ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರ್ಥಿಕ ಅಭಿವೃದ್ಧಿ ದರ: ಚೀನಾ ಹಿಂದಿಕ್ಕಿದ ಭಾರತ

|
Google Oneindia Kannada News

ನವದೆಹಲಿ, ಫೆ. 10: ಭಾರತ ವಿಶ್ವದಲ್ಲೇ ವೇಗವಾಗಿ ಆರ್ಥಿಕ ಬೆಳವಣಿಗೆ ಹೊಂದುತ್ತಿರುವ ರಾಷ್ಟ್ರವಾಗಿ ಹೊರಹೊಮ್ಮಿದೆ. ಮಾರ್ಚ್ ಗೆ ಕೊನೆಗೊಳ್ಳುವ ವಿತ್ತ ವರ್ಷದಲ್ಲಿ ಭಾರತದ ಆರ್ಥಿಕ ಅಭಿವೃದ್ಧಿ ದರ ಶೇ. 7.4 ಕ್ಕೆ ತಲುಪಲಿದೆ ಎಂದು ನಿರೀಕ್ಷಿಸಲಾಗಿದೆ.

ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ನೆರೆಯ ಚೀನಾ ಶೆ. 7.3 ರಷ್ಟು ಬೆಳವಣಿಗೆ ಸಾಧಿಸಿದೆ. ನರೇಂದ್ರ ಮೋದಿ ಅಧಿಕಾರಕ್ಕೆ ಬಂದಿದ್ದು ಜಿಡಿಪಿ ಮೇಲೆ ಯಾವ ಪರಿಣಾಮ ಉಂಟುಮಾಡಿಲ್ಲ ಎಂದೇ ಹೇಳಲಾಗಿತ್ತು. ಆದರೆ ಈಗ ಹೊಸ ವಿಧಾನದಲ್ಲಿ ಪರಿಷ್ಕರಣೆ ಮಾಡಿದ ನಂತರ ಜೆಡಿಪಿಯಲ್ಲಿ ನಿರೀಕ್ಷೆ ಮೀರಿದ ಬೆಳವಣಿಗೆ ಕಂಡುಬಂದಿದೆ.[ಎರಡು ವರ್ಷದಲ್ಲೇ ಅತಿಹೆಚ್ಚಿನ ಜಿಡಿಪಿ ಸಾಧನೆ]

money

ಕೃಷಿಯಲ್ಲಿ ಸ್ವಲ್ಪ ಹಿನ್ನಡೆ ಕಂಡುಬಂದಿದ್ದರೂ, ಉಳಿದ ಕ್ಷೇತ್ರಗಳಲ್ಲಿ ಅಂದರೆ ಕೈಗಾರಿಕೆ, ಬಂಡವಾಳ ಹೂಡಿಕೆ ವಿಭಾಗದಲ್ಲಿ ಅಪರಿಮಿತ ಬೆಳವಣಿಗೆ ಕಂಡುಬಂದಿದೆ. ಭಾರತ ಮತ್ತು ಚೀನಾ ನಡುವಿನ ಆರ್ಥಿಕ ವ್ಯವಸ್ಥೆಯ ಗಾತ್ರದಲ್ಲಿ ವ್ಯತ್ಯಾಸವಿದ್ದರೂ ಶೇಕಡಾವಾರು ಲೆಕ್ಕದಲ್ಲಿ ಭಾರತ ಏಷ್ಯಾದ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಿದೆ.

ಮೋದಿ ಅಧಿಕಾರ ಸ್ವೀಕರಿಸುವ ವೇಳೆ 1980 ರ ನಂತರ ಜಿಡಿಪಿ ಕನಿಷ್ಠ ಮಟ್ಟಕ್ಕೆ ಕುಸಿದಿತ್ತು. ಆದರೆ ಕೆಲ ದಿನಗಳ ಹಿಂದೆ ಬೆಸ್ ಇಯರ್ ನ್ನು 2004-05 ರಿಂದ 2011-12 ಕ್ಕೆ ಬದಲಿಸಿ ಲೆಕ್ಕ ಮಾಡಿದಾಗ ಭಾರತದ ಆರ್ಥಿಕ ಅಭಿವೃದ್ಧಿಯ ಸ್ಪಷ್ಟ ಚಿತ್ರಣ ಸಿಕ್ಕಿದೆ. ಒಟ್ಟಿನಲ್ಲಿ ಭಾರತ ಆರ್ಥಿಕ ಅಭಿವೃದ್ಧಿಯಲ್ಲಿ ಚೀನಾವನ್ನು ಹಿಂದಿಕ್ಕಿದೆ.

English summary
Indian economy will grow by 7.4 per cent this fiscal, outpacing China to become the world's fastest growing economy, after a revision in the method of calculations.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X