• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಎಸ್‌ಬಿಐ ನೂತನ ಅಧ್ಯಕ್ಷರಾಗಿ ದಿನೇಶ್ ಕುಮಾರ್ ಖರಾ ಆಯ್ಕೆ

|
Google Oneindia Kannada News

ನವದೆಹಲಿ, ಅಕ್ಟೋಬರ್ 06: ಅಕ್ಟೋಬರ್ 7 ರಿಂದ ಜಾರಿಗೆ ಬರುವಂತೆ ಮುಂದಿನ ಮೂರು ವರ್ಷಗಳ ಕಾಲ ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ)ದ ನೂತನ ಅಧ್ಯಕ್ಷರಾಗಿ ದಿನೇಶ್ ಕುಮಾರ್ ಖರಾ ಅವರನ್ನು ಸರ್ಕಾರವು ಮಂಗಳವಾರ ನೇಮಿಸಿದೆ.

ದೇಶದ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಎಸ್‌ಬಿಐ ಅಧ್ಯಕ್ಷರ ನೇತೃತ್ವದಲ್ಲಿ ನಾಲ್ಕು ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಕೆಲಸ ಮಾಡುತ್ತದೆ. ಎಸ್‌ಬಿಐ ಅಧ್ಯಕ್ಷ ರಜನೀಶ್ ಕುಮಾರ್ ಅವರ ಸ್ಥಾನದಲ್ಲಿ, ಎಸ್‌ಬಿಐ ಸಂಸ್ಥೆಯ ಹಿರಿಯ ವ್ಯವಸ್ಥಾಪಕ ನಿರ್ದೇಶಕರಾಗಿರುವ ದಿನೇಶ್ ಕುಮಾರ್ ಖರಾ ಆಯ್ಕೆಯಾಗಿದ್ದಾರೆ. ರಜನೀಶ್ ಅವರ ಮೂರು ವರ್ಷಗಳ ಅವಧಿ ಅಕ್ಟೋಬರ್ 7 ರಂದು ಮುಕ್ತಾಯಗೊಳ್ಳಲಿದೆ.

 ಪ್ರಮುಖ ಬ್ಯಾಂಕುಗಳ ಫಿಕ್ಸೆಡ್ ಡೆಪಾಸಿಟ್ ಬಡ್ಡಿ ದರಗಳು ಇಲ್ಲಿದೆ: ಯಾವ ಬ್ಯಾಂಕುಗಳಲ್ಲಿ ಎಷ್ಟಿದೆ ಬಡ್ಡಿ? ಪ್ರಮುಖ ಬ್ಯಾಂಕುಗಳ ಫಿಕ್ಸೆಡ್ ಡೆಪಾಸಿಟ್ ಬಡ್ಡಿ ದರಗಳು ಇಲ್ಲಿದೆ: ಯಾವ ಬ್ಯಾಂಕುಗಳಲ್ಲಿ ಎಷ್ಟಿದೆ ಬಡ್ಡಿ?

ಕುತೂಹಲಕಾರಿ ಸಂಗತಿಯೆಂದರೆ, 2017 ರಲ್ಲಿ ಅಧ್ಯಕ್ಷರ ಹುದ್ದೆಗೆ ಸ್ಪರ್ಧಿಸಿದವರಲ್ಲಿ ಖರಾ ಕೂಡ ಇದ್ದರು. ಖರಾ ಅವರನ್ನು ಎಸ್‌ಬಿಐನ ವ್ಯವಸ್ಥಾಪಕ ನಿರ್ದೇಶಕರಾಗಿ 2016 ರ ಆಗಸ್ಟ್‌ನಲ್ಲಿ ಮೂರು ವರ್ಷಗಳ ಅವಧಿಗೆ ನೇಮಿಸಲಾಯಿತು. ಅವರ ಕಾರ್ಯಕ್ಷಮತೆಯ ಪರಿಶೀಲನೆಯ ನಂತರ ಅವರು 2019 ರಲ್ಲಿ ಎರಡು ವರ್ಷಗಳ ವಿಸ್ತರಣೆಯನ್ನು ಪಡೆದರು.

ದೆಹಲಿ ವಿಶ್ವವಿದ್ಯಾಲಯದ ಮ್ಯಾನೇಜ್ಮೆಂಟ್ ಸ್ಟಡೀಸ್‌ನ ಹಳೆಯ ವಿದ್ಯಾರ್ಥಿ, ಖಾರಾ ಎಸ್‌ಬಿಐನ ಜಾಗತಿಕ ಬ್ಯಾಂಕಿಂಗ್ ವಿಭಾಗದ ಮುಖ್ಯಸ್ಥರಾಗಿದ್ದಾರೆ. ಅವರು ಮಂಡಳಿಯ ಮಟ್ಟದ ಸ್ಥಾನವನ್ನು ಹೊಂದಿದ್ದಾರೆ ಮತ್ತು ಎಸ್‌ಬಿಐನ ಬ್ಯಾಂಕೇತರ ಅಂಗಸಂಸ್ಥೆಗಳ ವ್ಯವಹಾರಗಳನ್ನು ನೋಡಿಕೊಳ್ಳುತ್ತಾರೆ.

English summary
Government on Tuesday appointed Dinesh Kumar Khara as chairman of State Bank of India for three years effective from 7 October.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X