ಎಸ್‌ಬಿಐ ನೂತನ ಅಧ್ಯಕ್ಷರಾಗಿ ದಿನೇಶ್ ಕುಮಾರ್ ಖರಾ ಆಯ್ಕೆ

ನವದೆಹಲಿ, ಅಕ್ಟೋಬರ್ 06: ಅಕ್ಟೋಬರ್ 7 ರಿಂದ ಜಾರಿಗೆ ಬರುವಂತೆ ಮುಂದಿನ ಮೂರು ವರ್ಷಗಳ ಕಾಲ ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ)ದ ನೂತನ ಅಧ್ಯಕ್ಷರಾಗಿ ದಿನೇಶ್ ಕುಮಾರ್ ಖರಾ ಅವರನ್ನು ಸರ್ಕಾರವು ಮಂಗಳವಾರ ನೇಮಿಸಿದೆ.

ದೇಶದ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಎಸ್‌ಬಿಐ ಅಧ್ಯಕ್ಷರ ನೇತೃತ್ವದಲ್ಲಿ ನಾಲ್ಕು ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಕೆಲಸ ಮಾಡುತ್ತದೆ. ಎಸ್‌ಬಿಐ ಅಧ್ಯಕ್ಷ ರಜನೀಶ್ ಕುಮಾರ್ ಅವರ ಸ್ಥಾನದಲ್ಲಿ, ಎಸ್‌ಬಿಐ ಸಂಸ್ಥೆಯ ಹಿರಿಯ ವ್ಯವಸ್ಥಾಪಕ ನಿರ್ದೇಶಕರಾಗಿರುವ ದಿನೇಶ್ ಕುಮಾರ್ ಖರಾ ಆಯ್ಕೆಯಾಗಿದ್ದಾರೆ. ರಜನೀಶ್ ಅವರ ಮೂರು ವರ್ಷಗಳ ಅವಧಿ ಅಕ್ಟೋಬರ್ 7 ರಂದು ಮುಕ್ತಾಯಗೊಳ್ಳಲಿದೆ.

ಕುತೂಹಲಕಾರಿ ಸಂಗತಿಯೆಂದರೆ, 2017 ರಲ್ಲಿ ಅಧ್ಯಕ್ಷರ ಹುದ್ದೆಗೆ ಸ್ಪರ್ಧಿಸಿದವರಲ್ಲಿ ಖರಾ ಕೂಡ ಇದ್ದರು. ಖರಾ ಅವರನ್ನು ಎಸ್‌ಬಿಐನ ವ್ಯವಸ್ಥಾಪಕ ನಿರ್ದೇಶಕರಾಗಿ 2016 ರ ಆಗಸ್ಟ್‌ನಲ್ಲಿ ಮೂರು ವರ್ಷಗಳ ಅವಧಿಗೆ ನೇಮಿಸಲಾಯಿತು. ಅವರ ಕಾರ್ಯಕ್ಷಮತೆಯ ಪರಿಶೀಲನೆಯ ನಂತರ ಅವರು 2019 ರಲ್ಲಿ ಎರಡು ವರ್ಷಗಳ ವಿಸ್ತರಣೆಯನ್ನು ಪಡೆದರು.

Government Appoints Dinesh Kumar Khara As SBI Chairman For 3 Years

ದೆಹಲಿ ವಿಶ್ವವಿದ್ಯಾಲಯದ ಮ್ಯಾನೇಜ್ಮೆಂಟ್ ಸ್ಟಡೀಸ್‌ನ ಹಳೆಯ ವಿದ್ಯಾರ್ಥಿ, ಖಾರಾ ಎಸ್‌ಬಿಐನ ಜಾಗತಿಕ ಬ್ಯಾಂಕಿಂಗ್ ವಿಭಾಗದ ಮುಖ್ಯಸ್ಥರಾಗಿದ್ದಾರೆ. ಅವರು ಮಂಡಳಿಯ ಮಟ್ಟದ ಸ್ಥಾನವನ್ನು ಹೊಂದಿದ್ದಾರೆ ಮತ್ತು ಎಸ್‌ಬಿಐನ ಬ್ಯಾಂಕೇತರ ಅಂಗಸಂಸ್ಥೆಗಳ ವ್ಯವಹಾರಗಳನ್ನು ನೋಡಿಕೊಳ್ಳುತ್ತಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+