ಮಾರುಕಟ್ಟೆ ಮೌಲ್ಯದಲ್ಲಿ ಎಚ್ ಡಿಎಫ್ ಸಿಗೆ ಅಗ್ರಸ್ಥಾನ!

Written By: Ramesh
Subscribe to Oneindia Kannada

ಬೆಂಗಳೂರು, ಸೆ. 22 : ದೇಶದ ಮಾರುಕಟ್ಟೆ ಮೌಲ್ಯದಲ್ಲಿ ವಿಸ್ತೃತ ಜಾಲ ಹೊಂದಿರುವ ಎಚ್ ಡಿಎಫ್ ಸಿ ಬ್ಯಾಂಕ್ ದೇಶದ ಅತಿ ಹೆಚ್ಚು ಮಾರುಕಟ್ಟೆ ಮೌಲ್ಯ ಹೊಂದಿರುವ ಬ್ಯಾಂಕ್ ಎನಿಸಿದೆ. ಷೇರು ಮಾರುಕಟ್ಟೆಯಲ್ಲಿ ಎಚ್ ಡಿಎಫ್ ಸಿ ಬ್ಯಾಂಕ್ ಭರ್ಜರಿಯಾಗಿ ಸದ್ದು ಮಾಡುತ್ತಿದ್ದು, ಮಾರುಕಟ್ಟೆಯಲ್ಲಿ ಅಗ್ರಸ್ಥಾನದಲ್ಲಿದೆ.

ಡಬ್ಲ್ಯೂಪಿಪಿ ಬಿಡುಗಡೆ ಮಾಡಿದ ಟಾಪ್ 50 ಮಾರುಕಟ್ಟೆ ಮೌಲ್ಯ ಹೊಂದಿರುವ ಶ್ರೇಯಾಂಕ ಪಟ್ಟಿಯಲ್ಲಿ ಎಚ್ ಡಿಎಫ್ ಸಿ ಬ್ಯಾಕ್ ಈ ಬಾರಿಯೂ ಅಗ್ರಸ್ಥಾನ ಅಲಂಕರಿಸಿದೆ. ಈ ಮೂಲಕ ಸತತ ಮೂರು ವರ್ಷಗಳ ಬಾರಿಗೆ ಎಚ್ ಡಿಎಫ್ ಸಿ ಬ್ಯಾಂಕ್ ತನ್ನ ಮಾರುಕಟ್ಟೆಯಲ್ಲಿ ತನ್ನ ಮೌಲ್ಯದ ಗುಣಮಟ್ಟವನ್ನು ಕಾಯ್ದುಕೊಂಡು ಬಂದಿದೆ.

HDFC Bank

ಎಚ್ ಡಿ ಎಫ್ ಸಿಯು ಮಾರುಕಟ್ಟೆಯಲ್ಲಿ 14.4 ಬಿಲಿಯನ್ ಡಾಲರ್ ಮೌಲ್ಯವನ್ನು ಹೊಂದಿದೆ. ಕಳೆದ ವರ್ಷಕ್ಕಿಂತ ಈ ವರ್ಷಕ್ಕೆ ಹೋಲಿಸಿದರೆ ಶೇ. 15 ರಷ್ಟು ಮಾರುಕಟ್ಟೆಯಲ್ಲಿ ತನ್ನ ಮೌಲ್ಯವನ್ನು ಹೆಚ್ಚಿಸಿಕೊಂಡು ಭಾರತದಲ್ಲಿಯೇ ಅತಿ ಮೌಲ್ಯ ಹೊಂದಿರವ ಎಚ್ ಡಿ ಎಫ್ ಸಿ ಬ್ಯಾಂಕ್ ಜಾಗತಿಕ ಮಟ್ಟದಲ್ಲಿ 100 ಮೌಲ್ಯವರ್ಧಿತವುಗಳಲ್ಲಿ ಎಚ್ ಡಿ ಎಫ್ ಸಿ ಬ್ಯಾಂಕ್ ಕೂಡ ಸ್ಥಾನ ಪಡೆದುಕೊಂಡಿರುವುದು ವಿಶೇಷವಾಗಿದೆ.

ಇನ್ನು ಏರ್ ಟೆಲ್ ಸಂಸ್ಥೆ 9.978 ಮಿಲಿಯನ್ ಡಾಲರ್ ಮಾರುಕಟ್ಟೆ ಮೌಲ್ಯವನ್ನು ಹೊಂದಿದ್ದು ಎರಡನೇ ಸ್ಥಾನದಲ್ಲಿದ್ದರೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 6.352 ಮಿಲಿಯನ್ ಡಾಲರ್ ಮಾರುಕಟ್ಟೆ ಮೌಲ್ಯ ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಏರ್ ಟೆಲ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈ ಎರಡು ಸಂಸ್ಥೆಗಳು ಮಾರುಕಟ್ಟೆ ಮೌಲ್ಯದಲ್ಲಿ ಎಚ್ ಡಿ ಎಫ್ ಸಿ ಬ್ಯಾಂಕ್ ನ್ನು ಹಿಂಬಾಲಿಸಿವೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
HDFC Bank has emerged as India’s most valuable brand for the third consecutive year, ranking first on the BrandZ Top 50 list released by WPP Group. Valued at $14.4 billion, it was the only Indian brand in the BrandZ Top 100 most valuable global brands list released earlier.
Please Wait while comments are loading...