ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

20.9 ಎಂಬಿಪಿಎಸ್ ಡೌನ್ಲೋಡ್ ವೇಗ, ಮುಂಚೂಣಿ ಸ್ಥಾನ ಪಡೆದ ಜಿಯೋ

|
Google Oneindia Kannada News

ನವದೆಹಲಿ, ಅಕ್ಟೋಬರ್ 19: ರಿಲಯನ್ಸ್ ಜಿಯೋ ಪ್ರತಿ ಸೆಕೆಂಡ್‌ಗೆ ಸರಾಸರಿ 20.9 ಮೆಗಾಬೈಟ್ (ಎಂಬಿಪಿಎಸ್) ಡೌನ್‌ಲೋಡ್ ವೇಗ ಕಾಯ್ದುಕೊಳ್ಳುವ ಮೂಲಕ 4ಜಿ ವಿಭಾಗದಲ್ಲಿ ಅಕ್ಟೋಬರ್ ತಿಂಗಳಲ್ಲಿ ಕೂಡ ಮೊದಲ ಸ್ಥಾನದಲ್ಲಿ ಪಡೆದುಕೊಂಡಿದೆ.

ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಬಿಡುಗಡೆ ಮಾಡಿರುವ ವರದಿ ಪ್ರಕಾರ, ಸೆಪ್ಟೆಂಬರ್ ತಿಂಗಳಲ್ಲಿ ರಿಲಯನ್ಸ್ ಜಿಯೋದ 4ಜಿ ನೆಟ್‌ವರ್ಕ್ ವೇಗವು ಶೇ 15ರಷ್ಟು ಹೆಚ್ಚಾಗಿದೆ. ಅದರ ಪ್ರತಿಸ್ಪರ್ಧಿ ಕಂಪೆನಿಗಳಾದ ಭಾರ್ತಿ ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾ (ವಿಐ) ವೇಗವು ತಿಂಗಳಿಂದ ತಿಂಗಳಿಗೆ ಕ್ರಮವಾಗಿ ಸುಮಾರು ಶೇ 85 ಮತ್ತು ಶೇ 60ರಷ್ಟು, ಅಂದರೆ 11.9 ಎಂಬಿಪಿಎಸ್ ಹಾಗೂ 14.4 ಎಂಬಿಪಿಎಸ್‌ನಷ್ಟು ಏರಿಕೆಯಾಗಿದೆ.

ಜೂನ್‌ ವರದಿ: 4ಜಿ ಡೌನ್‌ಲೋಡ್ ವೇಗದಲ್ಲಿ ಜಿಯೋ ನಂ.1 ಜೂನ್‌ ವರದಿ: 4ಜಿ ಡೌನ್‌ಲೋಡ್ ವೇಗದಲ್ಲಿ ಜಿಯೋ ನಂ.1

ಇನ್ನು 7.2 ಎಂಬಿಪಿಎಸ್ ಡೇಟಾ ವೇಗ ಹೊಂದಿರುವ ವೊಡಾಫೋನ್ ಐಡಿಯಾ ಅಪ್ಲೋಡ್ ವಿಭಾಗದಲ್ಲಿ ಮೊದಲ ಸ್ಥಾನವನ್ನು ಕಾಯ್ದುಕೊಂಡಿದೆ.

Jio tops 4G chart with 20.9 Mbps download speed in Sep: Trai

ಡೌನ್‌ಲೋಡ್ ವೇಗವು ಗ್ರಾಹಕರು ಅಂತರ್ಜಾಲದಿಂದ ಮಾಹಿತಿಗಳನ್ನು ಪಡೆದುಕೊಳ್ಳಲು ನೆರವಾಗುತ್ತದೆ. ಅಪ್‌ಲೋಡ್ ವೇಗವು ತಮ್ಮ ಸಂಪರ್ಕದಲ್ಲಿರುವವರಿಗೆ ಚಿತ್ರಗಳು ಮತ್ತು ವಿಡಿಯೋಗಳನ್ನು ತ್ವರಿತವಾಗಿ ರವಾನಿಸಲು ನೆರವಾಗುತ್ತದೆ. ಟ್ರಾಯ್ ಪ್ರಕಾರ ಸೆಪ್ಟೆಂಬರ್ ತಿಂಗಳಲ್ಲಿ ಎಲ್ಲ ಮೂರೂ ಖಾಸಗಿ ಆಪರೇಟರ್‌ಗಳ 4ಜಿ ಅಪ್‌ಲೋಡ್ ವೇಗದಲ್ಲಿ ಸುಧಾರಣೆಯಾಗಿದೆ.

ವೊಡಾಫೋನ್ ಐಡಿಯಾ ಸೆಪ್ಟೆಂಬರ್ ತಿಂಗಳಲ್ಲಿ 7.2 ಎಂಬಿಪಿಎಸ್ ಸರಾಸರಿ ಅಪ್‌ಲೋಡ್ ವೇಗ ಹೊಂದಿತ್ತು. ನಂತರದ ಸ್ಥಾನದಲ್ಲಿ 6.2 ಎಂಬಿಪಿಎಸ್ ವೇಗ ಇರುವ ರಿಲಯನ್ಸ್ ಜಿಯೋ ಇದ್ದರೆ, ಭಾರ್ತಿ ಏರ್ಟೆಲ್ 4.5 ಎಂಬಿಪಿಎಸ್ ವೇಗದೊಂದಿಗೆ ಕೊನೆಯ ಸ್ಥಾನದಲ್ಲಿದೆ.

ಸರ್ಕಾರಿ ಸ್ವಾಮ್ಯದ ದೂರಸಂರ್ಪಕ ಸಂಸ್ಥೆ ಬಿಎಸ್ಎನ್ಎಲ್, ಆಯ್ದ ಪ್ರದೇಶಗಳಲ್ಲಿ 4ಜಿ ಸಂಪರ್ಕವನ್ನು ಕಲ್ಪಿಸಿದೆ. ಆದರೆ, ಅದರ ನೆಟ್ವರ್ಕ್ ವೇಗವನ್ನು ಟ್ರಾಯ್ ಚಾರ್ಟ್‌ನಲ್ಲಿ ನಮೂದಿಸಿಲ್ಲ.

ಮೈಸ್ಪೀಡ್ ಆಪ್‌ನ ಸಹಾಯದೊಂದಿಗೆ ದೇಶಾದ್ಯಂತ ರಿಯಲ್ ಟೈಮ್ ಆಧಾರದಲ್ಲಿ ದತ್ತಾಂಶಗಳನ್ನು ಸಂಗ್ರಹಿಸುವ ಟ್ರಾಯ್, ಅದರ ಮೂಲಕ ಸರಾಸರಿ ವೇಗವನ್ನು ಲೆಕ್ಕ ಹಾಕುತ್ತದೆ.

ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿ ತನ್ನ ಗ್ರಾಹಕ ಅನುಭವವನ್ನು ವೃದ್ಧಿಸುವುದಕ್ಕಾಗಿ 1800 ಬ್ಯಾಂಡ್‌ನಲ್ಲಿ ಹೆಚ್ಚುವರಿ 5MHz ತರಂಗಾಂತರವನ್ನು ಅಳವಡಿಸುವುದರಲ್ಲಿ ಯಶಸ್ವಿಯಾಗಿದೆ.
ಈ ವರ್ಷದ ಮಾರ್ಚ್‌ ತಿಂಗಳಲ್ಲಿ ಡಿಒಟಿ ನಡೆಸಿದ ತರಂಗಾಂತರ (ಸ್ಪೆಕ್ಟ್ರಂ) ಹರಾಜಿನಲ್ಲಿ ಖರೀದಿಸಿದ ಹೆಚ್ಚುವರಿ 20MHz ತರಂಗಾಂತರದ ಅಳವಡಿಕೆಯನ್ನು ಪೂರ್ಣಗೊಳಿಸಿದಂತಾಗಿದೆ. ಈ ತರಂಗಾಂತರ ವೃದ್ಧಿಯು ಕರ್ನಾಟಕದಲ್ಲಿನ ಸಂಪೂರ್ಣ ಗ್ರಾಹಕ ನೆಲೆಗೆ ಜಿಯೋ ನೆಟ್‌ವರ್ಕ್ ಅನುಭವವನ್ನು ಪರಿಣಾಮಕಾರಿಯಾಗಿ ಹೆಚ್ಚಿಸಿದೆ.

ಜಿಯೋ ತನ್ನ ಹೆಜ್ಜೆಗುರುತನ್ನು ಶೇ 55ರಷ್ಟು ಏರಿಕೆಯೊಂದಿಗೆ ಒಟ್ಟು 1717 MHZಗೆ ಗಣನೀಯವಾಗಿ ಹೆಚ್ಚಿಸಿಕೊಂಡಿದೆ. ಜಿಯೋ ಪ್ರಸ್ತುತ 443 ಮಿಲಿಯನ್ ಗ್ರಾಹಕರನ್ನು ಹೊಂದಿದೆ.

ಆರ್‌ ಜೆ ಐ ಎಲ್, ತನ್ನ ಹಾಲಿ ಬಳಕೆದಾರರಿಗೆ ಸೇವೆ ಒದಗಿಸಲು ನೆಟ್‌ವರ್ಕ್ ಸಾಮರ್ಥ್ಯವನ್ನು ಹೆಚ್ಚಿಸಲಿದೆ. ಈ ವೃದ್ಧಿಯು ಮುಂದೆ 300 ಮಿಲಿಯನ್ ಬಳಕೆದಾರರನ್ನು ಸೇರ್ಪಡೆಗೊಳಿಸುವ ಮೂಲಕ ಡಿಜಿಟಲ್ ಸೇವೆಗಳತ್ತ ಹಾಗೂ 5ಜಿ ಸೇವೆಗಳ ಪರಿವರ್ತನೆಗೆ ಸಾಗಲು ಕೂಡ ನೆರವಾಗಲಿದೆ.

ಮತ್ತಷ್ಟು 4ಜಿ ಟವರ್‌ಗಳ ಬೇಡಿಕೆಯನ್ನು ಈಡೇರಿಸಲು, ಜಿಯೋ ಕರ್ನಾಟಕ 2021ರಲ್ಲಿ ತನ್ನ 4ಜಿ ನೆಟ್‌ವರ್ಕ್ಅನ್ನು ಶೇ 28ರಷ್ಟು ವಿಸ್ತರಿಸುತ್ತಿದೆ. ಪ್ರಸ್ತುತ ಜಿಯೋ ರಾಜ್ಯದಲ್ಲಿ 22,300ಕ್ಕಿಂತ ಹೆಚ್ಚು 4ಜಿ ನೆಟ್‌ವರ್ಕ್ ಸೈಟ್‌ಗಳನ್ನು ಹೊಂದಿದ್ದು, ಇದು ಅತಿ ದೊಡ್ಡ 4ಜಿ ಹೆಜ್ಜೆಗುರುತಾಗಿದೆ.

ಕರ್ನಾಟಕದಲ್ಲಿ ಜಿಯೋ 2.21 ಕೋಟಿಗೂ ಅಧಿಕ ಗ್ರಾಹಕರ ನೆಲೆಯನ್ನು ಹೊಂದಿದೆ ಮತ್ತು ಪ್ರತಿ ಜಿಲ್ಲೆಯಲ್ಲಿಯೂ ಮತ್ತಷ್ಟು ಚಂದಾದಾರ ಸೇರ್ಪಡೆಯನ್ನು ಮುಂದುವರಿಸಿದೆ.

ರಿಲಯನ್ಸ್ ಜಿಯೋದ 4ಜಿ ನೆಟ್‌ವರ್ಕ್ ವೇಗ ಅಲ್ಪಮಟ್ಟದಲ್ಲಿ ಹೆಚ್ಚಳ ಕಂಡಿದೆ. ಇದು ತನ್ನ ಅತಿ ಸಮೀಪದ ಪ್ರತಿಸ್ಪರ್ಧಿ ವೊಡಾಫೋನ್ ಐಡಿಯಾಕ್ಕಿಂತ ಮೂರು ಪಟ್ಟು ಅಧಿಕವಾಗಿದೆ. ವೊಡಾಫೋನ್ ಐಡಿಯಾ ಜೂನ್ ತಿಂಗಳಲ್ಲಿ ಸರಾಸರಿ 6.5 ಎಂಬಿಪಿಎಸ್ ಡೌನ್‌ಲೋಡ್ ವೇಗ ಪ್ರದರ್ಶಿಸಿದೆ.

English summary
Reliance Jio maintained the top position in the 4G speed chart with a 20.9 megabit per second (Mbps) average download rate in September, while Vodafone Idea topped in the upload segment with 7.2 Mbps data speed, as per telecom regulator Trai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X