GST Rates Down: ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್; ಜಿಎಸ್‌ಟಿ ದರ ಇಳಿಕೆ..
GST Rates Down: ಜಿಎಸ್‌ಟಿ ದರ ಏರಿಕೆ ಆಗಿದೆ. ಇದರಿಂದ ಜನಸಾಮಾನ್ಯರಿಗೆ ತುಂಬಾ ಹೊಡೆತ ಬೀಳುತ್ತಿದೆ ಎನ್ನುವ ಆಕ್ರೊಶಗಳು ವ್ಯಕ್ತವಾಗಿದ್ದವು. ಇನ್ನು ಇದೀಗ ದೇಶದ ಜನತೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುಡ್ ನ್ಯೂಸ್‌ವೊಂದನ್ನು ನೀಡಿದ್ದಾರೆ.
ಜಿಎಸ್‌ಟಿ ದರಗಳನ್ನು ಮತ್ತಷ್ಟು ಕಡಿಮೆ ಮಾಡಲಾಗುವುದು. ತೆರಿಗೆ ದರಗಳು ಮತ್ತು ಸ್ಲ್ಯಾಬ್‌ಗಳನ್ನು ತರ್ಕಬದ್ಧಗೊಳಿಸುವ ಪ್ರಕ್ರಿಯೆಯು ಬಹುತೇಕ ಅಂತಿಮ ಹಂತವನ್ನು ತಲುಪಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.

ಜುಲೈ 1, 2017ರಂದು ಜಿಎಸ್‌ಟಿ ಪ್ರಾರಂಭವಾದ ಸಮಯದಲ್ಲಿ ಶೇಕಡ 15.8ರಷ್ಟಿದ್ದ ಆದಾಯ ತಟಸ್ಥ ದರ 2023ರಲ್ಲಿ ಶೇಕಡ 11.4ಕ್ಕೆ ಇಳಿದಿದೆ. ಇದು ಇನ್ನೂ ಕಡಿಮೆಯಾಗುತ್ತದೆ ಎಂದು ಹೇಳಿದ್ದಾರೆ. ವಿತ್ತ ಸಚಿವೆ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಮತ್ತು ರಾಜ್ಯ ಹಣಕಾಸು ಮಂತ್ರಿಗಳನ್ನು ಒಳಗೊಂಡ ಜಿಎಸ್‌ಟಿ ಕೌನ್ಸಿಲ್ ಸೆಪ್ಟೆಂಬರ್ 2021ರಲ್ಲಿ ಜಿಎಸ್‌ಟಿ ದರಗಳನ್ನು ತರ್ಕಬದ್ಧಗೊಳಿಸಲು ಮತ್ತು ತೆರಿಗೆ ಸ್ಲ್ಯಾಬ್‌ಗಳಲ್ಲಿ ಬದಲಾವಣೆಗಳನ್ನು ಪ್ರಸ್ತಾಪಿಸಲು ಸಚಿವರ ಗುಂಪನ್ನು (ಜಿಒಎಂ) ಸ್ಥಾಪಿಸಿತ್ತು.
ಜಿಒಎಂ ಆರು ರಾಜ್ಯಗಳ ಹಣಕಾಸು ಮಂತ್ರಿಗಳನ್ನು ಒಳಗೊಂಡಿದೆ. ಜಿಎಸ್‌ಟಿ ರಚನೆಯನ್ನು ಸರಳೀಕರಿಸಲು ಸುಧಾರಣೆಗಳನ್ನು ಪರಿಶೀಲಿಸುವ ಮತ್ತು ಶಿಫಾರಸು ಮಾಡುವ ಜವಾಬ್ದಾರಿಯನ್ನು ಹೊಂದಿದೆ. ದಿ ಎಕನಾಮಿಕ್ ಟೈಮ್ಸ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಜಿಎಸ್‌ಟಿ ದರ ಮತ್ತು ಸ್ಲ್ಯಾಬ್‌ಗಳನ್ನು ತರ್ಕಬದ್ಧಗೊಳಿಸುವ ಸಮಯ ಬಂದಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸೀತಾರಾಮನ್ ಅವರು, ಆ ಕೆಲಸವು ಬಹುತೇಕ ಅಂತಿಮ ಹಂತವನ್ನು ತಲುಪಿದೆ.
ಈಗ, ಈ ಹಂತದಲ್ಲಿ (ಜಿಒಎಂ) ಅತ್ಯುತ್ತಮ ಕೆಲಸ ಮಾಡಿದೆ. ಮತ್ತೊಮ್ಮೆ, ಪ್ರತಿಯೊಂದು ಗುಂಪಿನ ಕಾರ್ಯಗಳನ್ನು ಸಂಪೂರ್ಣವಾಗಿ ಪರಿಶೀಲಿಸುವ ಜವಾಬ್ದಾರಿಯನ್ನು ನಾನು ತೆಗೆದುಕೊಂಡಿದ್ದೇನೆ. ನಂತರ ನಾವು ಈ ಬಗ್ಗೆ ಅಂತಿಮ ತೀರ್ಮಾನಕ್ಕೆ ಬರಲಾಗುತ್ತದೆ ಎಂದು ಹೇಳಿದರು.
ತೆರಿಗೆದಾರರಿಗೆ ಭರ್ಜರಿ ಗಿಫ್ಟ್: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೆಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಈ ವೇಳೆ ಆದಾಯ ತೆರಿಗೆದಾರರಿಗೆ ಬಂಪರ್ ಗಿಫ್ಟ್ ನೀಡಿದ್ದು, 12 ಲಕ್ಷ ರೂಪಾಯಿವರೆಗೂ ತೆರಿಗೆ ವಿನಾಯಿತಿ ನೀಡಲಾಗಿದೆ ಎಂದು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.
ಕೇಂದ್ರ ಬಿಜೆಟ್ ಮಂಡನೆ ವೇಳೆ ಆದಾಯ ತೆರಿಗೆದಾರರಿಗೆ ಬಂಪರ್ ಗಿಫ್ಟ್ ನೀಡಿದ್ದು, 12 ಲಕ್ಷದವರೆಗೆ ತೆರಿಗೆ ವಿನಾಯತಿ ನೀಡಲಾಗಿದೆ. ಹನ್ನೆರಡು ಲಕ್ಷದವರೆಗೆ ವಾರ್ಷಿಕ ಆದಾಯ ಇರುವವರು ತೆರಿಗೆ ಕಟ್ಟುವಂತಿಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. ಇದು ಮಧ್ಯಮ ವರ್ಗದವರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಹೇಳಲಾಗುತ್ತಿದೆ.
ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಏರಿಕೆ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ. 4 ಲಕ್ಷದಿಂದ 8 ಲಕ್ಷದವರೆಗೆ ಶೇಕಡ 5ರಷ್ಟು ತೆರಿಗೆ, 8 ಲಕ್ಷದಿಂದ 11 ಲಕ್ಷದವರೆಗೆ ಶೇಕಡ 10ರಷ್ಟು ತೆರಿಗೆ, 12 ಲಕ್ಷದಿಂದ 15 ಲಕ್ಷದವರೆಗೆ ಶೇಕಡ 15ರಷ್ಟು ತೆರಿಗೆ, 15 ಲಕ್ಷದಿಂದ 20 ಲಕ್ಷದವರೆಗೆ ಶೇಕಡ 20ರಷ್ಟು ತೆರಿಗೆ, 20 ಲಕ್ಷದಿಂದ 24 ಲಕ್ಷದರೆಗೆ ಶೇಕಡ 25ರಷ್ಟು ತೆರಿಗೆ, 24 ಲಕ್ಷ ಮೇಲ್ಪಟ್ಟ ಆದಾಯಕ್ಕೆ ಶೇಕಡ 30ರಷ್ಟು ತೆರಿಗೆ.
ಮಧ್ಯಮ ವರ್ಗದ ಮೇಲೆ ಕೇಂದ್ರೀಕರಿಸಲು ವೈಯಕ್ತಿಕ ಆದಾಯ ತೆರಿಗೆ ಸುಧಾರಣೆಗಳನ್ನ ತರಲಾಗಿದೆ. ಹೊಸ ತೆರಿಗೆ ಪದ್ಧತಿ ಅನ್ವಯ 4 ಲಕ್ಷ ರೂಪಾಯಿವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ. ಹಿರಿಯ ನಾಗರಿಕರಿಗೆ ತೆರಿಗೆ ಕಡಿತದ ಮಿತಿಯನ್ನು 1 ಲಕ್ಷ ರೂಪಾಯಿಗೆ ದ್ವಿಗುಣಗೊಳಿಸಲಾಗಿದೆ. ಹಾಗೆಯೇ ಬಾಡಿಗೆ ಮೇಲಿನ ಟಿಡಿಎಸ್‌ನ ವಾರ್ಷಿಕ ಮಿತಿಯನ್ನ 2.4 ಲಕ್ಷ ರೂಪಾಯಿಗಳಿಂದ 6 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಹೇಳಿದ್ದರು.












Click it and Unblock the Notifications