ಆದಾಯ ತೆರಿಗೆ ರಿಟರ್ನ್ ಇ-ಪರಿಶೀಲನೆ ಕಡ್ಡಾಯ: ಇ-ಪರಿಶೀಲನೆಗೆ ಮಾಡುವುದು ಹೀಗೆ
ಜುಲೈ 31, 2022 ರವರೆಗೆ 5.82 ಕೋಟಿ ಜನರು ತಮ್ಮ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಿದ್ದಾರೆ ಮತ್ತು ಅವರಲ್ಲಿ 4 ಕೋಟಿ ತೆರಿಗೆದಾರರು ಮಾತ್ರ ಆದಾಯ ತೆರಿಗೆ ರಿಟರ್ನ್ ಇ-ಪರಿಶೀಲನೆ ಮಾಡಿದ್ದಾರೆ. ಆದಾಯ ತೆರಿಗೆ ಇಲಾಖೆಯು ಪರಿಶೀಲನೆ ಮಾಡದ ಐಟಿಆರ್‌ಗಳನ್ನು ಅಮಾನ್ಯವೆಂದು ಪರಿಗಣಿಸುತ್ತದೆ. ಆದ್ದರಿಂದ ತೆರಿಗೆದಾರರು ಆದಾಯ ತೆರಿಗೆ ರಿಟರ್ನ್ಸ್‌ಗಳನ್ನು ಪರಿಶೀಲಿಸುವ ಮಹತ್ವದ ಬಗ್ಗೆ ತಿಳಿದುಕೊಳ್ಳಬೇಕಾಗಿದೆ. ಸರಳ ವಿಧಾನದ ಮೂಲಕ ನೀವು ಆದಾಯ ಆದಾಯ ತೆರಿಗೆ ರಿಟರ್ನ್ಸ್ ಇ-ಪರಿಶೀಲನೆ ಮಾಡಬಹುದಾಗಿದೆ.
ತೆರಿಗೆ ಪಾವತಿದಾರರಿಗೆ ಒಳ್ಳೆಯ ಸುದ್ದಿ ಏನೆಂದರೆ, ಇ-ಪೋರ್ಟಲ್ ಮೂಲಕ ಸಲ್ಲಿಸಿದ ಆದಾಯ ತೆರಿಗೆ ರಿಟರ್ನ್ಸ್‌ಗಳ ಪರಿಶೀಲನೆಯ ಸಮಯ ಮಿತಿಯನ್ನು 120 ದಿನಗಳಿಂದ 30 ದಿನಗಳವರೆಗೆ 1ನೇ ಆಗಸ್ಟ್ 2022 ರಂದು ಅಥವಾ ನಂತರ ಸಲ್ಲಿಸಿದ ರಿಟರ್ನ್ಸ್‌ಗಳಿಗೆ ಕಡಿಮೆ ಮಾಡಲಾಗಿದೆ. ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (CBDT) 29ನೇ ಜುಲೈ 2022 ರಂದು ಅಧಿಸೂಚನೆಯ ಮೂಲಕ ಇದನ್ನು ಪ್ರಕಟಿಸಿದೆ.
ನೀವು ರಿಟರ್ನ್ಸ್ ಸಲ್ಲಿಸಿದ ನಂತರ ಒಂದು ತಿಂಗಳೊಳಗೆ ನೀವು ಐಟಿಆರ್ ಅನ್ನು ಇ-ಪರಿಶೀಲಿಸಬೇಕು. ಆದಾಯ ತೆರಿಗೆ ರಿಟರ್ನ್ಸ್ ಪ್ರಕ್ರಿಯೆ ಪೂರ್ಣಗೊಳಿಸಲು ಆಗಸ್ಟ್ 31 ರೊಳಗೆ ಇ-ಪರಿಶೀಲನೆ ನಡೆಸಬೇಕು.

ಇ-ಪರಿಶೀಲನೆ ಮಾಡುವುದು ಹೇಗೆ?; ಆಧಾರ್ ಆಧಾರಿತ ಒಟಿಪಿ (OTP)ಗಳು, ಬ್ಯಾಂಕ್ ಮತ್ತು ಡಿಮ್ಯಾಟ್ ಖಾತೆಗಳು, ನೆಟ್ ಬ್ಯಾಂಕಿಂಗ್, ಎಟಿಎಂ ಮತ್ತು ಡಿಜಿಟಲ್ ಸಹಿ ಪ್ರಮಾಣಪತ್ರಗಳು ಸೇರಿದಂತೆ ಲಭ್ಯವಿರುವ ಹಲವು ಆಯ್ಕೆಗಳ ಮೂಲಕ ತೆರಿಗೆದಾರರು ತಮ್ಮ ಆದಾಯ ತೆರಿಗೆ ರಿಟರ್ನ್ಸ್‌ಗಳನ್ನು ಇ-ಪರಿಶೀಲಿಸಬೇಕು.
ಆದಾಯ ತೆರಿಗೆ ರಿಟರ್ನ್ಸ್ ಅನ್ನು ಇ-ಪರಿಶೀಲಿಸುವ ಸರಳ ವಿಧಾನವೆಂದರೆ ಆಧಾರ್ ಆಧಾರಿತ ಒಟಿಪಿ ವಿಧಾನ, ಅದಕ್ಕಾಗಿ ನಿಮ್ಮ ಮೊಬೈಲ್ ಸಂಖ್ಯೆಯನ್ನು ಆಧಾರ್‌ಗೆ ಲಿಂಕ್ ಮಾಡಬೇಕು.
ಆದಾಯ ತೆರಿಗೆ ಪೋರ್ಟಲ್‌ನ ಇ-ಪರಿಶೀಲನೆ ಪುಟಕ್ಕೆ ಭೇಟಿ ನೀಡಿ, ಆಧಾರ್ ಆಧಾರಿತ ಒಟಿಪಿ ಬಳಸುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
ನಂತರ ನಿಮ್ಮ ಆಧಾರ್ ಮಾಹಿತಿಯನ್ನು ಮೌಲ್ಯೀಕರಿಸಲು ಕೇಳುವ ಪಾಪ್-ಅಪ್ ಕಾಣಿಸಿಕೊಳ್ಳುತ್ತದೆ, ಆ ಬಾಕ್ಸ್ ಅನ್ನು ಭರ್ತಿ ಮಾಡಿ.

'ಜನರೇಟ್ ಆಧಾರ್ ಒಟಿಪಿ' ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ನೀವು ಆರು-ಅಂಕಿಯ ಒಟಿಪಿ ಅನ್ನು ಸ್ವೀಕರಿಸುತ್ತೀರಿ.
ಒಟಿಪಿ ಅನ್ನು ನಮೂದಿಸಿ ಮತ್ತು ಸಲ್ಲಿಸಿ. ಈ ಒಟಿಪಿ 15 ನಿಮಿಷಗಳವರೆಗೆ ಮಾತ್ರ ಮಾನ್ಯವಾಗಿರುತ್ತದೆ.
ಈಗ ನೀವು ಆದಾಯ ತೆರಿಗೆ ರಿಟರ್ನ್ಸ್ ಅನ್ನು ಇ-ಪರಿಶೀಲನೆ ಮಾಡಿರುವ ಸಂದೇಶ ಬರುತ್ತದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications