ಐಐಟಿ ವಿದ್ಯಾರ್ಥಿಗೆ 91 ಲಕ್ಷ ರು ಸಂಬಳದ ಆಫರ್
ಖರಗ್ ಪುರ್, ನ.5: ಇಲ್ಲಿನ್ ಐಐಟಿ ವಿದ್ಯಾರ್ಥಿಗಳಿಗೆ ಎಂಎನ್ ಸಿ ಕಂಪನಿಗಳಿಂದ ಆಫರ್ ಗಳ ಸುರಿಮಳೆಯಾಗುತ್ತಿದೆ. ಕ್ಯಾಂಪಸ್ ಸೆಲೆಕ್ಷನ್ ಗೆ ಇನ್ನೂ ಒಂದು ತಿಂಗಳು ಬಾಕಿ ಇರುವಾಗಲೇ ಉದ್ಯೋಗವಕಾಶಗಳು ಹುಡುಕಿಕೊಂಡು ಬರುತ್ತಿವೆ.
ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಪ್ರೀ ಪ್ಲೇಸ್ ಮೇಂಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಶೇ 20ರಷ್ಟು ಸಂಬಳ ಏರಿಕೆಯಾಗಿದೆ. ಐಐಟಿ ಅಧಿಕಾರಿಗಳ ಪ್ರಕಾರ 125 ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ದೊರೆತಿದೆ.ಇಲ್ಲಿಯವರೆಗೂ ಅತಿ ಹೆಚ್ಚಿನ ಅಂದರೆ 91 ಲಕ್ಷ ವಾರ್ಷಿಕ ವೇತನವನ್ನು ಒಬ್ಬ ವಿದ್ಯಾರ್ಥಿಗೆ ನೀಡಲಾಗಿದೆ. ಅ ಅದೃಷ್ಟವಂತ ಪ್ರತಿಭಾವಂತ ವಿದ್ಯಾರ್ಥಿ ಹೆಸರು ಮಾತ್ರ ಇನ್ನೂ ತಿಳಿದು ಬಂದಿಲ್ಲ.

ಗೂಗಲ್ ಮೌಂಟೈನ್ ವ್ಯೂ, ಫೇಸ್ ಬುಕ್, ವರ್ಕ್ ಅಪ್ಲಿಕೇಷನ್, ಶುಲಂಬರ್ಗರ್ ಮುಂತಾದ ಸಂಸ್ಥೆಗಳ ಅಧಿಕಾರಿಗಳು ಈಗಾಗಲೇ ಐಐಟಿ ಖರಗ್ ಪುರ್ ನಲ್ಲೇ ಬೀಡುಬಿಟ್ಟಿವೆ. ಡಿಸೆಂಬರ್ 1 ರ ನಂತರ ಅಧಿಕೃತವಾಗಿ ನೇಮಕಾತಿ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಈ ಬಾರಿ ಶೇ 50 ರಷ್ಟು ನೇಮಕಾತಿ ಹೆಚ್ಚಳವಾಗಲಿದೆ.
ಹೆಚ್ಚೆಚ್ಚು ಕಂಪನಿಗಳು ಐಐಟಿಯತ್ತ ಮುಖ ಮಾಡಿರುವುದನ್ನು ಸ್ವಾಗತಿಸಿರುವ ಐಐಟಿ ಖರಗ್ ಪುರದ ವೃತ್ತಿ ಅಭಿವೃದ್ಧಿ ಕೇಂದ್ರದ ಚೇಮನ್ ಪ್ರೊ ಎಸ್ ಕೆ ಬರಾಯಿ ಅವರು ಮಾತನಾಡಿ, ಈ ವರ್ಷ ಕಾರ್ಪೊರೇಟ್ ವರ್ಕ್ ಶಾಪ್, ಕೌಶಲ್ಯ ಅಭಿವೃದ್ಧಿ ಕಾರ್ಯಗಾರಗಳನ್ನು ನಡೆಸಿದ್ದು ಫಲ ಕೊಟ್ಟಿದೆ ಎಂದಿದ್ದಾರೆ. (ಪಿಟಿಐ)
-
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Donald Trump: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಕಳಪೆ ಕೆಲಸ ಮಾಡಿದೆ: ಡೊನಾಲ್ಡ್ ಟ್ರಂಪ್












Click it and Unblock the Notifications