ಅವಳಿ ಮಕ್ಕಳಿಗೆ ತಾಯಿಯಾದ ಇಶಾ, ಅಂಬಾನಿ ಮನೆಯಲ್ಲಿ ಸಂಭ್ರಮ
ಮುಂಬೈ, ನವೆಂಬರ್ 20: ಮುಖೇಶ್ ಅಂಬಾನಿ ಅವರ ಪುತ್ರಿ ಇಶಾ ಅಂಬಾನಿ ಮತ್ತು ಅವರ ಪತಿ ಆನಂದ್ ಪಿರಾಮಲ್ ಅವರಿಗೆ ಅವಳಿ ಮಕ್ಕಳ ಜನನವಾಗಿದೆ. ಅದರಲ್ಲಿ ಗಂಡು ಮತ್ತು ಹೆಣ್ಣು ಮಗುವನ್ನು ಇಂದು ಸ್ವಾಗತಿಸಿದ್ದಾರೆ ಎಂದು ಕುಟುಂಬದ ಹೇಳಿಕೆ ತಿಳಿಸಿದೆ. ಇಬ್ಬರು ಮಕ್ಕಳಿಗೆ ಆದಿಯಾ ಮತ್ತು ಕೃಷ್ಣ ಎಂದು ಹೆಸರಿಡಲಾಗಿದೆ.
''ನಮ್ಮ ಮಕ್ಕಳಾದ ಇಶಾ ಮತ್ತು ಆನಂದ್ ಅವರು 19 ನವೆಂಬರ್ 2022 ರಂದು ಅವಳಿ ಮಕ್ಕಳಿಗೆ ಜನ್ಮವಿತ್ತಿದ್ದಾರೆ ಎಂದು ಹಂಚಿಕೊಳ್ಳಲು ನಾವು ಸಂತೋಷಪಡುತ್ತೇವೆ. ಇಶಾ ಮತ್ತು ಮಕ್ಕಳು, ಹೆಣ್ಣು ಮಗು ಆದಿಯಾ ಮತ್ತು ಮಗು ಕೃಷ್ಣ ಅವರು ಆರೋಗ್ಯವಾಗಿದ್ದಾರೆ. ಆದಿಯಾ, ಕೃಷ್ಣ, ಇಶಾ ಮತ್ತು ಆನಂದ್ ಅವರ ಜೀವನದ ಈ ಪ್ರಮುಖ ಘಟ್ಟವಾದ ಈ ಸಂದರ್ಭದಲ್ಲಿ ನಾವು ನಿಮ್ಮ ಆಶೀರ್ವಾದ ಮತ್ತು ಶುಭ ಹಾರೈಕೆಗಳನ್ನು ಬಯಸುತ್ತೇವೆ'' ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
ರಿಲಯನ್ಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಪುತ್ರಿ ಇಶಾ ಅಂಬಾನಿ ಮತ್ತು ಕೈಗಾರಿಕೋದ್ಯಮಿ ಅಜಯ್ ಪಿರಾಮಲ್ ಮತ್ತು ಸ್ವಾತಿ ಪಿರಾಮಲ್ ಅವರ ಪುತ್ರ ಆನಂದ್ ಪಿರಮಾಲ್ ಅವರು 2018ರಲ್ಲಿ ಮುಂಬೈನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ವಿವಾಹವಾಗಿದ್ದರು. ಮದುವೆ ಸಮಾರಂಭಗಳಲ್ಲಿ ಬಾಲಿವುಡ್, ರಾಜಕೀಯ ಮತ್ತು ಉದ್ಯಮಿಗಳು ಕಾಣಿಸಿಕೊಂಡಿದ್ದರು.

ಡಿಸೆಂಬರ್ 2020ರಲ್ಲಿ ಮುಖೇಶ್ ಅಂಬಾನಿ ಅವರ ಮಗ ಆಕಾಶ್ ಅಂಬಾನಿ ಮತ್ತು ಸೊಸೆ ಶ್ಲೋಕಾ ಅಂಬಾನಿ ತಮ್ಮ ಗಂಡು ಮಗುವಿಗೆ ತಂದೆ ತಾಯಿಯಾಗಿದ್ದರು. ಇಶಾ ಅಂಬಾನಿ ಅವರನ್ನು ಈ ವರ್ಷದ ಆಗಸ್ಟ್‌ನಲ್ಲಿ ರಿಲಯನ್ಸ್ ಗ್ರೂಪ್‌ನ ರಿಟೇಲ್ ವ್ಯಾಪಾರದ ಮುಖ್ಯಸ್ಥರಾಗಿ ನೇಮಿಸಲಾಯಿತು. ಅದೇ ಸಮಯದಲ್ಲಿ ಮುಖೇಶ್ ಅಂಬಾನಿ ತಮ್ಮ ಕಿರಿಯ ಮಗ ಅನಂತ್ ಅಂಬಾನಿಯನ್ನು ತಮ್ಮ ಹೊಸ ಇಂಧನ ವ್ಯವಹಾರದ ಮುಖ್ಯಸ್ಥರಾಗಿ ನೇಮಿಸಲಾಯಿತು.

ಆಕಾಶ್ ಮತ್ತು ಇಶಾ ಕ್ರಮವಾಗಿ ಜಿಯೋ ಮತ್ತು ರಿಟೇಲ್‌ನಲ್ಲಿ ನಾಯಕತ್ವದ ಪಾತ್ರಗಳನ್ನು ವಹಿಸಿಕೊಂಡಿದ್ದಾರೆ. ಅವರು ಪ್ರಾರಂಭದಿಂದಲೂ ನಮ್ಮ ಗ್ರಾಹಕ ವ್ಯವಹಾರಗಳಲ್ಲಿ ಉತ್ಸಾಹದಿಂದ ತೊಡಗಿಸಿಕೊಂಡಿದ್ದಾರೆ ಎಂದು ಮುಕೇಶ್ ಅಂಬಾನಿ ಹೇಳಿದರು. ಅನಂತ್ ಕೂಡ ನಮ್ಮ ಹೊಸ ಎನರ್ಜಿ ವ್ಯಾಪಾರಕ್ಕೆ ಬಹಳ ಉತ್ಸಾಹದಿಂದ ಸೇರಿಕೊಂಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications