ಬ್ಯಾಂಕ್ ಅಲರ್ಟ್: ಮುಂದಿನ ವಾರ 4 ದಿನ ಬ್ಯಾಂಕ್ ರಜೆ
ನವದೆಹಲಿ, ಮಾರ್ಚ್ 13: ದೇಶದ ಕೆಲವು ಭಾಗಗಳಲ್ಲಿ ಬ್ಯಾಂಕ್‌ಗಳು ಸತತವಾಗಿ ನಾಲ್ಕು ಬಾರಿ ಮುಚ್ಚಲ್ಪಡುತ್ತವೆ. ಮುಂದಿನ ವಾರ ಬ್ಯಾಂಕ್‌ಗಳಿಗೆ ನೀವು ಭೇಟಿ ನೀಡಲು ನಿರ್ಧಾರ ಮಾಡುವುದಾದರೆ, ಅದಕ್ಕೂ ಮುನ್ನ ಈ ವರದಿಯನ್ನು ಓದಿಕೊಂಡು ಬ್ಯಾಂಕ್‌ಗೆ ಯಾವ ದಿನ ಹೋಗುವುದು ಎಂದು ನಿರ್ಧಾರ ಮಾಡಿ.
ಬ್ಯಾಂಕ್ ರಜಾದಿನಗಳು ಒಂದು ರಾಜ್ಯದಿಂದ ಇನ್ನೊಂದಕ್ಕೆ ಬದಲಾಗುತ್ತವೆ ಎಂಬುದನ್ನು ಗಮನಿಸುವುದು ಮುಖ್ಯ. ಸಾಮಾನ್ಯವಾಗಿ ಆರ್‌ಬಿಐ ನಿಯಮದ ಪ್ರಕಾರ ರಜಾದಿನಗಳನ್ನು ಮೂರು ವಿಭಾಗವಾಗಿ ವಗೀಕರಿಸಲಾಗಿದೆ. ವರ್ಗಾವಣೀಯ ಲಿಖಿತಗಳ ಅಧಿನಿಯಮ (ನೆಗೋಶಬಲ್ ಇನ್ಸ್ಟ್ರುಮೆಂಟ್ಸ್ ಆಕ್ಟ್) ಅಡಿಯಲ್ಲಿ ರಜಾದಿನ, ನೆಗೋಶಿಯೇಬಲ್ ಇನ್ಸ್ಟ್ರುಮೆಂಟ್ಸ್ ಆಕ್ಟ್ ಅಡಿಯಲ್ಲಿ ರಜಾದಿನ ಮತ್ತು ರಿಯಲ್-ಟೈಮ್ ಗ್ರಾಸ್ ಸೆಟಲ್ಮೆಂಟ್ ಹಾಲಿಡೇ, ಬ್ಯಾಂಕ್‌ಗಳು ಖಾತೆಗಳ ಕೊನೆಯ ಹಣಕಾಸು ಲೆಕ್ಕಚಾರ ಅವಧಿ ಆಗಿದೆ.
ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಜಾರ್ಖಂಡ್‌ನಲ್ಲಿ ಮಾರ್ಚ್ 17 ರಂದು ಹೋಳಿ ಹಬ್ಬದ ಹಿನ್ನೆಲೆಯಿಂದಾಗಿ ಬ್ಯಾಂಕ್‌ಗಳನ್ನು ಮುಚ್ಚಲಾಗುತ್ತದೆ. ಮಾರ್ಚ್ 18 ರಂದು ದೇಶಾದ್ಯಂತ ಹೋಳಿ ಆಚರಿಸಲಾಗುತ್ತದೆ. ಮುಂದಿನ ವಾರ ಮಾರ್ಚ್ 18 ರಂದು ಶುಕ್ರವಾರ ಶ್ರೀನಗರ, ಅಹಮದಾಬಾದ್, ಐಜ್ವಾಲ್, ಬೇಲಾಪುರ್, ಭೋಪಾಲ್, ಚಂಡೀಗಢ, ಡೆಹ್ರಾಡೂನ್, ಗ್ಯಾಂಗ್ಟಾಕ್, ಗುವಾಹಟಿ, ಹೈದರಾಬಾದ್, ಜೈಪುರ, ಜಮ್ಮು, ಕಾನ್ಪುರ್, ಕೋಲ್ಕತ್ತಾ, ಲಕ್ನೋ, ಮುಂಬೈ, ನಾಗ್ಪುರ, ನವದೆಹಲಿ, ಪಣಜಿ, ಪಾಟ್ನಾ, ರಾಯ್‌ಪುರ, ರಾಂಚಿ, ಶಿಲ್ಲಾಂಗ್‌ನಲ್ಲಿ ಬ್ಯಾಂಕುಗಳು ಮುಚ್ಚಲ್ಪಡುತ್ತವೆ.

ಮಾರ್ಚ್ ಮೂರನೇ ವಾರದಲ್ಲಿ ಬ್ಯಾಂಕ್ ರಜಾದಿನಗಳ ಪಟ್ಟಿ
* ಮಾರ್ಚ್ 17, 2022, ಗುರುವಾರ ಹೋಲಿ ಆಚರಣೆ ಹಿನ್ನೆಲೆ ಡೆಹ್ರಾಡೂನ್, ಕಾನ್ಪುರ, ಲಕ್ನೋ, ರಾಂಚಿಯಲ್ಲಿ ಬ್ಯಾಂಕ್‌ಗಳನ್ನು ಮುಚ್ಚಲಾಗುವುದು.
* ಮಾರ್ಚ್ 18, 2022, ಶುಕ್ರವಾರ ಹೋಲಿ: ಅಹಮದಾಬಾದ್, ಐಜ್ವಾಲ್, ಬೇಲಾಪುರ್, ಭೋಪಾಲ್, ಚಂಡೀಗಢ, ಡೆಹ್ರಾಡೂನ್, ಗ್ಯಾಂಗ್ಟಾಕ್, ಗುವಾಹಟಿ, ಹೈದರಾಬಾದ್, ಜೈಪುರ, ಜಮ್ಮು, ಕಾನ್ಪುರ್, ಲಕ್ನೋ, ಮುಂಬೈ, ನಾಗ್ಪುರ, ನವದೆಹಲಿ, ಪಣಜಿ, ರಾಯಪುರ, ರಾಂಚಿ, ಶಿಲ್ಲಾಂಗ್, ಶಿಮ್ಲಾ, ಶ್ರೀನಗರ, ಪಾಟ್ನಾದಲ್ಲಿ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ.
* ಮಾರ್ಚ್ 19, 2022, ಶನಿವಾರ: ಹೋಳಿ/ಯೋಸಾಂಗ್ ಕಾರಣ ಭುವನೇಶ್ವರ್, ಇಂಫಾಲ್, ಪಾಟ್ನಾದಲ್ಲಿ ಬ್ಯಾಂಕ್‌ಗಳನ್ನು ಮುಚ್ಚಲಾಗುವುದು
* ಮಾರ್ಚ್ 20, 2022, ಭಾನುವಾರ: ಬ್ಯಾಂಕ್ ರಜೆ
ಪ್ರತಿ ವರ್ಷ, ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳಿಗೆ ರಜಾದಿನಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತದೆ. ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ವಲಯದ ಸಾಲದಾತರು ಗಣರಾಜ್ಯೋತ್ಸವ (ಜನವರಿ 26), ಸ್ವಾತಂತ್ರ್ಯ ದಿನ (ಆಗಸ್ಟ್ 15), ಮತ್ತು ಗಾಂಧಿ ಜಯಂತಿ (ಅಕ್ಟೋಬರ್ 2), ಕ್ರಿಸ್ಮಸ್ ದಿನ (ಡಿಸೆಂಬರ್ 25) ಮುಚ್ಚಲ್ಪಟ್ಟಿರುತ್ತಾರೆ. ಸಾಮಾನ್ಯವಾಗಿ ದೀಪಾವಳಿ, ಕ್ರಿಸ್‌ಮಸ್, ಈದ್, ಗುರುನಾನಕ್ ಜಯಂತಿ, ಶುಭ ಶುಕ್ರವಾರ ಸೇರಿದಂತೆ ಹಬ್ಬಗಳಂದು ಬ್ಯಾಂಕ್‌ಗಳು ಮುಚ್ಚಿರುತ್ತವೆ.












Click it and Unblock the Notifications