ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯ ಗಡುವು ವಿಸ್ತರಣೆ
ನವದೆಹಲಿ, ಅಕ್ಟೋಬರ್ 24: ಆದಾಯ ತೆರಿಗೆ ಪಾವತಿದಾರರಿಗೆ ಕೇಂದ್ರ ಸರ್ಕಾರ ಸ್ವಲ್ಪ ನೆಮ್ಮದಿ ನೀಡಿದೆ. 2019-20ನೇ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ಪಾವತಿಸುವ ಗಡುವನ್ನು 2020ರ ಡಿಸೆಂಬರ್ 31ರವರೆಗೂ ವಿಸ್ತರಿಸಿದೆ.
ಖಾತೆಗಳ ಲೆಕ್ಕಪರಿಶೋಧನೆ ನಡೆಸಬೇಕಿರುವ ತೆರಿಗೆದಾರರಿಗೆ ಐಟಿಆರ್ ಸಲ್ಲಿಸಲು ಇರುವ ಗಡುವನ್ನು 2021ರ ಜನವರಿ 31ರವರೆಗೂ ವಿಸ್ತರಿಸಲಾಗಿದೆ ಎಂದು ಹಣಕಾಸು ಸಚಿವಾಲಯ ಶನಿವಾರ ತಿಳಿಸಿದೆ. ಕೊರೊನಾ ವೈರಸ್ ಸೋಂಕಿನ ಸಂಕಷ್ಟದ ನಡುವೆ ತೆರಿಗೆದಾರರು ವಿವಿಧ ರೀತಿಯ ಸವಾಲುಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ.
2019-20ನೇ ಸಾಲಿನ ಐಟಿಆರ್ ಸಲ್ಲಿಕೆಯ ದಿನವನ್ನು ಜುಲೈ 31ರಿಂದ ನವೆಂಬರ್ 30ರವರೆಗೆ ವಿಸ್ತರಿಸಿ ಮೇ ತಿಂಗಳಲ್ಲಿ ಸರ್ಕಾರ ಆದೇಶ ಹೊರಡಿಸಿತ್ತು. ಆದಾಯ ತೆರಿಗೆ ರಿಟರ್ನ್ಸ್ ಪಾವತಿ ಮಾಡಲು ತೆರಿಗೆದಾರರಿಗೆ ಇನ್ನಷ್ಟು ಕಾಲಾವಕಾಶ ನೀಡುವ ಉದ್ದೇಶದಿಂದ ಅಂತಿಮ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ ಎಂದು ಆದಾಯ ತೆರಿಗೆ ಇಲಾಖೆಯ ಉನ್ನತ ನೀತಿ ನಿರೂಪಣಾ ಸಂಸ್ಥೆ ನೇರ ತೆರಿಗೆಗಳ ಕೇಂದ್ರ ಮಂಡಳಿ ಹೇಳಿದೆ.

'ಅಂತಾರಾಷ್ಟ್ರೀಯ, ನಿರ್ದಿಷ್ಟ ಆಂತರಿಕ ವ್ಯವಹಾರಗಳಿಗೆ ಸಂಬಂಧಿಸಿದಂತೆ ವರದಿ ಒದಗಿಸಬೇಕಾದ ತೆರಿಗೆದಾರರು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಕೊನೆಯ ದಿನವನ್ನು 2021ರ ಜನವರಿ 31ರವರೆಗೂ ವಿಸ್ತರಿಸಲಾಗಿದೆ.












Click it and Unblock the Notifications