wait is going to over soon. 'Acche Din' (Good days), as it was promised by Narendra Modi-led NDA government, seems to have arrived in the country.Applying for new LPG connection available in online.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X