ಜಿಂದಾಲ್‌ ಗ್ರೂಪ್‌ನಿಂದ ಕರ್ನಾಟಕದಲ್ಲಿ ಒಂದು ಲಕ್ಷ ಕೋಟಿ ಹೂಡಿಕೆ ಭರವಸೆ

ಬೆಂಗಳೂರು, ನ.2- ಕರ್ನಾಟಕದಲ್ಲಿ ಮುಂದಿನ ಐದು ವರ್ಷದೊಳಗೆ ಒಂದು ಲಕ್ಷ ಕೋಟಿ ಬಂಡವಾಳ ಹೂಡಿಕೆ ಮಾಡುವ ಯೋಜನೆಯನ್ನು ಹಾಕಿಕೊಂಡಿದ್ದೇವೆ ಎಂದು ಜೆಎಸ್‍ಡಬ್ಲ್ಯೂ ಗ್ರೂಪ್‌ನ ಅಧ್ಯಕ್ಷ ಸಜ್ಜನ್ ಜಿಂದಾಲ್ ಘೋಷಿಸಿದ್ದಾರೆ.

ಅರಮನೆ ಮೈದಾನದಲ್ಲಿ ಇಂದಿನಿಂದ ಆರಂಭವಾದ ಜಾಗತಿಕ ಹೂಡಿಕೆದಾರರ ಸಮಾವೇಶ-2022ನಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಉಕ್ಕು, ಹಸಿರು ಇಂಧನ, ಬಂದರು ಸೇರಿದಂತೆ ವಿವಿಧ ವಲಯಗಳಲ್ಲಿ ಹೂಡಿಕೆ ಮಾಡಲಾಗುವುದು ಎಂದು ಅವರು ಘೋಷಿಸಿದರು.

ಈಗಾಗಲೇ ಜಿಂದಾಲ್ ಕಂಪನಿ ರಾಜ್ಯದ ವಿವಿಧ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಅಕ ಕೋಟಿ ಬಂಡವಾಳ ಹೂಡಿಕೆ ಮಾಡಿದೆ. ಮುಂದಿನ 5 ವರ್ಷದೊಳಗೆ ಇಷ್ಟೇ ಪ್ರಮಾಣದ ಬಂಡವಾಳವನ್ನು ಹೂಡಿಕೆ ಮಾಡಲಿದ್ದೇವೆ ಎಂದು ಹೇಳಿದರು.

JSW Group promises to invest Rs 1 lakh crore in Karnataka

ಜೆಎಸ್‍ಡಬ್ಲ್ಯೂ ಕಂಪನಿಯು ಕರ್ನಾಟಕದಲ್ಲಿ ಉಕ್ಕು ಘಟಕ, ಗ್ರೀನ್ ಎನರ್ಜಿ, ಬಂದರು, ವಿಮಾನ ನಿಲ್ದಾಣ, ಉತ್ಪಾದನಾ ವಲಯ ಸೇರಿದಂತೆ ಮತ್ತಿತರ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆ ಮಾಡಿದೆ. ವಿಶ್ವದಲ್ಲೇ 3ನೇ ಅತಿದೊಡ್ಡ ಉಕ್ಕು ಘಟಕ ಕರ್ನಾಟಕದಲ್ಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕ ಇಂದು ಎಲ್ಲ ಕ್ಷೇತ್ರಗಳಲ್ಲೂ ಜಾಗತಿಕ ನಾಯಕನಾಗಿ ಹೊರಹೊಮ್ಮುತ್ತಿದೆ. ಕಾರಣ ಇಲ್ಲ ವಿಶ್ವ ದರ್ಜೆಯ ಮೂಲಭೂತ ಸೌಕರ್ಯಗಳಿವೆ. ಹೀಗಾಗಿ ಉದ್ಯಮಿಗಳು ಈ ರಾಜ್ಯದತ್ತ ದೊಡ್ಡ ಸಂಖ್ಯೆಯಲ್ಲಿ ಬರುತ್ತಿದ್ದಾರೆ ಎಂದು ಪ್ರಶಂಸಿಸಿದರು.

ನಮ್ಮ ಚಿಕ್ಕಪ್ಪನವರಾದ ಎಸ್.ಆರ್.ಜಿಂದಾಲ್ ಅವರು 30 ವರ್ಷಗಳ ಹಿಂದೆ ಎಲ್ಲಿ ಬಂಡವಾಳ ಹೂಡಿಕೆ ಮಾಡಬೇಕೆಂದು ಆಲೋಚಿಸುತ್ತಿದ್ದರು. ಅನೇಕ ರಾಜ್ಯಗಳಲ್ಲಿ ಸುತ್ತಾಟ ನಡೆಸಿ ಎಲ್ಲಿಯೂ ಬಂಡವಾಳ ಹೂಡಿಕೆಗೆ ಮೂಲಭೂತ ಸೌಕರ್ಯಗಳು ಸಿಗುತ್ತಿಲ್ಲ ಎಂದು ಯೋಚಿಸುತ್ತಿದ್ದಾಗ ಕರ್ನಾಟಕ ಕೈಗಾರಿಕಾ ಇಲಾಖೆಯ ಕಾರ್ಯದರ್ಶಿಯೊಬ್ಬರು, ನಮ್ಮ ರಾಜ್ಯಕ್ಕೆ ಬಂದರೆ ಎಲ್ಲ ರೀತಿಯ ಮೂಲಸೌಕರ್ಯಗಳನ್ನು ಕೊಡುವುದಾಗಿ ಆಶ್ವಾಸನೆ ಕೊಟ್ಟಿದ್ದರು. ನಾವು ತಕ್ಷಣವೇ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡೆವು. ನಿರೀಕ್ಷೆಗೂ ಮೀರಿ ಸರ್ಕಾರದಿಂದ ಸ್ಪಂದನೆ ಸಿಕ್ಕಿತು. ಜೆಎಸ್‍ಡಬ್ಲ್ಯೂಗೆ ಕರ್ನಾಟಕವೇ ಅತ್ಯಂತ ನೆಚ್ಚಿನ ಹೂಡಿಕೆ ತಾಣವಾಗಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+