ಬ್ಯಾಂಕಿಂಗ್ ವಲಯಕ್ಕೆ ಕಾಲಿಡಲಿರುವ ರಿಲಯನ್ಸ್ ಜಿಯೋ

Posted By:
Subscribe to Oneindia Kannada

ಮುಂಬೈ, ಅಕ್ಟೋಬರ್ 10: ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್ಐಎಲ್) ಈಗ ಬ್ಯಾಂಕಿಂಗ್ ಕ್ಷೇತ್ರಕ್ಕೆ ಅಧಿಕೃತವಾಗಿ ಎಂಟ್ರಿ ಕೊಡಲು ಸಿದ್ಧತೆ ನಡೆಸಿದ್ದಾರೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್.ಬಿ.ಐ.) ಕಾರಣದಿಂದ ವಿಳಂಬವಾಗಿದ್ದ ಈ ಪ್ರಕ್ರಿಯೆಗೆ ಚಾಲನೆ ದೊರೆತಿದ್ದು, ವರ್ಷಾಂತ್ಯಕ್ಕೆ ಜಿಯೊ ಪೇಮೆಂಟ್ಸ್ ಬ್ಯಾಂಕ್ ಆರಂಭವಾಗಲಿದೆ.

ಜಿಯೋ ಪೇಮೆಂಟ್ ಬ್ಯಾಂಕ್ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್ಐಎಲ್) 70:30 ಅನುಪಾತದಂತೆ ಜಂಟಿಯಾಗಿ ಡಿಸೆಂಬರ್ ನಲ್ಲಿ ಕಾರ್ಯಾಚರಣೆ ಆರಂಭಿಸಲಿವೆ.

Jio Payments Bank likely to launch in December

ಸಾರ್ವಜನಿಕ ವಲಯದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೂಡಾ ಈ ಜಂಟಿ ಸಹಯೋಗದಲ್ಲಿ ತನ್ನ ಪಾಲು ಹೊಂದಿದೆ. ಎಸ್.ಬಿ.ಐ. ಏಪ್ರಿಲ್ 1 ರ ವೇಳೆಗೆ 420 ಮಿಲಿಯನ್ ಗ್ರಾಹಕರನ್ನು ಹೊಂದಿದ್ದು, ಹೊಸ ಗ್ರಾಹಕರನ್ನು ತಲುಪಲು ಜಿಯೊ ನೆರವಾಗಲಿದೆ.

ಮಾರ್ಚ್ ನಲ್ಲಿ 100 ಮಿಲಿಯನ್ ಗ್ರಾಹಕರನ್ನು ತಲುಪಿದ ಜಿಯೊಗೆ ಪೇಮೆಂಟ್ಸ್ ಬ್ಯಾಂಕ್ ಆರಂಭಿಸಲು ಆರ್.ಬಿ.ಐ.ನಿಂದ ಅನುಮತಿ ಸಿಕ್ಕಿದೆ.ಆಗಸ್ಟ್ 31 ರ ವೇಳೆಗೆ ಜಿಯೊ 129 ದಶಲಕ್ಷ ಗ್ರಾಹಕರನ್ನು ಹೊಂದಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Jio Payments Bank, a 70:30 joint venture between Mukesh Ambani-owned Reliance Industries Ltd (RIL) and State Bank of India (SBI), will begin operations in December, three people aware of the plans said.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ