ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೂನ್‌ ವರದಿ: 4ಜಿ ಡೌನ್‌ಲೋಡ್ ವೇಗದಲ್ಲಿ ಜಿಯೋ ನಂ.1

|
Google Oneindia Kannada News

ನವದೆಹಲಿ, ಜುಲೈ 11: ಪ್ರತಿ ಸೆಕೆಂಡ್‌ಗೆ ಸರಾಸರಿ 21.9 ಮೆಗಾಬೈಟ್ ಡೌನ್‌ಲೋಡ್ ವೇಗ ಕಾಯ್ದುಕೊಳ್ಳುವ ಮೂಲಕ 4ಜಿ ವಿಭಾಗದಲ್ಲಿ ಜೂನ್ ತಿಂಗಳಲ್ಲಿಯೂ ರಿಲಯನ್ಸ್ ಜಿಯೋ ತನ್ನ ಪಾರಮ್ಯ ಮೆರೆದಿದೆ. ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯಲ್ಲಿ, 4ಜಿ ವಿಭಾಗದಲ್ಲಿ ಜಿಯೋ ತನ್ನ ನಾಯಕತ್ವವನ್ನು ಮುಂದುವರಿಸಿದೆ. ಇನ್ನು 6.2 ಎಂಬಿಪಿಎಸ್ ಡೇಟಾ ವೇಗ ಹೊಂದಿರುವ ವೊಡಾಫೋನ್ ಐಡಿಯಾ ಅಪ್‌ಲೋಡ್ ವಿಭಾಗದಲ್ಲಿ ಮೊದಲ ಸ್ಥಾನವನ್ನು ಕಾಯ್ದುಕೊಂಡಿದೆ.

ರಿಲಯನ್ಸ್ ಜಿಯೋದ 4ಜಿ ನೆಟ್‌ವರ್ಕ್ ವೇಗ ಅಲ್ಪಮಟ್ಟದಲ್ಲಿ ಹೆಚ್ಚಳ ಕಂಡಿದೆ. ಇದು ತನ್ನ ಅತಿ ಸಮೀಪದ ಪ್ರತಿಸ್ಪರ್ಧಿ ವೊಡಾಫೋನ್ ಐಡಿಯಾಕ್ಕಿಂತ ಮೂರು ಪಟ್ಟು ಅಧಿಕವಾಗಿದೆ. ವೊಡಾಫೋನ್ ಐಡಿಯಾ ಜೂನ್ ತಿಂಗಳಲ್ಲಿ ಸರಾಸರಿ 6.5 ಎಂಬಿಪಿಎಸ್ ಡೌನ್‌ಲೋಡ್ ವೇಗ ಪ್ರದರ್ಶಿಸಿದೆ.

ಏರ್‌ಟೆಲ್ 4ಜಿಯ ವೇಗ ಕೊಂಚಮಟ್ಟಿಗೆ ಸುಧಾರಣೆಯಾಗಿದೆ. ಆದರೆ ಅದು 5 ಎಂಬಿಪಿಎಸ್ ವೇಗದೊಂದಿಗೆ ಅತ್ಯಂತ ಕೆಳಗಿನ ಸ್ಥಾನದಲ್ಲಿಯೇ ಉಳಿದುಕೊಂಡಿದೆ ಎಂದು ಟ್ರಾಯ್ ಗುರುವಾರ ಬಿಡುಗಡೆ ಮಾಡಿರುವ ವರದಿ ತಿಳಿಸಿದೆ.

Jio tops 4G chart with 21.9 mbps download speed in June month

ಡೌನ್‌ಲೋಡ್ ವೇಗವು ಗ್ರಾಹಕರು ಅಂತರ್ಜಾಲದಿಂದ ಮಾಹಿತಿಗಳನ್ನು ಪಡೆದುಕೊಳ್ಳಲು ನೆರವಾಗುತ್ತದೆ. ಅಪ್‌ಲೋಡ್ ವೇಗವು ತಮ್ಮ ಸಂಪರ್ಕದಲ್ಲಿರುವವರಿಗೆ ಚಿತ್ರಗಳು ಮತ್ತು ವಿಡಿಯೋಗಳನ್ನು ತ್ವರಿತವಾಗಿ ರವಾನಿಸಲು ನೆರವಾಗುತ್ತದೆ.

ಟ್ರಾಯ್ ಪ್ರಕಾರ, ವೊಡಾಫೋನ್ ಐಡಿಯಾ 6.2 ಎಂಬಿಪಿಎಸ್ ಸರಾಸರಿ ಅಪ್‌ಲೋಡ್ ವೇಗ ಹೊಂದಿತ್ತು. 4.8 ಎಂಬಿಪಿಎಸ್ ವೇಗ ಇರುವ ರಿಲಯನ್ಸ್ ಜಿಯೋ ನಂತರದ ಸ್ಥಾನದಲ್ಲಿದ್ದರೆ, ಭಾರ್ತಿ ಏರ್‌ಟೆಲ್ 3.9 ಎಂಬಿಪಿಎಸ್ ವೇಗದೊಂದಿಗೆ ಕೊನೆಯ ಸ್ಥಾನದಲ್ಲಿದೆ.

ಸರ್ಕಾರಿ ಸ್ವಾಮ್ಯದ ದೂರಸಂರ್ಪಕ ಸಂಸ್ಥೆ ಬಿಎಸ್‌ಎನ್‌ಎಲ್, ಆಯ್ದ ಪ್ರದೇಶಗಳಲ್ಲಿ 4ಜಿ ಸಂಪರ್ಕವನ್ನು ಕಲ್ಪಿಸಿದೆ. ಆದರೆ, ಅದರ ನೆಟ್‌ವರ್ಕ್ ವೇಗವನ್ನು ಟ್ರಾಯ್ ಚಾರ್ಟ್‌ನಲ್ಲಿ ನಮೂದಿಸಿಲ್ಲ.

ಮೈಸ್ಪೀಡ್ ಆಪ್‌ನ ಸಹಾಯದೊಂದಿಗೆ ದೇಶಾದ್ಯಂತ ರಿಯಲ್ ಟೈಮ್ ಆಧಾರದಲ್ಲಿ ದತ್ತಾಂಶಗಳನ್ನು ಸಂಗ್ರಹಿಸುವ ಟ್ರಾಯ್, ಅದರ ಮೂಲಕ ಸರಾಸರಿ ವೇಗವನ್ನು ಲೆಕ್ಕ ಹಾಕುತ್ತದೆ.

English summary
Reliance Jio continues to maintain leadership position in the 4G internet segment with 21.9 megabit per second average download speed in June.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X