ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್‌ ಔಷಧಿಗಳ ಮೇಲಿನ ತೆರಿಗೆ ರಿಯಾಯಿತಿ ಡಿಸೆಂಬರ್ 31ರವರೆಗೆ ವಿಸ್ತರಣೆ: ನಿರ್ಮಲಾ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 17: ಕೋವಿಡ್ ಔಷಧಿಗಳ ಮೇಲಿನ ತೆರಿಗೆ ರಿಯಾಯಿತಿಯನ್ನು ಡಿಸೆಂಬರ್ 31ರವರೆಗೂ ವಿಸ್ತರಿಸಿರುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಹಿಂದಿನ ಜಿಎಸ್‌ಟಿ ಸಭೆಯಲ್ಲಿ, ಕೋವಿಡ್ -19 ಔಷಧಿಗಳಾದ ರೆಮ್‌ಡೆಸಿವಿರ್ ಮತ್ತು ಆಮ್ಲಜನಕ ಕಾನ್ಸಂಟ್ರೇಟರ್ ಗಳು ಮತ್ತು ವೈದ್ಯಕೀಯ ಆಮ್ಲಜನಕದಂತಹ ಸರಕುಗಳಿಗೆ ತೆರಿಗೆ ದರವನ್ನು ಕಡಿತಗೊಳಿಸಲಾಗಿತ್ತು.

2021ರ ಆಗಸ್ಟ್‌ನಲ್ಲಿ ಜಿ.ಎಸ್.ಟಿ ಆದಾಯ ಸಂಗ್ರಹ 1,12,020 ಕೋಟಿ ರೂ2021ರ ಆಗಸ್ಟ್‌ನಲ್ಲಿ ಜಿ.ಎಸ್.ಟಿ ಆದಾಯ ಸಂಗ್ರಹ 1,12,020 ಕೋಟಿ ರೂ

Tocilizumab ಹಾಗೂ Amphotericin B ಔಷಧಿಗಳ ಮೇಲೆ ಜಿಎಸ್‌ಟಿಯನ್ನು ಶೇಕಡಾ 5ಕ್ಕೆ ನಿಗದಿಪಡಿಸಿದರೆ ರೆಮ್‌ಡೆಸಿವಿರ್ ಮತ್ತು ಹೆಪಾರಿನ್‌ನಂತಹ ಆಂಟಿ ಕೋಗುಲಂಟ್‌ಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ 5 ಕ್ಕೆ ಇಳಿಸಲಾಗಿದೆ

GST Council Extends Concessions To COVID-19 Drugs Till December 31

ವೈದ್ಯಕೀಯ ಆಮ್ಲಜನಕ, ಆಮ್ಲಜನಕ ಕಾನ್ಸಂಟ್ರೇಟರ್ ಗಳು, ವೆಂಟಿಲೇಟರ್‌ಗಳು, ಬೈಪಾಪ್ ಯಂತ್ರಗಳು ಮತ್ತು ಹೈ ಫ್ಲೋ ನಾಸಲ್ ಕ್ಯಾನುಲ್ಲಾ ಸಾಧನಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ 5 ಕ್ಕೆ ಕಡಿತಗೊಳಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದರು.

ಅಲ್ಲದೆ, ಕೋವಿಡ್ ಪರೀಕ್ಷಾ ಕಿಟ್‌ಗಳ ಮೇಲಿನ ತೆರಿಗೆಯನ್ನು ಶೇಕಡಾ 12 ರಿಂದ ಶೇ 5 ಕ್ಕೆ ಇಳಿಸಲಾಗಿತ್ತು. ಪಲ್ಸ್ ಆಕ್ಸಿಮೀಟರ್, ಹ್ಯಾಂಡ್ ಸ್ಯಾನಿಟೈಸರ್, ತಾಪಮಾನ ತಪಾಸಣೆ ಉಪಕರಣಗಳು ಮತ್ತು ಆಂಬುಲೆನ್ಸ್‌ಗಳ ಮೇಲೆ ಸಹ ತೆರಿಗೆಯನ್ನು ಶೇಕಡಾ 5 ರಷ್ಟು ಇಳಿಕೆ ಮಾಡಲಾಗಿತ್ತು.

45ನೇ ಜಿಎಸ್‌ಟಿ ಮಂಡಳಿಯ ಸಭೆ ಇಂದು ಲಕ್ನೋದಲ್ಲಿ ನಡೆಯಿತು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ರಾಜ್ಯಗಳ ವಿತ್ತ ಸಚಿವರು ಪಾಲ್ಗೊಂಡಿದ್ದರು.

ಕೊರೊನಾ ಸೋಂಕು ಆರಂಭವಾದ ಬಳಿಕ ಮೊದಲ ಬಾರಿಗೆ ವರ್ಚ್ಯುವಲ್ ಸಭೆ ಬಿಟ್ಟು ನೇರವಾಗಿ ಸಭೆ ಸೇರಿದ್ದಾರೆ. ರಿಯಾಯಿತಿ ದರದಲ್ಲಿ ಹೆಚ್ಚಿನ ಔಷಧಿಗಳನ್ನು ನೀಡಲು ಅನುಮತಿ ನೀಡಲಾಗಿದೆ, ಜಿಎಸ್‌ಟಿ ದರವನ್ನು ಶೇ.12ರಿಂದ 5ಕ್ಕೆ ಇಳಿಕೆ ಮಾಡಲಾಗಿದೆ.

ಇವುಗಳಲ್ಲಿ ಇಟೊಲಿಜುಮಾಬ್, ಪೊಸಕೊನಾಜೋಲ್, ಇನ್‌ಫ್ಲಿಕ್ಸಿಮಾಬ್, ಬಮ್ಲನಿವಿಮಾಬ್, ಎಟೀಸ್ವಿಮಾಬ್ ಹಾಗೂ ಇಮ್‌ಡೆವಿಮಾಬ್ , ಫೆರಿಫಿರಾವಿರ್, 2 ಡಿಯೋಕ್ಸಿ- ಡಿ-ಗ್ಲೂಕೋಸ್ ಕೂಡ ಸೇರಿದೆ.

ಈ ಮೊದಲ ಜಿಎಸ್‌ಟಿ ರಿಯಾಯಿತಿಯನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿತ್ತು. ಪೆಟ್ರೋಲ್ , ಡೀಸೆಲ್‌ನ್ನು ಜಿಎಸ್‌ಟಿ ವ್ಯಾಪ್ತಿಗೆ ಸೇರಿಸುವುದು, ಜೊಮ್ಯಾಟೊ, ಸ್ವಿಗ್ಗಿ, ಫುಡ್‌ಪಂಡಾ ಆಹಾರ ಡೆಲಿವರಿ ಅಪ್ಲಿಕೇಷನ್‌ಗಳಿಗೆ ರೆಸ್ಟಾರೆಂಟ್‌ಗಳೆಂದು ಪರಿಗಣನೆ, ಜಿಎಸ್‌ಟಿ ಇ ಪೋರ್ಟಲ್ ನಿರ್ಮಾಣ ಸೇರಿ ಹಲವು ವಿಷಯಗಳ ಕುರಿತು ಚರ್ಚೆ ನಡೆಯುತ್ತಿದೆ.

English summary
The Goods and Services Tax (GST) Council has extended the concessions to specified drugs used in COVID-19 treatment till December 31.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X