ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್ ಗೆ 2 ರುಪಾಯಿ ಇಳಿಕೆ
ನವದೆಹಲಿ, ಅಕ್ಟೋಬರ್ 3: ಕೇಂದ್ರ ಸರಕಾರವು ಮಂಗಳವಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಮೂಲ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ 2 ರುಪಾಯಿ ಕಡಿತಗೊಳಿಸಿದೆ. ಅಕ್ಟೋಬರ್ 4ರಿಂದ ಇದು ಜಾರಿಗೆ ಬರಲಿದೆ. ದೀಪಾವಳಿ ಹೊತ್ತಿಗೆ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಯಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಈ ಹಿಂದೆ ಹೇಳಿದ್ದರು.
ಪೆಟ್ರೋಲ್ ಹಾಗೂ ಡೀಸೆಲ್ ದರಗಳ ದೈನಂದಿನ ಪರಿಷ್ಕರಣೆಗೆ ಕೇಂದ್ರ ಸರಕಾರ ಮುಂದಾದ ನಂತರ ತೈಲಗಳ ಬೆಲೆ ಏರಿಕೆಯಾಗಿತ್ತು. ಮಂಗಳವಾರದಂದು ದೆಹಲಿಯಲ್ಲಿನ ಪೆಟ್ರೋಲ್ ಬೆಲೆ ಲೀಟರ್ ಗೆ ರು. 70.88 ಹಾಗೂ ಮುಂಬೈನಲ್ಲಿ ರು. 79.99 ಇದೆ.

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರು.11.77 ಹಾಗೂ ಡೀಸೆಲ್ ಮೇಲಿನ ಸುಂಕ ರು. 13.47ರಷ್ಟು ಏರಿಕೆಯಾಗಿದೆ. ಇನ್ನು ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ ಟಿಯಿಂದ ಹೊರಗಿಟ್ಟಿದ್ದು, ಈಗಲೂ ರಾಜ್ಯ ಹಾಗೂ ಕೇಂದ್ರ ಅಬಕಾರಿ ಸುಂಕ ಮತ್ತು ವ್ಯಾಟ್ ಹಾಕಲಾಗುತ್ತಿದೆ.












Click it and Unblock the Notifications