GST ವಾರ್ಷಿಕ ವಿವರ ಸಲ್ಲಿಕೆ ಗಡುವು 1 ತಿಂಗಳ ಮಟ್ಟಿಗೆ ಮುಂದೂಡಿಕೆ
ನವದೆಹಲಿ, ಅಕ್ಟೋಬರ್ 01: 2018-19ನೇ ಸಾಲಿನ ಜಿಎಸ್ಟಿಆರ್ 9 ಮತ್ತು 9 ಸಿ ಸಲ್ಲಿಸಲು ನಿಗದಿತ ದಿನಾಂಕವನ್ನು ಸರ್ಕಾರ ಬುಧವಾರ ವಿಸ್ತರಿಸಿದೆ. ಈ ಸಾಲಿನ ಹಣಕಾಸು ವರ್ಷಕ್ಕೆ ಸಂಬಂಧಿಸದಿ ಜಿಎಸ್ಟಿ ವಾರ್ಷಿಕ ವಿವರ ಮತ್ತು ಲೆಕ್ಕಪತ್ರ ವಿವರ ಸಲ್ಲಿಸಲು ಇದ್ದ ಗಡುವನ್ನು ಕೇಂದ್ರ ಸರ್ಕಾರವು ಒಂದು ತಿಂಗಳ ಮಟ್ಟಿಗೆ ಮುಂದೂಡಿದೆ. ಇದರ ಅನ್ವಯ ಅಕ್ಟೋಬರ್ 31ರೊಳಗೆ ಈ ವಿವರ ಸಲ್ಲಿಸಬೇಕು.
''ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಇರುವ ಕಾರಣ, ಚುನಾವಣಾ ಆಯೋಗದಿಂದ ಅನುಮತಿ ಪಡೆದು ದಿನಾಂಕ ವಿಸ್ತರಣೆ ಮಾಡಲಾಗಿದೆ'' ಎಂದು ಕೇಂದ್ರ ಪರೋಕ್ಷ ತೆರಿಗೆ ಮಂಡಳಿ ಹೇಳಿದೆ. ಈ ಮೊದಲಿನ ಗುಡಿವನ ಪ್ರಕಾರ ಸೆಪ್ಟೆಂಬರ್ 30ರೊಳಗೆ ಈ ವಿವರಗಳನ್ನು ಸಲ್ಲಿಸಬೇಕಿತ್ತು.

ಇದಕ್ಕೂ ಮೊದಲು ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ಜಿಎಸ್ಟಿ ಕೌನ್ಸಿಲ್ಗೆ 2018-19 ಜಿಎಸ್ಟಿ ವಾರ್ಷಿಕ ರಿಟರ್ನ್ ಫೈಲಿಂಗ್ ಗಡುವನ್ನು ಡಿಸೆಂಬರ್ 31 ರವರೆಗೆ ಮೂರು ತಿಂಗಳವರೆಗೆ ಮುಂದೂಡಬೇಕೆಂದು ಕೋರಿತ್ತು. ಮೇ ತಿಂಗಳಲ್ಲಿ ಸರ್ಕಾರವು ವಾರ್ಷಿಕ ಜಿಎಸ್ಟಿ ರಿಟರ್ನ್ ಸಲ್ಲಿಸಲು ಕೊನೆಯ ದಿನಾಂಕವನ್ನು 2018-19ರ ಹಣಕಾಸು ವರ್ಷ ಸೆಪ್ಟೆಂಬರ್ 2020 ರವರೆಗೆ ವಿಸ್ತರಿಸಿತ್ತು.
ಕೋವಿಡ್-19 ಸಾಂಕ್ರಾಮಿಕ ಕಾರಣದಿಂದ ಜಿಎಸ್ಟಿ ವಾರ್ಷಿಕ ವಿವರ ಸಲ್ಲಿಸಲು ಹೆಣಗಾಟ ನಡೆಸುತ್ತಿರುವ ಉದ್ಯಮಗಳಿಗೆ ಇದರಿಂದ ನೆರವಾಗುತ್ತದೆ ಎನ್ನಲಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications